ಬೆಂಗಳೂರು ಜಾವೆಲಿನ್ ಥ್ರೋ ಕೂಟಕ್ಕೆ ಪಾಕ್‌ನ ಅರ್ಷದ್ ನದೀಂಗೆ ಆಹ್ವಾನ: ನೀರಜ್ ಚೋಪ್ರಾ

Date:

ಮುಂದಿನ ತಿಂಗಳು ನಗರದಲ್ಲಿ ನಡೆಯುವ ಒಂದು ದಿನದ ಜಾವೆಲಿನ್ ಥ್ರೋ ಕೂಟಕ್ಕೆ ಭಾರತದ ಹೆಮ್ಮೆಯ ಅಥ್ಲೀಟ್, ಒಲಿಂಪಿಕ್ ಹೀರೊ ನೀರಜ್ ಚೋಪ್ರಾ ಸಜ್ಜಾಗಿದ್ದಾರೆ.ಜೆಎಸ್ ಡಬ್ಲ್ಯೂ ಸ್ಪೋರ್ಟ್ಸ್ ಆಯೋಜಿಸಿರುವ ಕೂಟಕ್ಕೆ ವಿಶ್ವದ ಅತ್ಯುತ್ತಮ ಅಥ್ಲೀಟ್ ಗಳನ್ನು ಆಹ್ವಾನಿಸಲಾಗಿದೆ. ಒಲಿಂಪಿಕ್‌ನ ಚಿನ್ನದ ಪದಕ ವಿಜೇತ ಹಾಗೂ ಪಾಕಿಸ್ತಾನದ ಅರ್ಷದ್ ನದೀಮ್ ಸೇರಿದಂತೆ ವಿಶ್ವದ ಅತ್ಯುತ್ತಮ ಅಥ್ಲೀಟ್ ಗಳನ್ನು ಆಹ್ವಾನಿಸಿರುವ ಅಂಶವನ್ನು ಸುದ್ದಿಗಾರರೊಂದಿಗೆ ಮಾತನಾಡಿದ ನೀರಜ್ ದೃಢಪಡಿಸಿದ್ದಾರೆ.

ಜಾವೆಲಿನ್ ಜಗತ್ತಿನ ಬದ್ಧ ಪ್ರತಿಸ್ಪರ್ಧಿಗಳಾಗಿರುವ ಈ ಇಬ್ಬರ ಅಥ್ಲೀಟ್ ಗಳು ಒಳ್ಳೆಯ ಸ್ನೇಹಿತರೂ ಆಗಿದ್ದಾರೆ. ಆದರೆ ಅಂತಾರಾಷ್ಟ್ರೀಯ ಕೂಟದಲ್ಲಿ ಅರ್ಷದ್ ಪಾಳ್ಗೊಳ್ಳುವುದು ಕೆಲ ಸಂಕೀರ್ಣತೆಗೆ ಕಾರಣವಾಗಲಿದೆ. ಕೂಟದಲ್ಲಿ ಪಾಲ್ಗೊಳ್ಳಲು ಸಾಧ್ಯವೇ ಎಂಬ ಬಗ್ಗೆ ಅರ್ಷದ್ ಇನ್ನೂ ದೃಢಪಡಿಸಿಲ್ಲ.

“ಕೋಚ್ ಜತೆ ಚರ್ಚಿಸಿ ದೃಢಪಡಿಸುವುದಾಗಿ ಅವರು ಹೇಳಿದ್ದಾರೆ. ಆದರೆ ಸದ್ಯಕ್ಕೆ ಇನ್ನೂ ದೃಢಪಡಿಸಿಲ್ಲ. ಅಂತಿಮ ಪಟ್ಟಿಯನ್ನು ಸದ್ಯದಲ್ಲೇ ಹಂಚಿಕೊಳ್ಳುತ್ತೇನೆ. ಎಲ್ಲ ಅಗ್ರಗಣ್ಯ ಅಥ್ಲೀಟ್ ಗಳನ್ನು ಆಹ್ವಾನಿಸಲಾಗಿದೆ. ಅವರು ಭಾಗವಹಿಸುವುದಾದರೆ ಸರ್ಕಾರವೂ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಆದ್ದರಿಂದ ಪ್ರತಿಯೊಂದೂ ದೃಢಪಟ್ಟ ಬಳಿಕ ಅಂತಿಮ ಪಟ್ಟಿ ತಿಳಿಯಲಿದೆ” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಅಪರೂಪದ ಸಚಿನ್‌ ದಾಖಲೆ ಮುರಿದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್

ಕಳೆದ ಒಲಿಂಪಿಕ್ಸ್ ನಲ್ಲಿ ಬೆಳ್ಳಿಪದಕ ಗೆದ್ದಿದ್ದ ನೀರಜ್ ಜತೆಗೆ ರೋಹಿತ್ ಯಾದವ್ ಸೇರಿದಂತೆ 3-4 ಭಾರತೀಯ ಅಥ್ಲೀಟ್ ಗಳು ಪಾಲ್ಗೊಳ್ಳುವಿಕೆ ದೃಢಪಡಿಸಿದ್ದಾರೆ. ಎರಡು ಬಾರಿಯ ವಿಶ್ವಚಾಂಪಿಯನ್ ಮತ್ತು ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಆಂಡರ್ಸನ್ ಪೀಟರ್ಸ್, ಮಾಜಿ ಒಲಿಂಪಿಕ್ ಚಾಂಪಿಯನ್ ಥಾಮಸ್ ರೋಹ್ಲರ್, ಮಾಜಿ ವಿಶ್ವಚಾಂಪಿಯನ್ ಹಾಗೂ ಒಲಿಂಪಿಕ್ ಪದಕ ವಿಜೇತ ಕರ್ಟಿಸ್ ಥಾಪ್ಸನ್ ಮತ್ತಿತರರು ಈಗಾಗಲೇ ಭಾಗವಹಿಸುವಿಕೆ ದೃಢಪಡಿಸಿದ್ದಾರೆ. ಯೂರೋಪ್ನ ಅಗ್ರಗಣ್ಯ ಅಥ್ಲೀಟ್ ಗಳು ಕೂಡಾ ಒಂದು ದಿನದ ಕೂಟದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಹರಿಯಾಣದ ಪಂಚ ಕುಲದಲ್ಲಿ ನಡೆಸಲು ಉದ್ದೇಶಿಸಿದ್ದ ಕೂಟವನ್ನು ಬೆಂಗಳೂರಿಗೆ ಸ್ಥಳಾಂತರಿಸಿರುವುದು ಈ ಭಾಗದ ಅಥ್ಲೆಟಿಕ್ ರಂಗದಲ್ಲಿ ಸಂಚಲನಕ್ಕೆ ಕಾರಣವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...