Asia CUP2025 | ‘ಸೂಪರ್ ಓವರ್’ ಪಂದ್ಯದಲ್ಲಿ ಲಂಕಾ ಮಣಿಸಿ, ಫೈನಲ್‌ಗೆ ಭಾರತ ಲಗ್ಗೆ

Date:

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಏಷ್ಯಾ ಕಪ್‌ ಕ್ರಿಕೆಟ್‌ ಸೂಪರ್‌ ಫೋರ್‌ ವಿಭಾಗದ ಕೊನೆಯ ಪಂದ್ಯದಲ್ಲಿ ಸೆಣಸಿದ ಭಾರತ ಮತ್ತು ಶ್ರೀಲಂಕಾ ನಡುವೆ ಸಾಕಷ್ಟು ರೋಚಕಗಳು ಕ್ಷಣಗಳು ನಡೆದು, ಕೊನೆಗೆ ನಡೆದ ಸೂಪರ್‌ ಓವರ್‌’ನಲ್ಲಿ ಭಾರತ ಜಯ ಸಾಧಿಸಿತು.

ಈ ಮೂಲಕ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವು 2025ರ ಏಷ್ಯಾ ಕಪ್ ಕ್ರಿಕೆಟ್‌ ಟೂರ್ನಿಯುದ್ದಕ್ಕೂ ಅಜೇಯವಾಗುಳಿಯಿತು.

ಟಾಸ್ ಗೆದ್ದ ಶ್ರೀಲಂಕಾ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಭಿಷೇಕ್ ಶರ್ಮಾ ಅವರ ಮಿಂಚಿನ ಅರ್ಧಶತಕ ಮತ್ತು ತಿಲಕ್ ವರ್ಮಾ ಬ್ಯಾಟಿಂಗ್ ಬಲದಿಂದ ಭಾರತ ತಂಡವು ಶ್ರೀಲಂಕಾ ಎದುರು 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 202 ರನ್ ಗಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿ ಬೆನ್ನಟ್ಟಿದ್ದ ಶ್ರೀಲಂಕಾ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 202 ರನ್ ಗಳಿಸುವ ಮೂಲಕ ಪಂದ್ಯ ಟೈ ಆಯಿತು. ಹೀಗಾಗಿ ವಿಜೇತರನ್ನು ನಿರ್ಧರಿಸಲು ನಡೆದ ಸೂಪರ್ ಓವರ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎರಡು ರನ್ ಗೆ ನಿಯಂತ್ರಿಸಿದ ಭಾರತ ಗೆಲುವು ದಾಖಲಿಸಿತು.

ಭಾರತದ ಇನ್ನಿಂಗ್ಸ್ ನಲ್ಲಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತು ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಭರ್ಜರಿ ಬ್ಯಾಟಿಂಗ್ ಮಾಡಿ ತಲಾ ಅರ್ಧಶತಕ ಸಿಡಿಸಿ ಭಾರತದ ಬೃಹತ್ ಮೊತಕ್ಕೆ ಕಾರಣರಾದರು. ಅಭಿಷೇಕ್ ಶರ್ಮಾ ಕೇವಲ 31 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 8 ಬೌಂಡರಿಗಳ ನೆರವಿನಿಂದ 61 ರನ್ ಪೇರಿಸಿದರೆ, ಇತ್ತ ತಿಲಕ್ ವರ್ಮಾ ಕೂಡ 34 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 4 ಬೌಂಡರಿಗಳ ನೆರವಿನಿಂದ ಅಜೇಯ 49 ರನ್ ಚಚ್ಚಿದರು. ಆ ಮೂಲಕ ಕೇವಲ 1 ರನ್ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡರು.

ಲಂಕಾದ ಆರಂಭಿಕ ಆಟಗಾರ ನಿಸಾಂಕ ಅವರು ಭಾರತದ ಎಲ್ಲ ಬೌಲರ್‌ಗಳನ್ನೂ ದಂಡಿಸಿದರು. ಇನಿಂಗ್ಸ್‌ನ ಮೊದಲ ಓವರ್‌ನಲ್ಲಿಯೇ ಹಾರ್ದಿಕ್ ಎಸೆತವನ್ನು ಆಡುವಾಗ ಕುಸಾಲ ಮೆಂಡಿಸ್ ಔಟಾದರು. ನಿಸಾಂಕ ಅವರಿಗೆ ಕುಸಾಲ ಪೆರೆರಾ ಉತ್ತಮ ಜೊತೆ ನೀಡಿದರು. ಎರಡನೆ ವಿಕೆಟ್ ಜೊತೆಯಾಟದಲ್ಲಿ127 ರನ್ ಸೇರಿಸಿದರು. 13ನೇ ಓವರ್‌ನಲ್ಲಿ ಪೆರೆರಾ ಅವರನ್ನು ಸ್ಪಿನ್ನ‌ರ್ ವರುಣ್ ಚಕ್ರವರ್ತಿ ಔಟ್ ಮಾಡಿದರು. ನಿಸಾಂಕ ಕೊನೆಯ ಓವರ್‌ನಲ್ಲಿ ಔಟಾದರು.

ಭಾರತ: 20 ಓವರ್‌ಗಳಲ್ಲಿ 5ಕ್ಕೆ202 (ಅಭಿಷೇಕ್ ಶರ್ಮಾ 61, ತಿಲಕ್ ವರ್ಮಾ ಔಟಾಗದೇ 49, ಸಂಜು ಸ್ಯಾಟ್ಸನ್ 39, ಅಕ್ಷ‌ರ್ ಪಟೇಲ್ ಔಟಾಗದೇ 21, ಮಹೀಷ ತೀಕ್ಷಣ 36ಕ್ಕೆ1, ದುಷ್ಮಂತಾ ಚಾಮೀರ 40ಕ್ಕೆ1, ವಣಿಂದು ಹಸರಂಗಾ 371).

ಶ್ರೀಲಂಕಾ: 20 ಓವರ್‌ಗಳಲ್ಲಿ 5 ವಿಕೆಟ್‌ಗೆ 202 (ಪಥುಮ್ ನಿಸಾಂಕ 107, ಕುಶಾಲ್ ಪೆರೆರಾ 58, ದಸುನ್ ಶನಾಕಾ ಔಟಾಗದೇ 22; ಹಾರ್ದಿಕ್ ಪಾಂಡ್ಯ 7ಕ್ಕೆ 1, ಕುಲದೀಪ್ ಯಾದವ್ 31ಕ್ಕೆ 1, ವರುಣ್ ಚಕ್ರವರ್ತಿ 31ಕ್ಕೆ 1).

ಭಾರತ ತಂಡವು ಫೈನಲ್ ಪ್ರವೇಶಿಸಿದ್ದು, ಭಾನುವಾರ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...