ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್ರೌಂಡರ್ ಆ್ಯಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ 37 ವರ್ಷದ ರಸೆಲ್ ತಿಳಿಸಿದ್ದಾರೆ.
2026 ರ ಟಿ20 ವಿಶ್ವಕಪ್ಗೂ ಮುನ್ನ ನಿವೃತ್ತಿ ನೀಡಲು ನಿರ್ಧರಿಸಿದ್ದು, ಅದರಂತೆ ಜಮೈಕಾದ ಸಬೀನಾ ಪಾರ್ಕ್ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುತ್ತಿರುವುದಾಗಿ ರಸೆಲ್ ತಿಳಿಸಿದ್ದಾರೆ. ಸಬೀನಾ ಪಾರ್ಕ್ ರಸೆಲ್ ಅವರ ತವರು ಮೈದಾನವಾಗಿದ್ದು, ಹೀಗಾಗಿ ಈ ಮೈದಾನದಲ್ಲಿ ನಡೆಯಲಿರುವ ಪಂದ್ಯದ ಮೂಲಕ ವಿದಾಯ ಹೇಳಲು ಅವರು ಬಯಸಿದ್ದಾರೆ. ವಿಂಡೀಸ್ ಕ್ರಿಕೆಟ್ ಸಂಸ್ಥೆ ಸ್ಟಾರ್ ಆಟಗಾರನಿಗೆ ಗೌರವ ಸೂಚಿಸಲಿದೆ.
ಆ್ಯಂಡ್ರೆ ರಸೆಲ್ ತಮ್ಮ ನಿವೃತ್ತಿಯ ಬಗ್ಗೆ ಸಮಾಜಿಕ ತಾಣದಲ್ಲಿ ತಿಳಿಸಿದ್ದಾರೆ. ವೆಸ್ಟ್ ಇಂಡೀಸ್ ಪರ ಆಡುವುದು ನನಗೆ ದೊಡ್ಡ ವಿಷಯ. ಚಿಕ್ಕವನಿದ್ದಾಗ ಈ ಮಟ್ಟದ ಕ್ರಿಕೆಟ್ ಆಡಲು ಬಯಸಿದ್ದೆ. ಆದರೆ ಆಡುತ್ತೇನೆ ಎಂದು ಭಾವಿಸಿರಲಿಲ್ಲ. ಕ್ರಿಕೆಟ್ ಆಟ ನನಗೆ ಸ್ಪೂರ್ತಿ ನೀಡಿದೆ. ವೆಸ್ಟ್ ಇಂಡೀಸ್ ತಂಡದ ಜೆರ್ಸಿ ತೊಟ್ಟು ಮೈದಾನಕ್ಕೆ ಇಳಿಯುವುದು ದೊಡ್ಡ ಸಾಧನೆ. ಮನೆಯಲ್ಲಿ ಕುಟುಂಬ ಮತ್ತು ಸ್ನೇಹಿತರ ಜೊತೆ ಕಾಲ ಕಳೆಯಲು ನಾನು ಇಷ್ಟಪಡುತ್ತೇನೆ. ನಾನು ಇಷ್ಟ ಪಡುವ ಕ್ರಿಕೆಟ್ ಆಟದ ಮೂಲಕ ಮುಂದಿನ ಪೀಳಿಗೆಗೆ ಮಾದರಿಯಾಗಲು ಬಯಸುವೆ ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ವಿಜೃಂಭಣೆಯ ಹೊಸ್ತಿಲಲ್ಲಿ ಟೆಸ್ಟ್ ಕ್ರಿಕೆಟ್: ಮತ್ತೆ ಮರುಕಳಿಸಲಿರುವ ಇತಿಹಾಸ
2011 ರಲ್ಲಿ ಪಾಕಿಸ್ತಾನ ವಿರುದ್ದ ಕಣಕ್ಕಿಳಿಯುವ ಮೂಲಕ ವೆಸ್ಟ್ ಇಂಡೀಸ್ ಪರ ಟಿ20 ವೃತ್ತಿ ಆರಂಭಿಸಿದ್ದ ಆ್ಯಂಡ್ರೆ ರಸೆಲ್ ಈವರೆಗೆ 84 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 73 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಅವರು 3 ಅರ್ಧಶತಕಗೊಂದಿಗೆ 1078 ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್ನಲ್ಲಿ 61 ವಿಕೆಟ್ ಕಬಳಿಸಿ ಮಿಂಚಿದ್ದಾರೆ.
ಇನ್ನು 2011 ರಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್ ವೃತ್ತಿ ಆರಂಭಿಸಿದ್ದ ಆ್ಯಂಡ್ರೆ ರಸೆಲ್ ಈವರೆಗೆ ಆಡಿರುವುದು 56 ಪಂದ್ಯಗಳನ್ನು ಮಾತ್ರ. ಈ ವೇಳೆ 4 ಅರ್ಧಶತಕಗಳೊಂದಿಗೆ 1034 ರನ್ ಕಲೆಹಾಕಿದ್ದಾರೆ. ಇನ್ನು 55 ಏಕದಿನ ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 70 ವಿಕೆಟ್ಗಳನ್ನು ಸಹ ಕಬಳಿಸಿದ್ದಾರೆ.
ಇದೀಗ 14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಲು ಆ್ಯಂಡ್ರೆ ರಸೆಲ್ ನಿರ್ಧರಿಸಿದ್ದಾರೆ. ಇದಾಗ್ಯೂ ಮುಂಬರುವ ದಿನಗಳಲ್ಲಿ ಟಿ20 ಲೀಗ್ಗಳಲ್ಲಿ ಮುಂದುವರೆಯುವುದಾಗಿ ಅವರು ತಿಳಿಸಿದ್ದಾರೆ. ಅದರಂತೆ ಐಪಿಎಲ್. ಸಿಪಿಎಲ್, ಎಂಸಿಎಲ್ ಸೇರಿದಂತೆ ವಿಶ್ವದ ಪ್ರಮುಖ ಟಿ20 ಲೀಗ್ನಲ್ಲಿ ಆ್ಯಂಡ್ರೆ ರಸೆಲ್ ಅವರ ಟಿ20 ಆಟ ಮುಂದುವರೆಯಲಿದೆ.

THANK YOU, ANDRE RUSSELL. 🙏🏽💥
— Windies Cricket (@windiescricket) July 16, 2025
From the moment you stepped onto that field in maroon, you didn’t just play—you ignited. 💪🏽
Power. Passion. Pride. You gave us everything.
This isn’t just #OneLastDance — it’s the legacy of a warrior.🫶🏽❤️#OneLastDance #WIvAUS #FullAhEnergy pic.twitter.com/lKW6roISrG





