ಐಪಿಎಲ್ 2024 | ಅಭಿಷೇಕ್ ಪೊರೆಲ್ ‘ಇಂಪ್ಯಾಕ್ಟ್‌’: ಪಂಜಾಬ್‌ ಗೆಲುವಿಗೆ 175 ರನ್‌ಗಳ ಗುರಿ ನೀಡಿದ ಡೆಲ್ಲಿ

Date:

17ನೇ ಆವೃತ್ತಿಯ ಐಪಿಎಲ್​ನ ಮೊದಲ ಡಬಲ್ ಹೆಡರ್ ಇಂದು ಆರಂಭಗೊಂಡಿದ್ದು, ಒಂದೇ ದಿನ ಎರಡೆರಡು ಪಂದ್ಯಗಳು ನಡೆಯುತ್ತಿವೆ. ದಿನದ ಮೊದಲ ಪಂದ್ಯದಲ್ಲಿ ಮುಲ್ಲನ್‌ಪುರದ ಮಹಾರಾಜ ಯದ್ವೇಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್, ಮೊದಲು ಬೌಲಿಂಗ್ ನಡೆಸಲು ನಿರ್ಧರಿಸಿ, ರಿಷಭ್ ಪಂತ್ ತಂಡವನ್ನು ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರೂ ಕೂಡ ಕೊನೆಯ ಓವರ್‌ ಎಸೆದ ಹರ್ಷಲ್ ಪಟೇಲ್ ಬೌಲಿಂಗ್‌ನಲ್ಲಿ ‘ಇಂಪ್ಯಾಕ್ಟ್‌ ಪ್ಲೇಯರ್’ ಅಭಿಷೇಕ್ ಪೊರೆಲ್ ಚಚ್ಚಿದ ಭರ್ಜರಿ 25 ರನ್‌ಗಳ ನೆರವಿನಿಂದ ಸವಾಲಿನ ಮೊತ್ತ ನೀಡುವಲ್ಲಿ ಸಫಲವಾಯಿತು. ಡೆಲ್ಲಿ ಕ್ಯಾಪಿಟಲ್ಸ್‌ ನಿಗದಿತ 20 ಓವರ್‌ಗಳಲ್ಲಿ 174 ರನ್ ದಾಖಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ಆರಂಭಿಕ ಆಘಾತಕ್ಕೆ ಒಳಗಾಯಿತು. ಪಂಜಾಬ್ ಕಿಂಗ್ಸ್ ವೇಗದ ಬೌಲರ್ ಅರ್ಷದೀಪ್ ಸಿಂಗ್ ಮಿಚೆಲ್ ಮಾರ್ಷ್ ಅವರನ್ನು ಔಟ್ ಮಾಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮೊದಲ ಹೊಡೆತ ನೀಡಿದರು. ಮಾರ್ಷ್ ಮತ್ತು ಡೇವಿಡ್ ವಾರ್ನರ್ ಡೆಲ್ಲಿಗೆ ವೇಗದ ಆರಂಭ ನೀಡಿದರು ಮತ್ತು ಮೂರು ಓವರ್‌ಗಳಲ್ಲಿ ಸ್ಕೋರ್ ಅನ್ನು 30 ದಾಟಿಸಿದರು. ಆದರೆ ನಾಲ್ಕನೇ ಓವರ್ ಬೌಲ್ ಮಾಡಲು ಬಂದ ಅರ್ಷದೀಪ್ ಆ ಓವರ್ ನ ಎರಡನೇ ಎಸೆತದಲ್ಲಿಯೇ 12 ಎಸೆತಗಳಲ್ಲಿ 20 ರನ್ ಗಳಿಸಿದ್ದ ಮಾರ್ಷ್ ವಿಕೆಟ್ ಉರುಳಿಸಿದರು.

ವಾರ್ನರ್ ಕೂಡ 29 ರನ್ ಗಳಿಸಿ ಪೆವಿಲಿಯನ್​ಗೆ ಮರಳಿದರು. ವಾರ್ನರ್ ಔಟಾದ ಬಳಿಕ ನಾಯಕ ರಿಷಭ್ ಪಂತ್, 15 ತಿಂಗಳ ನಂತರ ಮೈದಾನಕ್ಕೆ ಮರಳಿದರು. ಹೊಡಿಬಡಿ ಆಟದಲ್ಲಿ ಗುರುತಿಸಿಕೊಂಡಿರುವ ಪಂತ್, ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ನಾಯಕ ರಿಷಭ್ ಪಂತ್ 13 ಎಸೆತಗಳಲ್ಲಿ ಎರಡು ಬೌಂಡರಿಗಳ ನೆರವಿನಿಂದ 18 ರನ್ ಗಳಿಸಿ ಔಟಾದರು.

ಹೋಪ್ 25 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳ ನೆರವಿನಿಂದ 33 ರನ್ ಗಳಿಸಿ ಔಟಾದರೆ, ರಿಕಿ ಭುಯಿ ಮೂರು ರನ್ ಗಳಿಸಿ ಔಟಾದರು. ಟ್ರಿಸ್ಟ್ ಸ್ಟಬ್ಸ್ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. 13 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 21 ರನ್ ಬಾರಿಸಿದ್ದ ಅಕ್ಷರ್ ಪಟೇಲ್ ರನೌಟ್​ಗೆ ಬಲಿಯಾದರು.

ಪಂಜಾಬ್ ಪರ ಕೊನೆಯ ಓವರ್‌ ಎಸೆದ ಹರ್ಷಲ್ ಪಟೇಲ್ ಬೌಲಿಂಗ್‌ನಲ್ಲಿ ‘ಇಂಪ್ಯಾಕ್ಟ್‌ ಪ್ಲೇಯರ್’ ಅಭಿಷೇಕ್ ಪೊರೆಲ್ ಚಚ್ಚಿದ 25 ರನ್‌ಗಳ ನೆರವಿನಿಂದ ಸವಾಲಿನ ಮೊತ್ತ ನೀಡುವಲ್ಲಿ ಸಫಲವಾಯಿತು. ಪೊರೆಲ್ 10 ಎಸೆತಗಳಲ್ಲಿ 2 ಸಿಕ್ಸ್, 4 ಬೌಂಡರಿ ಇರುವ 32 ರನ್ ದಾಖಲಿಸಿದ ಪರಿಣಾಮ, ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್ ದಾಖಲಿಸುವಲ್ಲಿ ಸಫಲವಾಯಿತು.

ಇದನ್ನು ಓದಿದ್ದೀರಾ? ಬಿಜೆಪಿಯವರನ್ನು ದ್ವೇಷಿಸಬೇಡಿ; ಅವರು ನಮ್ಮ ಸಹೋದರರು: ಜೈಲಿನಿಂದ ಕೇಜ್ರಿವಾಲ್ ಸಂದೇಶ

ಪಂಜಾಬ್ ಪರ ಬೌಲಿಂಗ್‌ನಲ್ಲಿ ಅರ್ಷದೀಪ್ ಸಿಂಗ್ ಹಾಗೂ ಹರ್ಷಲ್ ಪಟೇಲ್ 2 ವಿಕೆಟ್ ಪಡೆಯುವಲ್ಲಿ ಸಫಲರಾದರೆ, ರಬಾಡಾ, ಚಾಹರ್ ಹಾಗೂ ಬ್ರಾರ್ ತಲಾ ಒಂದು ವಿಕೆಟ್ ಗಳಿಸಿದರು. ಹರ್ಷಲ್ ಪಟೇಲ್ 2 ವಿಕೆಟ್ ಪಡೆಯುವಲ್ಲಿ ಸಫಲರಾದರೂ ಕೂಡ 47 ರನ್ ನೀಡಿ, ದುಬಾರಿ ಎನಿಸಿಕೊಂಡರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...