ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ ಶ್ರೀಲಂಕಾದ ಮಾಜಿ ನಾಯಕ

Date:

ಶ್ರೀಲಂಕಾದ ಆಲ್‌ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮ್ಯಾಥ್ಯೂಸ್ ತಮ್ಮ ಅಭಿಮಾನಿಗಳಿಗೆ ಈ ಮಾಹಿತಿಯನ್ನು ನೀಡಿದ್ದಾರೆ. 2009 ರಿಂದ ಶ್ರೀಲಂಕಾದ ಟೆಸ್ಟ್ ಕ್ರಿಕೆಟ್‌ನ ಭಾಗವಾಗಿದ್ದರು.

ಏಂಜೆಲೊ ಮ್ಯಾಥ್ಯೂಸ್ 2009 ರಲ್ಲಿ ಗಾಲೆಯಲ್ಲಿ ನಡೆದಿದ್ದ ಪಾಕಿಸ್ತಾನ ವಿರುದ್ಧದ ಪಂದ್ಯದೊಂದಿಗೆ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ತಮ್ಮ 16 ವರ್ಷಗಳ ಟೆಸ್ಟ್ ವೃತ್ತಿಜೀವನದಲ್ಲಿ ಮ್ಯಾಥ್ಯೂಸ್ 118 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 44.63 ಸರಾಸರಿಯಲ್ಲಿ 8,167 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, ಅವರು 16 ಶತಕಗಳು ಮತ್ತು 45 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದರಲ್ಲಿ 200 ರನ್‌ ಅವರ ಅತ್ಯುತ್ತಮ ಸ್ಕೋರ್ .

ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಕೊಡುಗೆ ನೀಡಿರುವ ಮ್ಯಾಥ್ಯೂಸ್, ತಮ್ಮ ವೃತ್ತಿಜೀವನದಲ್ಲಿ 33 ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ್ದರು. ಅಲ್ಲದೆ ಶ್ರೀಲಂಕಾ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಮೂರನೇ ಆಟಗಾರರಾಗಿದ್ದು, ಕುಮಾರ್ ಸಂಗಕ್ಕಾರ ಮತ್ತು ಮಹೇಲ ಜಯವರ್ಧನೆ ನಂತರದ ಸ್ಥಾನದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮೈದಾನದಲ್ಲಿ ಜಗಳಕ್ಕಿಳಿದ ಅಭಿಷೇಕ್ ಶರ್ಮಾ–ದಿಗ್ವೇಶ್ ರಥಿ; ಬಿಸಿಸಿಐನಿಂದ ಒಬ್ಬರಿಗೆ ಅಮಾನತು ಶಿಕ್ಷೆ

ತಮ್ಮ ನಿವೃತ್ತಿ ನಿರ್ಧಾರದ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿರುವ ಏಂಜೆಲೊ ಮ್ಯಾಥ್ಯೂಸ್, ‘ನನ್ನ ಪ್ರೀತಿಯ ಸ್ನೇಹಿತರೇ ಮತ್ತು ಕುಟುಂಬವೇ, ಈಗ ನಾನು ಆಟದ ಅತ್ಯಂತ ಪ್ರೀತಿಯ ಸ್ವರೂಪವಾದ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳುವ ಸಮಯ ಬಂದಿದೆ. ಕಳೆದ 17 ವರ್ಷಗಳಿಂದ ಶ್ರೀಲಂಕಾ ಪರ ಕ್ರಿಕೆಟ್ ಆಡುವುದು ನನಗೆ ಸಿಕ್ಕ ಅತ್ಯಂತ ದೊಡ್ಡ ಗೌರವ ಮತ್ತು ಹೆಮ್ಮೆ. ರಾಷ್ಟ್ರೀಯ ಜೆರ್ಸಿ ಧರಿಸಿದಾಗ ಮೂಡುವ ದೇಶಭಕ್ತಿ ಭಾವನೆಯನ್ನು ಯಾರೂ ಸರಿಗಟ್ಟಲು ಸಾಧ್ಯವಿಲ್ಲ. ನಾನು ನನ್ನ ಎಲ್ಲವನ್ನೂ ಕ್ರಿಕೆಟ್‌ಗೆ ನೀಡಿದ್ದೇನೆ ಮತ್ತು ಪ್ರತಿಯಾಗಿ ಕ್ರಿಕೆಟ್ ನನಗೆ ಎಲ್ಲವನ್ನೂ ನೀಡಿದೆ. ಜೂನ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ನನ್ನ ದೇಶಕ್ಕಾಗಿ ನನ್ನ ಕೊನೆಯ ರೆಡ್-ಬಾಲ್ ಪಂದ್ಯವಾಗಿರುತ್ತದೆ ಎಂದು ಏಂಜೆಲೊ ಮ್ಯಾಥ್ಯೂಸ್ ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...