IND vs AUS | ರೋಚಕ ಹಣಾಹಣಿಯಲ್ಲಿ ಸರಣಿ ಸೋತ ಭಾರತ

Date:

ಆಸ್ಟ್ರೇಲಿಯಾದ ವಿರುದ್ಧ ನಡೆದ ದ್ವಿತೀಯ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ ರೋಚಕ ಹಣಾಹಣಿಯಲ್ಲಿ 2 ವಿಕೆಟ್‌ಗಳಿಂದ ಸೋತು ಸರಣಿಯನ್ನು ಕಳೆದುಕೊಂಡಿತು. 265 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 46.2 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಗುರಿ ಬೆನ್ನಟ್ಟುವ ವೇಳೆ ಆಸ್ಟ್ರೇಲಿಯಾದ ಆರಂಭ ಅಭದ್ರವಾಗಿದ್ದರೂ,ಮ್ಯಾಥ್ಯೂ ಶಾರ್ಟ್ (74 ಹಾಗೂ ಕೂಪರ್ ಕಾನ್ಲಿ (61 ಅಜೇಯ) ಆಟ ತಂಡವನ್ನು ಗೆಲುವಿನ ದಾರಿಗೆ ಕೊಂಡೊಯ್ದರು. ಅಂತಿಮ ಹಂತದಲ್ಲಿ ಮಿಚೆಲ್ ಓವನ್ (36) ಸಿಡಿಲಿನಂತಹ ಆಟ ಆಡಿದರು. ಕೊನೆಯ ಓವರ್‌ಗೂ ಸನ್ನಿವೇಶ ರೋಚಕವಾಗಿದ್ದು, ಅಂತಿಮವಾಗಿ ಆಸ್ಟ್ರೇಲಿಯಾ ಜಯದ ನಗೆ ಬೀರಿತು.

ಇದನ್ನು ಓದಿದ್ದೀರಾ? ಏಕದಿನ ಪಂದ್ಯ | ಗೆದ್ದ ಆಸ್ಟ್ರೇಲಿಯಾ; ಟೀಮ್ ಇಂಡಿಯಾಗೆ ಮೊದಲ ಪಂದ್ಯದಲ್ಲೇ ಸೋಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿತು. ನಾಯಕ ರೋಹಿತ್ ಶರ್ಮಾ 73 (97 ಚೆಂಡು, 7 ಬೌಂಡರಿ, 2 ಸಿಕ್ಸ್) ರನ್‌ಗಳ ಅಬ್ಬರದ ಇನಿಂಗ್ಸ್ ಆಡಿದರು. ಶ್ರೇಯಸ್ ಅಯ್ಯರ್ (61) ಮತ್ತು ಅಕ್ಷರ್ ಪಟೇಲ್ (44) ಸಹ ತಂಡಕ್ಕೆ ಉತ್ತಮ ಕೊಡುಗೆ ನೀಡಿದರು. ಆಸ್ಟ್ರೇಲಿಯಾ ಪರ ಅಡಮ್ ಜಾಂಪಾ 10 ಓವರ್‌ಗಳಲ್ಲಿ 60 ರನ್ ನೀಡಿ 4 ವಿಕೆಟ್ ಪಡೆದು ಭಾರತದ ಮಧ್ಯಮ ಕ್ರಮದ ಬ್ಯಾಟ್ಸ್ಮನ್‌ಗಳನ್ನು ಸಂಕಷ್ಟಕ್ಕೆ ತಳ್ಳಿದರು. ಯುವ ಪೇಸರ್ ಜೇವಿಯರ್ ಬಾರ್ಟ್ಲೆಟ್ ಕೂಡ 3 ಪ್ರಮುಖ ವಿಕೆಟ್‌ಗಳನ್ನು ಪಡೆದರು.

ಭಾರತದ ಬೌಲಿಂಗ್ ವಿಭಾಗದಲ್ಲಿ ಅರ್ಷದೀಪ್ ಸಿಂಗ್ ಮತ್ತು ವಾಷಿಂಗ್ಟನ್ ಸುಂದರ್ ತಲಾ 2 ವಿಕೆಟ್ ಪಡೆದರೂ, ಒತ್ತಡದ ಕ್ಷಣಗಳಲ್ಲಿ ಕಾನ್ಲಿ ಮತ್ತು ಓವನ್ ಅವರನ್ನು ಔಟ್‌ ಮಾಡಲು ವಿಫಲರಾದರು. ಈ ಗೆಲುವಿನಿಂದ ಆಸ್ಟ್ರೇಲಿಯಾ ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಮುನ್ನಡೆದು, ಸರಣಿಯನ್ನು ತಮ್ಮದಾಗಿಸಿಕೊಂಡಿದೆ.

  • ಭಾರತ: 264/9 (50 ಓವರ್‌)
  • ಆಸ್ಟ್ರೇಲಿಯಾ: 265/8 (46.2 ಓವರ್‌)
  • ಆಸ್ಟ್ರೇಲಿಯಾ 2 ವಿಕೆಟ್‌ಗಳಿಂದ ಜಯ
  • ಸರಣಿ: ಆಸ್ಟ್ರೇಲಿಯಾ 2-0 ಮುನ್ನಡೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...