ಏಷ್ಯನ್‌ ಗೇಮ್ಸ್‌ 2023 | ಕನ್ನಡತಿ ಅದಿತಿ ಅಶೋಕ್‌ಗೆ ಬೆಳ್ಳಿ;ಗಾಲ್ಫ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು

Date:

ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದ 8ನೇ ದಿನವಾದ ಇಂದು(ಅ.01) ಗಾಲ್ಫ್‌ನಲ್ಲಿ ಕರ್ನಾಟಕದ ಅದಿತಿ ಅಶೋಕ್‌ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಬೆಂಗಳೂರಿನ ಅದಿತಿ ಅಶೋಕ್‌ ಬೆಳ್ಳಿ ಪದಕ ಕೊರಳಿಗೇರಿಸಿಕೊಂಡರು. ಇದಲ್ಲದೆ ಏಷ್ಯನ್ ಕ್ರೀಡಾಕೂಟದ ಗಾಲ್ಫ್ ವಿಭಾಗದಲ್ಲಿ ಪದಕ ಜಯಿಸಿದ ಭಾರತದ ಮೊದಲ ಮಹಿಳಾ ಕ್ರೀಡಾಕೂಟ ಎಂಬ ದಾಖಲೆ ಬರೆದಿದ್ದಾರೆ. ಫೈನಲ್‌ನಲ್ಲಿ ಆರಂಭದಿಂದ ಮುನ್ನಡೆಯಲ್ಲಿದ್ದ ಅದಿತಿ ಅಶೋಕ್‌ಗೆ ಚಿನ್ನ ಮುಡಿಗೇರಿಸಿಕೊಳ್ಳುವ ಅವಕಾಶವಿತ್ತು. ಆದರೆ ಕೊನೆಯ ಮೂರು ಹೊಡೆತಗಳಲ್ಲಿ ಹಿನ್ನಡೆ ಅನುಭವಿಸಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಚಿನ್ನದ ಪದಕ ಥಾಯ್ಲೆಂಡ್‌ನ ಅರ್ಪಿಚಯಾ ಯುಬೋಲ್‌ ಪಾಲಾಯಿತು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಬೆಂಗಳೂರಿನ ಅದಿತಿ ಅಶೋಕ್ ನಾಲ್ಕನೇ ಸ್ಥಾನ ಪಡೆದು ಕೊಂಚದರಲ್ಲಿಯೇ ಕಂಚಿನ ಪದಕ ತಪ್ಪಿಸಿಕೊಂಡಿದ್ದರು. ಇದೀಗ ಏಷ್ಯನ್ ಕ್ರೀಡಾಕೂಟದಲ್ಲಿ ದಾಖಲೆಯ ಗೋಲು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೈಯಕ್ತಿಕ ವಿಭಾಗದಲ್ಲಿ ಅದಿತಿ ಅಶೋಕ್ ಬೆಳ್ಳಿ ಸಾಧನೆ ಕೂಡ ಒಂದು ಮೈಲುಗಲ್ಲಾಗಿದೆ. ಈವರೆಗೆ ಗಾಲ್ಫ್‌ನಲ್ಲಿ ಪದಕ ಪಡೆದ ದೇಶದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇನ್ನು ಗಾಲ್ಪ್ ಮಹಿಳಾ ತಂಡ ಪ್ರಶಸ್ತಿ ಜಯಿಸುವಲ್ಲಿ ವಿಫಲವಾಯಿತು. ಉತ್ತಮವಾಗಿ ಆಟವಾಡಿರುವ ಮಹಿಳಾ ತಂಡವು ಕಂಚು ಜಯಿಸುವ ಸಾಧ್ಯತೆ ಇತ್ತು. ಆದರೆ ಕೊನೆ ಗಳಿಗೆಯಲ್ಲಿ ಕೆಲ ತಪ್ಪು ಹೊಡೆತಗಳಿಂದ ನಾಲ್ಕನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಯಿತು.

ಏಷ್ಯನ್ ಕ್ರೀಡಾಕೂಟದ 8 ನೇ ದಿನದಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಇಂದು ಪುರುಷರ ಟ್ರ್ಯಾ ಪ್ ಶೂಟಿಂಗ್ ವಿಭಾಗದಲ್ಲಿ ಭಾರತದ ಪೃಥ್ವಿರಾಜ್ ತೊಂಡೈಮಾನ್, ಕಿನಾನ್ ಚೆನೈ ಮತ್ತು ಜೊರಾವರ್ ಸಿಂಗ್ ಸಂಧು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಹಾಗೆಯೇ ಮಹಿಳಾ ಟ್ರ್ಯಾಪ್ ಶೂಟಿಂಗ್ ವಿಭಾಗದಲ್ಲಿ ಮನೀಶಾ ಕೀರ್, ಪ್ರೀ ತಿ ರಜಾಕ್ ಮತ್ತು ರಾಜೇಶ್ವರಿ ಕುಮಾರಿ ಅವರು ಬೆಳ್ಳಿ ಪದಕ ಜಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಶ್ವಕಪ್‌ ಏಕದಿನ ತಂಡಕ್ಕೆ ಸ್ಥಾನ ಪಡೆದ ಸ್ಪಿನ್ನರ್ ಆರ್‌ ಅಶ್ವಿನ್‌: ಬದಲಾವಣೆಯ 15ರ ಬಳಗದಲ್ಲಿ ಆಯ್ಕೆ

ಭಾನುವಾರದ ಮಧ್ಯಾಹ್ನದ ಹೊತ್ತಿಗೆ ಪದಕ ಪಟ್ಟಿಯಲ್ಲಿ ಭಾರತವು 11 ಚಿನ್ನ,16 ಬೆಳ್ಳಿ ಹಾಗೂ 14 ಕಂಚಿನ ಪದಕಗಳೊಂದಿಗೆ ಒಟ್ಟು 41 ಪದಕಗಳನ್ನು ಜಯಿಸಿ ನಾಲ್ಕನೇ ಸ್ಥಾನದಲ್ಲಿದೆ. ಚೀನಾ 115 ಚಿನ್ನ,70 ಬೆಳ್ಳಿ,36 ಕಂಚುಗಳೊಂದಿಗೆ ಮೊದಲ ಸ್ಥಾನದಲ್ಲಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...