ಏಷ್ಯಾ ಕಪ್‌ | ಬಾಂಗ್ಲಾದೇಶ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

Date:

ಏಷ್ಯಾ ಕಪ್‌ ಸೂಪರ್‌ 4 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 41 ರನ್‌ಗಳ ಜಯ ಸಾಧಿಸಿದ ಭಾರತ ಅಜೇಯವಾಗಿ ಫೈನಲ್‌ ಪ್ರವೇಶಿಸಿದೆ.

ಅಭಿಷೇಕ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಅವರ ಅರ್ಧಶತಕದ ಸಹಾಯದಿಂದ ಭಾರತ 168 ರನ್ ಗಳಿಸಿತು. ಬಾಂಗ್ಲಾದೇಶದ ಬ್ಯಾಟಿಂಗ್ ವಿಫಲವಾಗಿ 41 ರನ್‌ಗಳಿಂದ ಸೋಲೊಪ್ಪಿಕೊಂಡರು. ಈ ಗೆಲುವಿನೊಂದಿಗೆ ಭಾರತ ಅಜೇಯವಾಗಿ ಫೈನಲ್‌ಗೆ ತಲುಪಿದೆ.

ಭಾರತ ನೀಡಿದ್ದ 169 ರನ್‌ಗಳ ಗುರಿ ಬೆನ್ನಟ್ಟಿದ ಬಾಂಗ್ಲಾ ತಂಡವು, ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ (18ಕ್ಕೆ3) ಹಾಗೂ ಬಲಗೈ ವೇಗಿ ಜಸ್‌ಪ್ರೀತ್ ಬೂಮ್ರಾ (18ಕ್ಕೆ2) ಅವರ ಪರಿಣಾಮಕಾರಿ ಬೌಲಿಂಗ್ ಎದುರು 19.3 ಓವರುಗಳಲ್ಲಿ 127 ರನ್‌ಗಳಿಗೆ ಆಲೌಟ್ ಆಯಿತು. ಆರಂಭಿಕ ಆಟಗಾರ ಸೈಫ್ ಹಸನ್ (69; 51 ಎಸೆತ, 4×3, 6×5) ಅವರ ಏಕಾಂಗಿ ಹೋರಾಟದ ನಡುವೆಯೂ ಭಾರತದ ಬೌಲರ್‌ಗಳು ಮೇಲುಗೈ ಸಾಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಮುನ್ನ, ಟಾಸ್ ಸೋತು ಬ್ಯಾಟಿಂಗ್ ಇಳಿಸಲ್ಪಟ್ಟ ಸೂರ್ಯಕುಮಾರ್ ಪಡೆಯು ಸಿಡಿಲಮರಿ ಅಭಿಷೇಕ್ ಶರ್ಮಾ (75; 37ಎಸೆತ, 4×6, 6×5) ಅವರ ಅಬ್ಬರದ ಆಟದಿಂದಾಗಿ 6 ವಿಕೆಟ್‌ಗಳಿಗೆ 168 ರನ್ ಗಳಿಸಿತು.

ಪರ್ವೇಜ್ ಹೊಸೇನ್ ಎಮನ್ 21 ರನ್‌ ಗಳಿಸಿ ಔಟಾದರು. ಒಂದು ಕಡೆ ವಿಕೆಟ್‌ ಪತನಗೊಳ್ಳುತ್ತಿದ್ದರೂ ಆರಂಭಿಕ ಆಟಗಾರ ಸೈಫ್‌ ಹಸನ್‌ ಮುನ್ನುಗ್ಗಿ ಹೊಡೆಯುತ್ತಿದ್ದರು. ಅಕ್ಷರ್‌ ಪಟೇಲ್‌, ಶಿವಂ ದುಬೆ ಮತ್ತು ಕೀಪರ್‌ ಸಂಜು ಸ್ಯಾಮ್ಸನ್‌, ಅಭಿಷೇಕ್‌ ಶರ್ಮಾ ಕ್ಯಾಚ್‌ ಡ್ರಾಪ್‌ ಮಾಡಿದರು. ಕೊನೆಗೆ 69 ರನ್‌(61 ಎಸೆತ, 3 ಬೌಂಡರಿ, 5 ಸಿಕ್ಸ್‌) ಬುಮ್ರಾ ಬೌಲಿಂಗ್‌ನಲ್ಲಿ ಸಿಕ್ಸ್‌ ಸಿಡಿಸಲು ಹೋದರು. ಆದರೆ ಬೌಂಡರಿ ಗೆರೆಯ ಬಳಿ ಅಕ್ಷರ್‌ ಪಟೇಲ್‌ ಉತ್ತಮ ಕ್ಯಾಚ್‌ ಹಿಡಿದಿದ್ದರಿಂದ ಔಟಾದರು.

ಟೀಂ ಇಂಡಿಯಾದ ಬ್ಯಾಟಿಂಗ್ ಬಲಿಷ್ಠವೆಂದು ಪರಿಗಣಿಸಲಾಗಿದ್ದರೂ, ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು ಬೌಲರ್‌ಗಳು. ಜಸ್ಪ್ರೀತ್ ಬುಮ್ರಾ ತಮ್ಮ ಮೊದಲ ಓವರ್‌ನಲ್ಲೇ ವಿಕೆಟ್ ಉರುಳಿಸಿ ಬಾಂಗ್ಲಾಗೆ ಆಘಾತ ನೀಡಿದರು. ಉಳಿದಂತೆ ಮಧ್ಯಮ ಓವರ್‌ಗಳಲ್ಲಿ ವರುಣ್ ಚಕ್ರವರ್ತಿ ಮತ್ತು ಕುಲ್ದೀಪ್ ಯಾದವ್ ಬಾಂಗ್ಲಾ ಬ್ಯಾಟರ್​ಗಳನ್ನು ಕಾಡಿದರು. ವರುಣ್ ಚಕ್ರವರ್ತಿ, ಬುಮ್ರಾ ಎರಡು ವಿಕೆಟ್‌ಗಳನ್ನು ಪಡೆದರೆ, ಕುಲ್ದೀಪ್ ಯಾದವ್ ಮೂರು ವಿಕೆಟ್‌ಗಳನ್ನು ಪಡೆದರು. ಅಕ್ಷರ್‌ ಪಟೇಲ್‌ ಮತ್ತು ತಿಲಕ್‌ ವರ್ಮಾ ತಲಾ 1 ವಿಕೆಟ್‌ ಪಡೆದರು. ಈ ಇಬ್ಬರು ಬೌಲರ್‌ಗಳು ಎಂಟು ಓವರ್‌ಗಳಲ್ಲಿ 47 ರನ್‌ಗಳನ್ನು ನೀಡಿ ಬಾಂಗ್ಲಾದೇಶದ ಐದು ವಿಕೆಟ್‌ಗಳನ್ನು ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...