Ashes ಸರಣಿ | ಟ್ರಾವಿಸ್‌ ಹೆಡ್‌ ಭರ್ಜರಿ ಶತಕ; ಇಂಗ್ಲೆಂಡ್ ವಿರುದ್ಧ ಆಸೀಸ್‌ಗೆ 8 ವಿಕೆಟ್‌ ಜಯ

Date:

ಇಂಗ್ಲೆಂಡ್ ಮತ್ತು ಆಸೀಸ್‌ ನಡುವಿನ ಪರ್ಥ್‌ನಲ್ಲಿ ನಡೆದ ಆ್ಯಶಸ್ ಸರಣಿಯ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಇಂಗ್ಲೆಂಡ್‌ ವಿರುದ್ಧ 8 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಆರಂಭಿಕ ಹಾಗೂ ಸ್ಟಾರ್‌ ಆಟಗಾರ ಟ್ರಾವಿಸ್‌ ಹೆಡ್‌ ಅವರ ಸ್ಪೋಟಕ ಶತಕದಿಂದ ಸುಲಭವಾಗಿ ಜಯಗಳಿಸಿತು.

ಇಂಗ್ಲೆಂಡ್‌ ನೀಡಿದ್ದ 205 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಸೀಸ್‌ ಬಳಗ 28.2 ಓವರ್‌ಗಳಲ್ಲಿಯೇ ಗುರಿಮುಟ್ಟಿತು. ಟ್ರಾವಿಸ್ ಹೆಡ್ 83 ಎಸೆತಗಳಲ್ಲಿ 16 ಬೌಂಡರಿ 4 ಸಿಕ್ಸರ್‌ಗಳೊಂದಿಗೆ 123 ರನ್‌ ಪೇರಿಸಿದರು. ಇವರಿಗೆ ಮಾರ್ನಸ್‌ ಲಬುಶೇನ್ ಅಜೇಯ 51 ರನ್‌ಗಳ ಮೂಲಕ ಸಹಕಾರ ನೀಡಿದರು.

ಇಂಗ್ಲೆಂಡ್ ಎರಡೂ ಇನಿಂಗ್ಸ್‌ಗಳಲ್ಲಿ ಸಂಪೂರ್ಣವಾಗಿ ಕುಸಿದು 172 ಹಾಗೂ 164 ರನ್‌ಗಳನ್ನು ಮಾತ್ರ ಗಳಿಸಿತು. ಮಿಚೆಲ್ ಸ್ಟಾರ್ಕ್ ಮೊದಲ ದಿನವೇ 7 ವಿಕೆಟ್‌ಗಳನ್ನು ಕಬಳಿಸಿ ಇಂಗ್ಲೆಂಡ್‌ಗೆ ದೊಡ್ಡ ಆಘಾತ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಣಜಿ ಟ್ರೋಫಿ | ಚಂಡೀಗಢ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಜಯ; ಕ್ವಾರ್ಟರ್ ಫೈನಲ್‌ ಕನಸು ಜೀವಂತ

ಮೊದಲ ಇನಿಂಗ್ಸ್‌ನಲ್ಲಿ ಬೆನ್‌ ಸ್ಟೋಕ್ಸ್‌ ಒಳಗೊಂಡ ಇಂಗ್ಲೆಂಡ್ ಬೌಲರ್‌ಗಳು ಉತ್ತಮ ಪ್ರತಿರೋಧ ನಡೆಸಿದರು. ಬೆನ್ ಸ್ಟೋಕ್ಸ್ 5 ವಿಕೆಟ್‌ಗಳನ್ನು ತೆಗೆದು ಆಸ್ಟ್ರೇಲಿಯಾವನ್ನು 132 ಆಲೌಟ್‌ ಮಾಡಿದರು. ಆದರೆ ಆ ಲಾಭವನ್ನು ಬ್ಯಾಟ್ಸ್‌ಮನ್‌ಗಳು ಬಳಸಿಕೊಳ್ಳಲಿಲ್ಲ.

ಎರಡನೇ ಇನಿಂಗ್ಸ್‌ನಲ್ಲೂ ಇಂಗ್ಲೆಂಡ್ ಕೇವಲ 164 ಪತನಗೊಂಡಿತು. ಆಸೀಸ್‌ನ ಬೋಲಂಡ್ 4, ಸ್ಟಾರ್ಕ್‌ ಹಾಗೂ ಡಾಗೆಟ್‌ ತಲಾ 4 ವಿಕೆಟ್‌ ಕಬಳಿಸಿದರು.

ಎರಡೂ ಇನಿಂಗ್ಸ್‌ನಲ್ಲಿ 10 ವಿಕೆಟ್ ಕಬಳಿಸಿದ ಮಿಚೆಲ್‌ ಸ್ಟಾರ್ಕ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಎರಡನೇ ಟೆಸ್ಟ್ ಅಡಿಲೇಡ್‌ನಲ್ಲಿ ಡಿಸೆಂಬರ್ 4 ರಿಂದ ಆರಂಭವಾಗಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...