ತವರಲ್ಲೇ ಆಸ್ಟ್ರೇಲಿಯಾ ಮಣಿಸಿದ ಪಾಕಿಸ್ತಾನ: 22 ವರ್ಷಗಳ ಬಳಿಕ ಸರಣಿ ಗೆಲುವು

Date:

ಕ್ಯಾನ್‌ಬೆರಾದ ಪರ್ತ್‌ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ 3ನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ತನ್ನದಾಗಿಸಿಕೊಂಡಿತು.

ಕಳೆದ 22 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಕ್‌, ಆಸ್ಟ್ರೇಲಿಯಾದಲ್ಲಿ ಸರಣಿ ಗೆದ್ದ ಸಾಧನೆ ಮಾಡಿದೆ. ಇದು ನೂತನ ನಾಯಕ ಮೊಹಮ್ಮದ್‌ ರಿಜ್ವಾನ್‌ ಅವರ ನಾಯಕತ್ವದಲ್ಲಿ ಗೆದ್ದ ಮೊದಲ ಸರಣಿಯಾಗಿದೆ. ಕೊನೆಯದ್ದಾಗಿ 2002ರಲ್ಲಿ ಪಾಕ್‌ ಆಸೀಸ್‌ ನೆಲದಲ್ಲಿ ಸರಣಿ ಗೆದ್ದಿತ್ತು.

141 ರನ್‌ಗಳ ಸುಲಭ ಗುರಿ ಬೆನ್ನತ್ತಿದ್ದ ಪಾಕ್‌ ಬ್ಯಾಟರ್‌ಗಳು ಉತ್ತಮ ಆರಂಭ ಪಡೆಯುವಲ್ಲಿ ಯಶಸ್ವಿಯಾದರು. ಮೊದಲ ವಿಕೆಟ್‌ಗೆ ಪಾಕ್ ‌84 ರನ್‌ಗಳ ಜೊತೆಯಾಟ ನೀಡಿತ್ತು. ಆರಂಭಿಕರ ವಿಕೆಟ್‌ ಪತನವಾದ ಬಳಿಕ ಕ್ರೀಸ್‌ಗಿಳಿದ ನಾಯಕ ಮೊಹಮ್ಮದ್‌ ರಿಜ್ವಾನ್‌ ಮತ್ತು ಬಾಬರ್‌ ಆಜಂ ಜೋಡಿ ವಿಕೆಟ್‌ ಬಿಟ್ಟುಕೊಡದೇ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಣದ ಅಮಲು ಹಾಗೂ ಭಾರತೀಯ ಕ್ರಿಕೆಟ್ ತಂಡದ ಗರ್ವಭಂಗ

ಪಾಕ್‌ ಪರ ಸೈಮ್‌ ಅಯೂಬ್‌ 42 ರನ್‌, ಅಬ್ದುಲ್ಲಾ ಶಫಿಕ್‌ 37 ರನ್‌ ಗಳಿಸಿ ಅಜೇಯರಾಗಿ ಉಳಿದರೆ, ಮೊಹಮ್ಮದ್‌ ರಿಜ್ವಾನ್‌ 30 ರನ್‌ ಹಾಗೂ ಬಾಬರ್‌ ಆಜಂ 28 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು. ಇನ್ನೂ ಆಸ್ಟ್ರೇಲಿಯಾ ಪಾರ ಲ್ಯಾನ್ಸ್‌ ಮೊರಿಸ್‌ 6 ಓವರ್‌ಗಳಲ್ಲಿ 24 ರನ್‌ ಬಿಟ್ಟುಕೊಟ್ಟು 2 ವಿಕೆಟ್‌ ಕಿತ್ತರು.

ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಆಸೀಸ್‌ ತಂಡವು 31.5 ಓವರ್‌ಗಳಲ್ಲಿ ಕೇವಲ 140 ರನ್​ಗಳಿಗೆ ಆಲೌಟ್ ಆಯಿತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಅಲ್ಪ ಮೊತ್ತಕ್ಕೆ ನೆಲಕಚ್ಚಿದರು. ಆದರೆ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಾನ್ ಅಬಾಟ್ 41 ಎಸೆತಗಳಲ್ಲಿ 30 ರನ್ ಬಾರಿಸಿದರು.

ಸಂಘಟಿತ ದಾಳಿಯೊಂದಿಗೆ ಆಸ್ಟ್ರೇಲಿಯನ್ನರ ಮೇಲೆ ಹಿಡಿತ ಸಾಧಿಸಿದ ಪಾಕ್ ಬೌಲರ್​ಗಳು ಅಂತಿಮವಾಗಿ ಆತಿಥೇಯರನ್ನು 31.5 ಓವರ್​ಗಳಲ್ಲಿ 140 ರನ್​ಗಳಿಗೆ ಆಲೌಟ್ ಮಾಡಿದರು. ಪಾಕಿಸ್ತಾನ ಪರ ಶಾಹೀನ್ ಶಾ ಅಫ್ರಿದಿ 32 ರನ್ ನೀಡಿ 3 ವಿಕೆಟ್ ಪಡೆದರೆ, ನಸೀಮ್ ಶಾ 54 ರನ್ ನೀಡಿ 3 ವಿಕೆಟ್ ಕಬಳಿಸಿದರು. ಇನ್ನು ಹ್ಯಾರಿಸ್ ರೌಫ್ 24 ರನ್​ಗಳಿಗೆ 2 ವಿಕೆಟ್ ಕಬಳಿಸಿ ಮಿಂಚಿದರು. ಇದರೊಂದಿಗೆ ಸರಣಿಯಲ್ಲಿ ಒಟ್ಟು 10 ವಿಕೆಟ್‌ ಪಡೆಯುವ ಮೂಲಕ ಪಂದ್ಯ ಶ್ರೇಷ್ಠ ಹಾಗೂ ಸರಣಿಶೇಷ್ಠ ಪ್ರಶಸ್ತಿಗೂ ಪಾತ್ರರಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...