ಭಾರತದ ವಿರುದ್ಧ ಸೋಲು: ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಸ್ಟೀವ್ ಸ್ಮಿತ್

Date:

ಭಾರತ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾದ ನಾಯಕ ಸ್ಟೀವ್‌ ಸ್ಮಿತ್‌ ಅವರು ತಮ್ಮ ಏಕದಿನ ಕ್ರಿಕೆಟ್ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ನಾಯಕ ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಸ್ಮಿತ್, ಇನ್ನು ಮುಂದೆ ಟೆಸ್ಟ್ ಹಾಗೂ ಟಿ-20 ಮಾದರಿಗಳಲ್ಲಿ ಮುಂದುವರಿಯಲಿದ್ದಾರೆ.

2010ರಲ್ಲಿ ಲೆಗ್‌ಸ್ಪಿನ್‌ ಆಲ್‌ರೌಂಡರ್ ಆಗಿ ಏಕದಿನಕ್ಕೆ ಪದಾರ್ಪಣೆ ಮಾಡಿದ್ದ ಅವರು, ಈವರೆಗೆ 170 ಪಂದ್ಯಗಳಲ್ಲಿ 43.28 ಸರಾಸರಿಯಲ್ಲಿ 5,800 ರನ್ ಗಳಿಸಿದ್ದಾರೆ. 12 ಶತಕ ಹಾಗೂ 35 ಅರ್ಧಶತಕ ಅವರ ಹೆಸರಿನಲ್ಲಿವೆ. 2015 ಹಾಗೂ 2023ರ ಏಕದಿನ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ಸದಸ್ಯರೂ ಆಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುಬೈನಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸ್ಮಿತ್ 73 ರನ್ ಗಳಿಸಿದ ಪರಿಣಾಮ ಆಸ್ಟ್ರೇಲಿಯಾ 265 ಸ್ಪರ್ಧಾತ್ಮಕ ಮೊತ್ತ ಗಳಿಸಿತು. ಆದರೆ ವಿರಾಟ್‌ ಕೊಹ್ಲಿ ಅರ್ಧಶತಕ (84) ನೆರವಿನಿಂದ ಭಾರತ 4 ವಿಕೆಟ್ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತು. ಈ ಸೋಲಿನಿಂದ ಬೇಸತ್ತ ಸ್ಮಿತ್ ತಮ್ಮ 25 ವರ್ಷಗಳ ಏಕದಿನ ಪಯಣಕ್ಕೆ ವಿದಾಯ ಹೇಳಿದ್ದಾರೆ ಎಂದು ವರದಿಯಾಗಿದೆ.

ಟೆಸ್ಟ್ ಕ್ರಿಕೆಟ್ ನ ಫ್ಯಾಬ್ 4ರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಸ್ಟೀವನ್ ಸ್ಮಿತ್ 2015ರ ಏಕದಿನ ಹಾಗೂ 2021ರ ಟ್ವೆಂಟಿ-20 ವಿಶ್ವಕಪ್ ಟೂರ್ನಿಗಳಲ್ಲಿ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು.

“ನನ್ನ ವೃತ್ತಿ ಜೀವನದಲ್ಲಿ ಹಲವಾರು ಉತ್ಕೃಷ್ಟ ಆಟಗಾರರೊಂದಿಗೆ ಮೈದಾನ ಹಂಚಿಕೊಂಡಿದ್ದೇನೆ. ಅಲ್ಲದೆ ಎರಡು ವಿಶ್ವಕಪ್ ಗೆದ್ದಿರುವುದು ಸದಾ ನೆನಪಾಗಿರುತ್ತದೆ. ಮುಂಬರುವ 2027ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಯುವ ಆಟಗಾರರಿಗೆ ತಂಡದಲ್ಲಿ ಸ್ಥಾನ ಕಲ್ಪಿಸುವ ದೃಷ್ಟಿಯಿಂದಾಗಿ ಏಕದಿನ ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳುವ ನಿರ್ಧಾರ ಕೈಗೊಂಡಿದ್ದರೂ, ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಟೆಸ್ಟ್ ಕ್ರಿಕೆಟ್ ನತ್ತ ಸಂಪೂರ್ಣವಾಗಿ ಗಮನಹರಿಸುತ್ತೇನೆ” ಎಂದು ಸ್ಟೀವನ್ ಸ್ಮಿತ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...