ಕೊನೆಯ ಟಿ20 | ಚಿನ್ನಸ್ವಾಮಿಯಲ್ಲಿ ಹರ್ಷ್‌ದೀಪ್ ಸಿಂಗ್ ಸಾಹಸ: ಟೀಮ್ ಇಂಡಿಯಾಕ್ಕೆ ರೋಚಕ ಜಯ

Date:

ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ ಕೊನೆಯ ಹಾಗೂ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 6 ರನ್‌ಗಳ ರೋಚಕ ಜಯ ದಾಖಲಿಸಿದೆ.

ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ 161 ರನ್ ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ, 20 ಓವರ್‌ಗಳಲ್ಲಿ 154/8 ರನ್ ಗಳಿಸಿತು. ಆಸ್ಟ್ರೇಲಿಯಾಕ್ಕೆ ಗೆಲ್ಲಲು ಕೊನೆಯ ಓವರ್‌ನಲ್ಲಿ 10 ರನ್‌ಗಳ ಅವಶ್ಯಕತೆ ಇತ್ತು.

ಟೀಮ್ ಇಂಡಿಯಾ ಪರವಾಗಿ ಕೊನೆಯ ಓವರ್‌ ಎಸೆದ ಯುವ ಬೌಲರ್ ಹರ್ಷ್‌ದೀಪ್ ಸಿಂಗ್, ಕೇವಲ 3 ರನ್‌ಗಳನ್ನಷ್ಟೇ ಬಿಟ್ಟು ಕೊಡುವ ಮೂಲಕ ಟೀಮ್ ಇಂಡಿಯಾ 6 ರನ್‌ಗಳ ರೋಚಕ ಜಯ ದಾಖಲಿಸುವಂತಾಗಲು ನೆರವಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಟ್ರೇಲಿಯಾ ಪರ ಮೆಕ್ ಡರ್ಮೊಟ್ (54) ಅರ್ಧಶತಕ ಸಿಡಿಸಿದರೆ, ಹೆಡ್ (28), ನಾಯಕ ವೇಡ್ 22 ರನ್ ಹೊಡೆದರು. ಮುಕೇಶ್ ಕುಮಾರ್ 3, ಅರ್ಶ್‌ದೀಪ್, ಬಿಷ್ಟೋಯ್ ತಲಾ 2, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು. ಈ ಪಂದ್ಯವನ್ನು 6 ರನ್‌ಗಳಿಂದ ಗೆಲ್ಲುವ ಮೂಲಕ ಭಾರತ, ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿತು. ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ರೋಚಕವಾಗಿ ಗೆದ್ದಿತ್ತು.

161 ರನ್‌ಗಳ ಸವಾಲಿನ ಗುರಿ ನೀಡಿದ್ದ ಟೀಮ್ ಇಂಡಿಯಾ

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಸೂರ್ಯಕುಮಾರ್ ನೇತೃತ್ವದ ಯುವ ಭಾರತ ತಂಡ, ಶ್ರೇಯಸ್ ಅಯ್ಯರ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್‌ಗಳನ್ನು ಕಲೆಹಾಕಿತ್ತು.

ಶ್ರೇಯಸ್ ಅಯ್ಯರ್ 37 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಮೂಲಕ 53 ರನ್ ಬಾರಿಸಿ ತಂಡದ ಮೊತ್ತವನ್ನು 150ರ ಗಡಿ ದಾಟುವಂತೆ ನೋಡಿಕೊಂಡರು.

ಬೌಲಿಂಗ್‌ನಲ್ಲಿ ಆಸ್ಟ್ರೇಲಿಯಾ ತಂಡದ ಪರ ಬೆನ್ ದ್ವಾರ್ಶುಯಿಸ್ ಮತ್ತು ಜೇಸನ್ ಬೆಹ್ರೆಂಡಾರ್ಫ್ ತಲಾ ಎರಡು ವಿಕೆಟ್ ಕಬಲಿಸಿದರೆ, ಆರನ್ ಹಾರ್ಡಿ, ತನ್ವೀರ್ ಸಂಘ ಮತ್ತು ನಾಥನ್ ಎಲ್ಲಿಸ್ ತಲಾ ಒಂದೊಂದು ವಿಕೆಟ್ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...