ಟಿ20 ವಿಶ್ವಕಪ್ | ಸಂಘಟಿತ ಪ್ರದರ್ಶನ : ಬಲಿಷ್ಠ ನ್ಯೂಝಿಲ್ಯಾಂಡ್‌ಗೆ ಆಘಾತ ನೀಡಿದ ಅಫ್ಘಾನಿಸ್ತಾನ

Date:

ಗಯಾನಾದಲ್ಲಿ ಜೂನ್ 8ರಂದು ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ರೋಚಕ ಪಂದ್ಯದಲ್ಲಿ ಬಲಿಷ್ಠ ನ್ಯೂಝಿಲ್ಯಾಂಡ್‌ ತಂಡಕ್ಕೆ ಆಘಾತಕಾರಿ ಸೋಲುಣಿಸಿರುವ ಅಫ್ಘಾನಿಸ್ತಾನ ತಂಡ, ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ನ್ಯೂಝಿಲ್ಯಾಂಡ್‌ ಅನ್ನು ಸೋಲಿಸಿದ್ದು, ಇತಿಹಾಸ ಬರೆದಿದೆ.

ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ರಹ್ಮಾನುಲ್ಲಾ ಗುರ್ಬಾಝ್(80) ಅವರ ಅರ್ಧಶತಕದ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಕೇನ್ ವಿಲಿಯಮ್ಸನ್‌ ನೇತೃತ್ವದ ನ್ಯೂಝಿಲ್ಯಾಂಡ್‌ ತಂಡ,  ನಾಟಕೀಯ ಕುಸಿತ ಕಂಡು 15.2 ಓವರ್ ಗಳಲ್ಲಿ ಕೇವಲ 75 ರನ್​ಗಳಿಗೆ ಆಲೌಟಾ ಆಗಿ, 84 ರನ್​ಗಳ ಹೀನಾಯ ಸೋಲು ಅನುಭವಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರ್ಬಾಝ್ ಅವರ ಅಮೋಘ ಅರ್ಧಶತಕವಲ್ಲದೇ, ಬೌಲಿಂಗ್‌ನಲ್ಲಿ ಅಫ್ಘಾನಿಸ್ತಾನ ತಂಡದ ಪ್ರಮುಖ ಬೌಲರ್ ರಶೀದ್ ಖಾನ್ ಮತ್ತು ಫಝಲುಲ್ ಹಕ್ ಫಾರೂಕಿ ಅವರ ನಾಲ್ಕು ವಿಕೆಟ್‌ಗಳ ಗಳಿಕೆಯ ನೆರವಿನಿಂದ ಅಫ್ಘಾನಿಸ್ತಾನ ತಂಡವು ತಮ್ಮ ‘ಸಿ’ ಗುಂಪಿನ ಪಂದ್ಯದಲ್ಲಿ ನ್ಯೂಝಿಲ್ಯಾಂಡ್‌ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿತು.

ಅಫ್ಘಾನಿಸ್ತಾನ ನೀಡಿದ್ದ 160 ರನ್‌ಗಳ ಗುರಿಯನ್ನು ಬೆನ್ನಟ್ಟಿದ ನ್ಯೂಝಿಲ್ಯಾಂಡ್‌ ನಿಯಮಿತವಾಗಿ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಹೋಯಿತು ಮತ್ತು ಅಂತಿಮವಾಗಿ 15.2 ಓವರ್‌ಗಳಲ್ಲಿ ಕೇವಲ 76 ರನ್‌ಗಳಿಗೆ ಸರ್ವಪತನ ಕಂಡಿತು. ನ್ಯೂಝಿಲ್ಯಾಂಡ್‌ ಪರ ಗ್ಲೆನ್ ಫಿಲಿಪ್ಸ್ 18 ರನ್ ಮತ್ತು ಮ್ಯಾಟ್ ಹೆನ್ರಿ 12 ರನ್ ಗಳಿಸಿದ್ದು ಬಿಟ್ಟರೆ, ಉಳಿದ ಯಾವ ಬ್ಯಾಟರ್‌ಗಳೂ ಎರಡಂಕಿ ಮೊತ್ತ ದಾಟಲು ವಿಫಲರಾದರು. ಇದು ಕೇನ್ ವಿಲಿಯಮ್ಸನ್ ನಾಯಕತ್ವದ ಕಿವೀಸ್ ತಂಡದ ಸೋಲಿಗೆ ಕಾರಣವಾಯಿತು.

ಬೌಲಿಂಗ್‌ನಲ್ಲಿ ಅಫ್ಘಾನಿಸ್ತಾನ ತಂಡದ ಪರ ರಶೀದ್ ಖಾನ್ 4 ಓವರ್‌ಗಳಲ್ಲಿ 17 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಫಝಲುಲ್ ಹಕ್ ಫಾರೂಕಿ 3.2 ಓವರ್‌ಗಳಲ್ಲಿ 17 ರನ್ ನೀಡಿ 4 ವಿಕೆಟ್ ಪಡೆದರು. ಅಲ್ಲದೇ, ಆಲ್‌ರೌಂಡರ್ ಮೊಹಮ್ಮದ್ ನಬಿ ಕೂಡ ಎರಡು ವಿಕೆಟ್ ಪಡೆದು ಮಿಂಚಿದರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನಿಸ್ತಾನ ತಂಡದ ಬ್ಯಾಟಿಂಗ್ ಆರಂಭಿಸಿದ ರಹ್ಮಾನುಲ್ಲಾ ಗುರ್ಬಾಝ್ ಮತ್ತು ಇಬ್ರಾಹಿಂ ಝದ್ರಾನ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 14.3 ಓವರ್‌ಗಳಲ್ಲಿ 103 ರನ್‌ಗಳ ಜೊತೆಯಾಟ ನಡೆಸಿದರು.

ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್ | ಪಾಕ್‌ಗೆ ಶಾಕ್ ನೀಡಿದ ಅಮೆರಿಕ: ಸೂಪರ್ ಓವರ್‌ನಲ್ಲಿ ಐತಿಹಾಸಿಕ ಗೆಲುವು

ಗುರ್ಬಾಝ್ 56 ಎಸೆತಗಳಲ್ಲಿ 5 ಬೌಂಡರಿ ಹಾಗೂ 5 ಬೌಂಡರಿಗಳ ಸಮೇತ 80 ರನ್ ಬಾರಿಸಿದರೆ, ಇಬ್ರಾಹಿಂ ಝದ್ರಾನ್ 41 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಮೂಲಕ 44 ರನ್ ಗಳಿಸಿದರು. ಅಝ್ಮತುಲ್ಲಾ ಓಮರ್‌ಝಾಯ್ 22 ರನ್ ಗಳಿಸಿ ತಂಡದ ಮೊತ್ತವನ್ನು 6 ವಿಕೆಟ್‌ಗೆ 159 ರನ್‌ಗಳಿಗೆ ಕೊಂಡೊಯ್ದರು. ಬೌಲಿಂಗ್‌ನಲ್ಲಿ ನ್ಯೂಜಿಲೆಂಡ್ ಪರ ಟ್ರೆಂಟ್ ಬೌಲ್ಟ್ 4 ಓವರ್‌ಗಳಲ್ಲಿ 22 ರನ್ ನೀಡಿ 2 ವಿಕೆಟ್ ಪಡೆದರೆ, ಮ್ಯಾಟ್ ಹೆನ್ರಿ 4 ಓವರ್‌ಗಳಲ್ಲಿ 37 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಲಾಕಿ ಫರ್ಗ್ಯುಸನ್ ಒಂದು ವಿಕೆಟ್ ಕಬಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...