ಏಷ್ಯಾ ಕಪ್ ಫೈನಲ್ | ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್ ಕಬಳಿಸಿದ ಸಿರಾಜ್; ಲಂಕಾಗೆ ಆರಂಭಿಕ ಆಘಾತ

Date:

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಲಂಕಾಗೆ ಆರಂಭಿಕ ಆಘಾತ ನೀಡಿರುವ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್, ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್ ಕಿತ್ತು ಐತಿಹಾಸಿಕ ಸಾಧನೆ ಮಾಡಿದ್ದಾರೆ.

ತನ್ನ ಪಾಲಿನ ಎರಡನೇ ಓವರ್‌ ಎಸೆದ ಹೈದರಾಬಾದ್ ಮೂಲದ ಆಟಗಾರ, 1ನೇ ಎಸೆತದಲ್ಲಿ ನಿಸ್ಸಾಂಕ, ಮೂರನೇ ಎಸೆತದಲ್ಲಿ ಸಮರ ವಿಕ್ರಮ, ನಾಲ್ಕನೇ ಎಸೆತದಲ್ಲಿ ಅಸಲಂಕಾ ಹಾಗೂ ಕೊನೆಯ ಎಸೆತದಲ್ಲಿ ಧನಂಜಯ ಅವರ ವಿಕೆಟ್ ಕಬಳಿಸಿದರು.

ಸದ್ಯ ಮೂರನೇ ಓವರ್‌ನ 4ನೇ ಎಸೆತದಲ್ಲಿ ಶ್ರೀಲಂಕಾ ನಾಯಕ ಶಾನಕ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ 5 ವಿಕೆಟ್ ಪಡೆದ್ದಾರೆ. ಒಟ್ಟು ಮೂರು ಓವರ್ ಎಸೆದಿರುವ ಮೊಹಮ್ಮದ್ ಸಿರಾಜ್, ಕೇವಲ 5 ರನ್‌ ನೀಡಿ 5 ವಿಕೆಟ್ ಗಳಿಸಿದ್ದಾರೆ. ಸಿರಾಜ್ 5 ವಿಕೆಟ್ ಪಡೆಯುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 50 ವಿಕೆಟ್ ಪಡೆದ ಭಾರತದ 4ನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೈನಲ್ ಪಂದ್ಯದ ಮೊದಲ ಓವರ್‌ ಎಸೆತ ವೇಗಿ ಜಸ್‌ಪ್ರೀತ್ ಬುಮ್ರಾ, ಮೂರನೇ ಎಸೆತದಲ್ಲಿ ಕುಸಾಲ್ ಪಿರೇರಾ ಅವರನ್ನು ಔಟ್ ಮಾಡುವ ಮೂಲಕ ಲಂಕಾದ ಮೊದಲ ವಿಕೆಟ್ ಕಬಳಿಸಿದ್ದರು.

ಸದ್ಯ 8 ಓವರ್ ಮುಕ್ತಾಯ ಕಂಡಿದ್ದು, 18 ರನ್‌ಗೆ ಪ್ರಮುಖ 6 ವಿಕೆಟ್ ಕಳೆದುಕೊಂಡಿದೆ. ದುನೀತ್ ವೆಲ್ಲಾಲಾಂಗೆ ಹಾಗೂ ಕುಸಾಲ್ ಮೆಂಡಿಸ್ ಕ್ರೀಸ್‌ನಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...