ಐಪಿಎಲ್‌ 2023 | ಅಬ್ಬರಿಸಿದ ಋತುರಾಜ್, ಕಾನ್ವೆ; ಲಖನೌ ಗೆಲುವಿಗೆ ಸವಾಲಿನ ಮೊತ್ತ

Date:

ಆರಂಭಿಕ ಆಟಗಾರರಾದ ಋತುರಾಜ್‌ ಹಾಗೂ ಡಿವೋನ್‌ ಕಾನ್ವೆ ಅವರ ಭರ್ಜರಿ ಬ್ಯಾಟಿಂಗ್‌ನಿಂದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಲಖನೌ ಸೂಪರ್‌ ಜೈಂಟ್ಸ್ ವಿರುದ್ಧ 7 ವಿಕೆಟ್ ನಷ್ಟಕ್ಕೆ 217 ರನ್‌ಗಳ ಭರ್ಜರಿ ಮೊತ್ತ ದಾಖಲಿಸಿದೆ.

ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ಲಖನೌ ವಿರುದ್ಧದ ಐಪಿಎಲ್‌ 16ನೇ ಆವೃತ್ತಿಯ ಆರನೇ ಪಂದ್ಯದಲ್ಲಿ ಋತುರಾಜ್‌ ಹಾಗೂ ಕಾನ್ವೆ ಎರಡನೇ ಓವರ್‌ನಿಂದಲೇ ಬ್ಯಾಟ್‌ ಬೀಸಲು ಶುರು ಮಾಡಿದರು. ಕಾನ್ವೆ, ಐದನೇ ಓವರ್‌ನಲ್ಲಂತೂ ಕೆ ಗೌತಮ್‌ ಬೌಲಿಂಗ್‌ನಲ್ಲಿ ಮೂರು ಸಿಕ್ಸರ್‌ ಸ್ಫೋಟಿಸಿದರು.

ಇವರಿಬ್ಬರ ಜೋಡಿ ಮಾರ್ಕ್‌ ವುಡ್‌ ಬೌಲಿಂಗ್‌ನಲ್ಲಿ ಆರನೇ ಓವರ್‌ನಲ್ಲಿ 19 ಹಾಗೂ ಎಂಟನೇ ಓವರ್‌ನಲ್ಲಿ 15 ರನ್‌ ಬಾರಿಸಿದರು. ಹತ್ತನೆ ಓವರ್‌ನಲ್ಲಿ ರವಿ ಬಿಷ್ಣೋಯಿ ಬೌಲಿಂಗ್‌ನಲ್ಲಿ ಔಟಾದ ಋತುರಾಜ್‌ 31 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಮೂರು ಬೌಂಡರಿಗಳೊಂದಿಗೆ 57 ರನ್‌ ಸಿಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿವೋನ್‌ ಕಾನ್ವೆ ಕೂಡ ತಾವೇನು ಕಡಿಮೆಯಿಲ್ಲದಂತೆ 29 ಚಂಡುಗಳಲ್ಲಿ 5 ಬೌಂಡರಿ, 2 ಅಮೋಘ ಸಿಕ್ಸರ್‌ನೊಂದಿಗೆ 47 ರನ್‌ ಪೇರಿಸಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಲು ಬಂದ ಶಿವಂ ದುಬೆ ಕೇವಲ 16 ಚಂಡುಗಳಲ್ಲಿ 3 ಸೊಗಸಾದ ಸಿಕ್ಸರ್ ಹಾಗೂ ಒಂದು ಬೌಂಡರಿಯೊಂದಿಗೆ 27 ರನ್‌ ಕಲೆ ಹಾಕಿದರು.

ಆರನೇ ಕ್ರಮಾಂಕದಲ್ಲಿ ಆಗಮಿಸಿದ ಅಂಬಾಟಿ ರಾಯುಡು 14 ಚಂಡುಗಳಲ್ಲಿ 2 ಸಿಕ್ಸರ್‌ ಹಾಗೂ 2 ಬೌಂಡರಿ ಮೂಲಕ 27 ರನ್‌ ಗಳಿಸಿ ಕೊನೆಯಲ್ಲಿ ಪ್ರೇಕ್ಷಕರಿಗೆ ರಸದೌತಣ ನೀಡಿದರು. ನಾಯಕ ಧೋನಿ ಕೂಡ 3 ಎಸೆತಗಳಲ್ಲಿ 2 ಸಿಕ್ಸರ್‌ ಮೂಲಕ 12 ರನ್‌ ಸ್ಪೋಟಿಸಿದರು.

ಲಖನೌ ಪರ ರವಿ ಬಿಷ್ಣೋಯಿ 28/3 ಗಳಿಸಿ ಯಶಸ್ವಿ ಬೌಲರ್‌ ಎನಿಸಿದರೆ, ಮಾರ್ಕ್‌ವುಡ್‌ ಹಾಗೂ ಆವೇಶ್‌ ಖಾನ್‌ ತಲಾ ಒಂದೊಂದು ವಿಕೆಟ್ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...