ಥಾಯ್ಲಂಡ್ ಮಾಸ್ಟರ್ಸ್‌ ಬ್ಯಾಡ್ಮಿಂಟನ್ ಪಂದ್ಯಾವಳಿ: ಸೆಮಿಫೈನಲ್‌ಗೆ ಅಶ್ಮಿತಾ ಚಾಲಿಹಾ

Date:

ವೃತ್ತಿಜೀವನದ ಮೊದಲ ಬಿಡಬ್ಲ್ಯುಎಫ್ 300 ಸೆಮಿಫೈನಲ್ ತಲುಪಿದ  ಸಾಧನೆ ಮಾಡಿದ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಅಶ್ಮಿತಾ ಚಾಲಿಹಾ

ಥಾಯ್ಲಂಡ್‌ನಲ್ಲಿ ಸದ್ಯ ನಡೆಯುತ್ತಿರುವ ಬಿಡಬ್ಲ್ಯುಎಫ್ ಸೂಪರ್‌ 300 ಪಂದ್ಯಾಕೂಟದಲ್ಲಿ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಅಶ್ಮಿತಾ ಚಾಲಿಹಾ ಸೆಮಿಫೈನಲ್ ತಲುಪಿದ್ದಾರೆ. ಆ ಮೂಲಕ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಬಿಡಬ್ಲ್ಯುಎಫ್ ಸೂಪರ್‌ 300 ಸೆಮಿಫೈನಲ್ ತಲುಪಿದ ಸಾಧನೆ ಮಾಡಿದ್ದಾರೆ.

25 ವರ್ಷದ ಅಶ್ಮಿತಾ ಇಂಡೋನೇಷ್ಯಾದ ಈಸ್ಟರ್ ನುರುಮಿ ಟ್ರೈ ವಾರ್‍ಡೊಯೊ ಅವರನ್ನು 21-14, 19-21, 21-13 ಅಂತರದಲ್ಲಿ ಸೋಲಿಸಿದ್ದಾರೆ. ಆರಂಭದಲ್ಲಿ ಇಂಡೋನೇಷ್ಯಾದ ಆಟಗಾತಿ ಮೊದಲ ಸೆಟ್‌ನಲ್ಲಿ 5-1ರಿಂದ ಮುನ್ನಡೆಯಲ್ಲಿದ್ದರೂ ಅಶ್ಮಿತಾ 8-8ರಲ್ಲಿ ಸಮ ಮಾಡಿಕೊಂಡಿದ್ದರು.

ತೀವ್ರ ಸ್ಪರ್ಧೆಯ ನಂತರ ಸೆಟ್ ತಮ್ಮದಾಗಿಸಿಕೊಂಡಿದ್ದರು. ಮುಂದಿನ ಸೆಟ್‌ಗಳಲ್ಲೂ ಸಮಬಲದ ಹೋರಾಟದಲ್ಲಿ ಕೊನೆಗೂ ಅಶ್ಮಿತಾ ಸೆಮಿಫೈನಲ್ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಸೆಮಿಫೈನಲ್ ಪ್ರವೇಶಿಸುವ ಮೂಲಕ ಪಂದ್ಯಾವಳಿಯಲ್ಲಿ ಇನ್ನೂ ಸ್ಪರ್ಧೆಯಲ್ಲಿರುವ ಏಕೈಕ ಭಾರತೀಯ ಆಟಗಾರ್ತಿ ಎನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ದ್ವಿತೀಯ ಟೆಸ್ಟ್ | ಇಂಗ್ಲೆಂಡ್‌ ದಾಳಿಯನ್ನು ದಿಟ್ಟವಾಗಿ ಎದುರಿಸಿದ ಯಶಸ್ವಿ ಜೈಸ್ವಾಲ್ ದ್ವಿಶತಕದತ್ತ

ಇದಕ್ಕೂ ಮೊದಲು ಮಿಥುನ್ ಮಂಜುನಾಥ್ ಪುರುಷರ ಸಿಂಗಲ್ಸ್‌ನಲ್ಲಿ ನೆದರ್‌ಲ್ಯಾಂಡ್ಸ್ ಆಟಗಾರ ಮಾರ್ಕ್‌ ಕ್ಯಾಲಿಜ್ಯುಔ ಅವರ ವಿರುದ್ಧ ನೇರ ಸೆಟ್‌ಗಳಲ್ಲಿ ಸೋತು ಪಂದ್ಯಾವಳಿಯಿಂದ ಹೊರನಡೆದಿದ್ದರು. ಇದರ ಜೊತೆಗೆ ಆರನೇ ಶ್ರೇಯಾಂಕದ ಡಬಲ್ಸ್ ಜೋಡಿಯಾಗಿದ್ದ ತ್ರೀಸಾ ಜಾಲಿ ಮತ್ತು ಗಾಯತ್ರಿ ಗೋಪಿಚಂದ್ ಅವರು ಕ್ವಾರ್ಟರ್ ಫೈನಲ್‌ನಲ್ಲಿ ಇಂಡೋನೇಷ್ಯಾದ ಜೋಡಿ ಫೆಬ್ರಿಯಾನಾ ಡ್ವಿಪುಜಿ ಕುಸುಮ ಮತ್ತು ಅಮಾಲಿಯ ಕಾಹ್ಯಾ ಪ್ರಿಟಿವಿ ವಿರುದ್ಧ ಸೋತು ಹೊರ ನಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...