ಒಲಿಂಪಿಕ್ಸ್‌ | ಚಿನ್ನ ಗೆದ್ದ ಪಾಕ್‌ನ ಅರ್ಷದ್ ನದೀಮ್‌ಗೆ ಒಂದು ಕೋಟಿ ರೂ ಮತ್ತು ಕಾರು ಬಹುಮಾನ

Date:

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಪಾಕಿಸ್ತಾನದ ಜಾವೆಲಿನ್ ಥ್ರೋ ತಾರೆ ಅರ್ಷದ್ ನದೀಮ್ ಅವರಿಗೆ ಪಾಕಿಸ್ತಾನದ ಪಂಜಾಬ್ ಸರ್ಕಾರ ಭಾರೀ ಪ್ರಮಾಣದ ಬಹುಮಾನವನ್ನು ನೀಡಿದೆ ಎಂದು ವರದಿಯಾಗಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಿಸ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಸಾಧನೆ ಮಾಡಿದ ಅರ್ಷದ್ ನದೀಮ್ ಅವರಿಗೆ ಸರ್ಕಾರ ಒಂದು ಕೋಟಿ ರೂಪಾಯಿ ನಗದು ಬಹುಮಾನ ಮತ್ತು ಹೊಸ ಕಾರನ್ನು ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಪಾಕ್‌ನ ಪಂಜಾಬ್ ಮುಖ್ಯಮಂತ್ರಿ ಮರ್ಯಮ್ ನವಾಜ್ ಅವರು ಮಿಯಾನ್ ಚುನ್ನುನಲ್ಲಿರುವ ನದೀಮ್ ಅವರ ಗ್ರಾಮಕ್ಕೆ ಖುದ್ದು ತೆರಳಿ ಅರ್ಷದ್ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿದರು. ಭೇಟಿಯ ಸಮಯದಲ್ಲಿ, ಅವರು ನಗದು ಬಹುಮಾನ ಮತ್ತು ಹೊಸ ಕಾರಿನ ಕೀಗಳನ್ನು ಹಸ್ತಾಂತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಒಲಿಂಪಿಕ್ಸ್ | ಪುರುಷರ ಜಾವೆಲಿನ್ ಥ್ರೋ: ಪಾಕ್‌‌ನ ನದೀಮ್‌ಗೆ ಚಿನ್ನ, ಭಾರತದ ನೀರಜ್‌ಗೆ ಬೆಳ್ಳಿ

ಹಾಗೆಯೇ ನದೀಮ್ ಸಾಧನೆಯನ್ನು ಶ್ಲಾಘಿಸಿದ ಮರ್ಯಮ್ ನವಾಜ್, “ಅರ್ಷದ್ ಅವರು ಈ ಎಲ್ಲ ಬಹುಮಾನವನ್ನು ಪಡೆಯಲು ಅರ್ಹರಾಗಿದ್ದಾರೆ. ಏಕೆಂದರೆ ರಾಷ್ಟ್ರಕ್ಕೆ ತುಂಬಾ ಸಂತೋಷ ಮತ್ತು ಹೆಮ್ಮೆ ತಂದಿದ್ದಾರೆ” ಎಂದು ಹೇಳಿದ್ದಾರೆ.

ಇನ್ನು ಕಾರಿನ ನಂಬರ್ ಪ್ಲೇಟ್ ನಂಬರ್ 92.97 ಆಗಿದೆ. ಇದು ಅವರ ಪ್ಯಾರಿಸ್ ಒಲಿಂಪಿಕ್ಸ್ ರೆಕಾರ್ಡ್ ಆಗಿದೆ. ಲಾಹೋರ್‌ಗೆ ಹಿಂದಿರುಗುವ ಮುನ್ನ ನದೀಮ್ ಕೋಚ್ ಸಲ್ಮಾನ್ ಇಕ್ಬಾಲ್ ಬಟ್ ಅವರಿಗೆ ಸಿಎಂ 50 ಲಕ್ಷ ರೂಪಾಯಿ ಚೆಕ್ ನೀಡಿದರು.

ಪುರುಷರ ಜಾವೆಲಿನ್ ಥ್ರೋ ಫೈನಲ್‌ನಲ್ಲಿ, ನದೀಮ್ 92.97 ಮೀಟರ್ ಎಸೆದು ಒಲಂಪಿಕ್ ಚಿನ್ನದ ಪದಕವನ್ನು ಗಳಿಸಿದ ಪಾಕಿಸ್ತಾನದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಎಂಬ ಇತಿಹಾಸವನ್ನು ನಿರ್ಮಿಸಿದರು. ಹಾಲಿ ಚಾಂಪಿಯನ್ ಭಾರತದ ನೀರಜ್ ಚೋಪ್ರಾ ಅತ್ಯುತ್ತಮ ಪ್ರದರ್ಶನ ನೀಡಿದ್ದು 89.45 ಮೀ ಎಸೆದು ಬೆಳ್ಳಿ ಪದಕವನ್ನು ಪಡೆದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...