ಮ್ಯಾಕ್ಸ್‌ವೆಲ್‌ ಬೌಲಿಂಗ್‌ ಮೋಡಿಗೆ ಶರಣಾದ ಭಾರತ; 2-1 ಗೆಲುವಿನೊಂದಿಗೆ ಟೀಂ ಇಂಡಿಯಾಗೆ ಸರಣಿ ಕೈವಶ

Date:

ಭಾರತದ ವಿರುದ್ಧದ ಅಂತಿಮ ಹಾಗೂ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಬ್ಯಾಟಿಂಗ್ ಹಾಗೂ ಉತ್ತಮ ಬೌಲಿಂಗ್ ಪ್ರದರ್ಶನದಿಂದಾಗಿ 66 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದೆ. ಈಗಾಗಲೇ ಮೊದಲ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದ್ದ ಟೀಂ ಇಂಡಿಯಾ 2-1 ರಿಂದ ಸರಣಿಯನ್ನು ಕೈವಶ ಮಾಡಿಕೊಂಡಿತು.

ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯ ನೀಡಿದ್ದ 353 ರನ್‌ಗಳ ಭರ್ಜರಿ ಸವಾಲನ್ನು ಬೆನ್ನಟ್ಟಿದ್ದ ರೋಹಿತ್ ಶರ್ಮಾ ನೇತೃತ್ವದ ಭಾರತದ ಪಡೆ 49.4ಓವರ್‌ಗಳಲ್ಲಿ 286 ರನ್‌ಗಳಿಗೆ ಆಲೌಟ್ ಆಯಿತು. 

ಆಸಿಸ್ ಪರ ಆಲ್‌ರೌಂಡರ್‌ ಗ್ಲೆನ್ ಮ್ಯಾಕ್ಸ್‌ವೆಲ್ 40/4 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಮೂಲಕ ಆಸ್ಟ್ರೇಲಿಯ ಎರಡು ಪಂದ್ಯಗಳ ಸೋಲಿನ ಸೇಡನ್ನು ತೀರಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

57 ಎಸೆತಗಳಲ್ಲಿ 6 ಭರ್ಜರಿ ಸಿಕ್ಸರ್ 5 ಬೌಂಡರಿಯೊಂದಿಗೆ 81 ರನ್, ವಿರಾಟ್ ಕೊಹ್ಲಿ 56, ಶ್ರೇಯಸ್ ಅಯ್ಯರ್ 48 ಪ್ರತಿರೋಧ ತೋರಿದ್ದು ಬಿಟ್ಟರೆ ಉಳಿದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಸಫಲರಾಗಲಿಲ್ಲ.  ಕೊನೆಯವರೆಗೂ ಆಟವಾಡಿದ ಆಲ್‌ರೌಂಡರ್‌ ಜಡೇಜಾ 35 ರನ್‌ ಗಳಿಸಿ ಔಟಾದರು.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ಅದ್ಭುತ ಪ್ರದರ್ಶನ ತೋರಿ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 352 ರನ್ಗಳ ಬೃಹತ್ ಮೊತ್ತ ಕಲೆ ಹಾಕಿತು.

ಈ ಸುದ್ದಿ ಓದಿದ್ದೀರಾ? ಶುಭ್‌ಮನ್‌ ಗಿಲ್‌ – ಋತುರಾಜ್‌ ಆಕರ್ಷಕ ಅರ್ಧ ಶತಕ: ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ಜಯ

ಬ್ಯಾಟಿಂಗ್ ಪಿಚ್‌ನಲ್ಲಿ ಅಕ್ಷರಶಃ ರನ್ ಮಳೆಯನ್ನೇ ಹರಿಸಿದ ಆಸೀಸ್‌ನ ನಾಲ್ವರು ಆಟಗಾರರು ಬಿರುಸಿನ ಅರ್ಧಶತಕ ಸಿಡಿಸಿ ಮಿಂಚಿದರು. ನಾಯಕ ಪ್ಯಾಟ್ ಕಮಿನ್ಸ್ ನಿರ್ಧಾರ ಸಮರ್ಥಿಸುವಂತೆ ಬ್ಯಾಟಿಂಗ್ ನಡೆಸಿದ ಡೇವಿಡ್ ವಾರ್ನರ್ – ಮಿಚೆಲ್ ಮಾರ್ಷ್ ಬಿರುಸಿನ ಬ್ಯಾಟಿಂಗ್ ನಡೆಸಿದರು. ಮೊದಲ ವಿಕೆಟ್‌ಗೆ 78 ರನ್ ಜೊತೆಯಾಟವಾಡಿದರು.

ಇನ್ನಿಂಗ್ಸ್ ಆರಂಭದ ಮೊದಲ ಎಸೆತದಿಂದಲೇ ಸ್ಫೋಟಕ ಆಟವಾಡಿದ ಡೇವಿಡ್ ವಾರ್ನರ್, ಈ ಸರಣಿಯಲ್ಲಿ ಸತತ 3ನೇ ಅರ್ಧಶತಕ ಸಿಡಿಸಿದರು. 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವಾರ್ನರ್, 56 ರನ್ ಗಳಿಸಿದ್ದಾಗ ಪ್ರಸಿದ್ಧ್ ಕೃಷ್ಣ ಬೌಲಿಂಗ್‌ನಲ್ಲಿ ಕೀಪರ್ ರಾಹುಲ್‌ಗೆ ಕ್ಯಾಚ್ ನೀಡಿ ಹೊರನಡೆದರು. ಮೊದಲ ವಿಕೆಟ್ ನಷ್ಟವಾದರೂ ಆರ್ಭಟ ನಿಲ್ಲಿಸದ ಮಿಚೆಲ್ ಮಾರ್ಷ್ ಸ್ಟೀವ್ ಸ್ಮಿತ್ ಜೊತೆಗೂಡಿ 3ನೇ ವಿಕೆಟ್‌ಗೆ 137 ರನ್ ಬಾರಿಸಿದರು.

ವಾರ್ನರ್ ಔಟಾದ ಬಳಿಕವೂ ಒಂದೇ ಸಮನೆ ಬ್ಯಾಟ್‌ ಬೀಸಿದ ಮಿಚೆಲ್ ಮಾರ್ಷ್, ಶತಕದ ಗಡಿಯಲ್ಲಿ ವಿಕೆಟ್ ಒಪ್ಪಿಸಿದರು. 84 ಎಸೆತಗಳಲ್ಲಿ 13 ಬೌಂಡರಿ, 3 ಸಿಕ್ಸರ್ ಸಹಿತ 96 ರನ್ ಗಳಿಸಿ 4 ರನ್‌ಗಳಿಂದ ಶತಕ ವಂಚಿತರಾಗಿ ಕುಲ್ದೀಪ್ ಯಾದವ್‌ಗೆ ಔಟಾದರು. ಮತ್ತೊಂದೆಡೆ ಸ್ಮಿತ್ ಕೂಡ ಜವಾಬ್ದಾರಿಯುತ ಆಟದ ಜೊತೆಗೆ ಅಮೋಘ ಇನ್ನಿಂಗ್ಸ್ ಕಟ್ಟಿದರು. 61 ಎಸೆತಗಳಲ್ಲಿ 9 ಬೌಂಡರಿ ಸಹಿತ 72 ರನ್ ಚಚ್ಚಿದ ಸ್ಮಿತ್ ಸಿರಾಜ್ ಬೌಲಿಂಗ್‌ನಲ್ಲಿ ವಿಕೆಟ್‌ ಒಪ್ಪಿಸಿದರು.

4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಲಬುಶೇನ್ ಆರಂಭದಲ್ಲಿ ರಕ್ಷಣಾತ್ಮಕ ಆಟವಾಡಿದರು. ಪಂದ್ಯ ಮುಂದುವರೆದಂತೆ ಆಕ್ರಮಣಕಾರಿ ಬ್ಯಾಟಿಂಗ್ ನಡೆಸಿ ಕೊನೆಯವರೆಗೂ ಆಟವಾಡಿ 48.6 ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು.

ಭಾರತದ ಪರ ಜಸ್ಪ್ರೀತ್ ಬುಮ್ರಾ 3, ಕುಲ್ದೀಪ್ ಯಾದವ್ 2, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ತಲಾ 1 ವಿಕೆಟ್ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...