ಏಕದಿನ ಕ್ರಿಕೆಟ್ ಸರಣಿ | ಭಾರತಕ್ಕೆ ಸುಲಭ ತುತ್ತಾದ ದಕ್ಷಿಣ ಆಫ್ರಿಕಾ

Date:

ಕರಾರುವಾಕ್ಕಾದ ಬೌಲಿಂಗ್‌ ಹಾಗೂ ಉತ್ತಮ ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಜಯಗಳಿಸಿದೆ.

ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ 117 ರನ್‌ಗಳ ಸುಲಭದ ಸವಾಲನ್ನು ಬೆನ್ನಟ್ಟಿದ ಕೆ ಎಲ್‌ ರಾಹುಲ್‌ ನೇತೃತ್ವದ ಟೀಂ ಇಂಡಿಯಾ ಕೇವಲ 16.4 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿತು. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ.

ಮೊದಲ ಪದಾರ್ಪಣೆಯ ಪಂದ್ಯವನ್ನಾಡಿದ ಸಾಯಿ ಸುದರ್ಶನ್‌ ಅಜೇಯ 55 ಮತ್ತು ಸ್ಫೋಟಕ ಆಟಗಾರ ಶ್ರೇಯಸ್‌ ಅಯ್ಯರ್‌ (52) ಬಾರಿಸಿದ ಅರ್ಧಶತಕಗಳ ನೆರವಿನಿಂದ ಗೆಲುವು ಸುಲಭವಾಯಿತು. ಇವರಿಬ್ಬರು ಎರಡನೇ ವಿಕೆಟ್ ಜೊತೆಯಾಟದಲ್ಲಿ 73 ಎಸೆತಗಳಲ್ಲಿ 88 ರನ್‌ ಪೇರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಷದೀಪ್‌, ಆವೇಶ್‌ ದಾಳಿಗೆ 116ಕ್ಕೆ ದ. ಆಫ್ರಿಕಾ ಆಲ್‌ಔಟ್‌

ಇದಕ್ಕೂ ಮುನ್ನ ಟಾಸ್‌ ಗೆದ್ದು ಬ್ಯಾಟಿಂಗ್‌ ಆರಂಭಿಸಿದ ದಕ್ಷಿಣ ಆಫ್ರಿಕಾ ಅರ್ಷದೀಪ್ ಸಿಂಗ್‌ (37ಕ್ಕೆ 5) ಮತ್ತು ಅವೇಶ್‌ ಖಾನ್‌ (27ಕ್ಕೆ 4) ಅವರ ಆಕ್ರಮಣಕಾರಿ ಬೌಲಿಂಗ್‌ ದಾಳಿಗೆ ನಲುಗಿ 116 ರನ್‌ಗಳ ಅಲ್ಪ ಮೊತ್ತಕ್ಕೆ ಆಲ್‌ಔಟ್‌ ಆಯಿತು.

ಈ ಸುದ್ದಿ ಓದಿದ್ದೀರಾ? ಸಂಸತ್ತಿನ ಭದ್ರತಾ ಮುಖ್ಯಸ್ಥರ ಹುದ್ದೆ 45 ದಿನಗಳಿಂದ ಖಾಲಿ; ಶೇ.40 ಸಿಬ್ಬಂದಿ ಕೊರತೆ

ಟೋನಿ ಡೆ ಝೋರ್ಝಿ (28) ಮತ್ತು ಆಂಡಿಲ್‌ ಫೆಹ್ಲುಕ್ವಾಯೊ (33) ಹೊರತಾಗಿ ಉಳಿದ ಯಾವ ಬ್ಯಾಟರ್‌ಗಳು ಕೂಡ ಭಾರತದ ಭರ್ಜರಿ ಬೌಲಿಂಗ್‌ ಎದುರು ನಿಲ್ಲಲಿಲ್ಲ.

ಏಕದಿನ ಕ್ರಿಕೆಟ್ ಮಾದರಿಯಲ್ಲಿ ಶ್ರೇಷ್ಠ ಬೌಲಿಂಗ್‌ ಪ್ರದರ್ಶನ ನೀಡಿ ಚೊಚ್ಚಲ 5 ವಿಕೆಟ್‌ ಪಡೆದ ಯುವ ವೇಗಿ ಅರ್ಷದೀಪ್‌ ಸಿಂಗ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಸರಣಿಯ 2ನೇ ಪಂದ್ಯ ಡಿ.19ರಂದು ಮೆಬೆಕಾದ ಸೇಂಟ್‌ ಜಾರ್ಜ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...