ಜಿಂಬಾಬ್ವೆ ವಿರುದ್ಧ ಟಿ20 ಸರಣಿ: ಅಭಿಷೇಕ್ ಶರ್ಮಾ ಸ್ಫೋಟಕ ಶತಕ, ಟೀಂ ಇಂಡಿಯಾ ದಾಖಲೆ ಮೊತ್ತ

Date:

ಟಿ20 ವಿಶ್ವಕಪ್‌ ವಿಜೇತರಾಗಿ ಆಡಿದ ಮೊದಲ ಪಂದ್ಯದಲ್ಲಿಯೇ ಜಿಂಬಾಬ್ವೆ ವಿರುದ್ಧ ಸೋತ ಟೀ ಇಂಡಿಯಾಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿತ್ತು. ಟೀಕೆಗಳನ್ನೆ ಅಸ್ತ್ರ ಮಾಡಿಕೊಂಡ ಭಾರತ ತಂಡದ ಆಟಗಾರರು  ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭರ್ಜರಿ ಆಟವಾಡಿ ಅತಿಥೇಯ ತಂಡಕ್ಕೆ 235 ರನ್‌ ಗುರಿ ನೀಡಿದ್ದಾರೆ.

ಅಂತಾರಾಷ್ಟ್ರೀಯ ಪಾದಾರ್ಪಣೆ ಮಾಡಿದ ಎರಡನೇ ಪಂದ್ಯದಲ್ಲಿಯೇ ಪಂಜಾಬ್‌ನ 23 ವರ್ಷದ ಉದಯೋನ್ಮುಖ ಆಟಗಾರ ಅಭಿಷೇಕ್‌ ಶರ್ಮಾ ಸಿಕ್ಸರ್‌ ಬೌಂಡರಿಗಳ ಮೂಲಕ ಜಿಂಬಾಬ್ವೆ ಬೌಲರ್‌ಗಳ ಬೆವರಿಳಿಸಿದರು. ಕೇವಲ 47 ಚೆಂಡುಗಳಲ್ಲಿ 8 ಭರ್ಜರಿ ಸಿಕ್ಸರ್‌ ಹಾಗೂ 7 ಆಕರ್ಷಕ ಬೌಂಡರಿಗಳೊಂದಿಗೆ 100 ರನ್‌ ಸಿಡಿಸಿದರು.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡು ಆರಂಭಿಕನಾಗಿ ಕಣಕ್ಕಿಳಿದ ಶುಭಮನ್‌ ಗಿಲ್‌ ಕೇವಲ ಎರಡು ರನ್‌ಗಳಿಗೆ ಔಟಾಗಿ ಪೆವಿಲಿಯನ್‌ಗೆ ತೆರಳಿದರು. ಅನಂತರ ಬ್ಯಾಟಿಂಗ್‌ ಅಬ್ಬರಿಸಿದವರು ಅಭಿಷೇಕ್‌ ಶರ್ಮಾ ಹಾಗೂ ಮತ್ತೊಬ್ಬ ಉದಯೋನ್ಮುಖ ಆಟಗಾರ ರುತುರಾಜ್‌ ಗಾಯಕ್‌ವಾಡ್. ಇವರಿಬ್ಬರು ಎರಡನೇ ವಿಕೆಟ್ ಜೊತೆಯಾಟದಲ್ಲಿ 76 ಚೆಂಡುಗಳಲ್ಲಿ 137 ರನ್‌ ಸ್ಫೋಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್ ವಿಜಯೋತ್ಸವದ ಮೆರವಣಿಗೆ: ಸಾವಿರಾರು ಅಭಿಮಾನಿಗಳೊಂದಿಗೆ ಸಂಭ್ರಮಿಸಿದ ಟೀಂ ಇಂಡಿಯಾ

ಅಜೇಯರಾಗಿ ಉಳಿದ ರುತುರಾಜ್‌ ಗಾಯಕ್‌ವಾಡ್ 47 ಎಸೆತಗಳಲ್ಲಿ 11 ಬೌಂಡರಿ ಹಾಗೂ 1 ಸಿಕ್ಸರ್‌ನೊಂದಿಗೆ 77 ರನ್‌ ಬಾರಿಸಿದರು.

ಅಭಿಷೇಕ್‌ ಶರ್ಮಾ ಔಟಾದ ನಂತರ ಕೊನೆಯ 6 ಓವರ್‌ಗಳಲ್ಲಿ ಆಡಲು ಬಂದ ಯುವ ಪ್ರತಿಭೆ ರಿಂಕು ಸಿಂಗ್ ಕೂಡ ಅಬ್ಬರಿಸಿದರು. ಕೇವಲ 22 ಚೆಂಡುಗಳಲ್ಲಿ ಅಮೋಘ 5 ಸಿಕ್ಸರ್ ಹಾಗೂ 2 ಬೌಂಡರಿಯೊಂದಿಗೆ ಅಜೇಯ 48 ರನ್‌ ಸಿಡಿಸಿದರು.

ಜಿಂಬಾಂಬ್ವೆಯ 7 ಬೌಲರ್‌ಗಳು ಬೌಲ್‌ ಮಾಡಿದರೂ ಅಭಿಷೇಕ್‌, ರುತುರಾಜ್‌ ಹಾಗೂ ರಿಂಕು ಆರ್ಭಟವನ್ನು ತಡೆಯಲು ಸಾಧ್ಯವಾಗಲಿಲ್ಲ. ಗುರಿ ಬೆನ್ನಟ್ಟಿದ ಜಿಂಬಾಬ್ವೆ ಇತ್ತೀಚಿನ ವರದಿ ಬಂದಾಗ 3.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 41 ರನ್‌ ಗಳಿಸಿತ್ತು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...