ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯದ ಎರಡನೇ ದಿನವಾದ ಇಂದು ಆಸ್ಟ್ರೇಲಿಯಾ ತಂಡವನ್ನು 212 ರನ್‌ಗಳಿಗೆ ಆಲೌಟ್ ಮಾಡಿ ಮೊದಲ ಇನಿಂಗ್ಸ್ ಆರಂಭಿಸಿದ್ದ ದಕ್ಷಿಣ ಆಫ್ರಿಕಾ ತಂಡ ಹೀನಾಯ ಪ್ರದರ್ಶನ ನೀಡಿ 57.1 ಓವರ್‌ಗಳಲ್ಲಿ 138 ರನ್‌ಗಳಿಗೆ ಆಲೌಟ್ ಆಗಿದೆ.
ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಅವರ ಮಾರಕ ದಾಳಿಗೆ ಹರಿಣಿಗಳ ಪಡೆ ಸರದಿ ಸಾಲಿನಲ್ಲಿ ಪೆವಿಲಿಯನ್‌ಗೆ ತೆರಳಿದರು. ಆಸ್ಟ್ರೇಲಿಯಾ ಪರ ನಾಯಕ ಕಮ್ಮಿನ್ಸ್ ಆರು ವಿಕೆಟ್‌ಗಳನ್ನು ಕಬಳಿಸಿದರೆ, ಮಿಚೆಲ್ ಸ್ಟಾರ್ಕ್ ಎರಡು ಮತ್ತು ಜೋಶ್ ಹೇಜಲ್‌ವುಡ್ ಒಂದು ವಿಕೆಟ್ ಪಡೆದರು. ಇತ್ತ ಆಫ್ರಿಕಾ ಪರ ನಾಲ್ವರು ಬ್ಯಾಟ್ಸ್‌ಮನ್‌ಗಳು ಮಾತ್ರ ಎರಡಂಕಿ ತಲುಪಲು ಸಾಧ್ಯವಾಯಿತು.
ದಕ್ಷಿಣ ಆಫ್ರಿಕಾ ಪರ ಡೇವಿಡ್ ಬೆಡಿಂಗ್‌ಹ್ಯಾಮ್ ಅತ್ಯಧಿಕ 45 ರನ್ ಗಳಿಸಿದರೆ, ನಾಯಕ ಟೆಂಬಾ ಬವುಮಾ 36 ರನ್ ಗಳಿಸಿ ಔಟಾದರು. ರಯಾನ್ ರಿಕಲ್ಟನ್ 16 ಮತ್ತು ಕೈಲ್ ವೆರ್ರೆಯ್ನ್ 13 ರನ್‌ಗಳ ಕೊಡುಗೆ ನೀಡಿದರು.
ಮೊದಲ ದಿನದಾಟದಂತ್ಯಕ್ಕೆ 43 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಆಫ್ರಿಕಾದ ಇನಿಂಗ್ಸ್ ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದ ನಾಯಕ ಬವುಮಾ ಮತ್ತು ಬೆಡಿಂಗ್ಹ್ಯಾಮ್ ಐದನೇ ವಿಕೆಟ್‌ಗೆ 64 ರನ್‌ಗಳ ಜೊತೆಗಾರಿಕೆಯನ್ನು ಹಂಚಿಕೊಂಡರು. ಆದರೆ ಈ ಪಾಲುದಾರಿಕೆ ಮುರಿದ ತಕ್ಷಣ ದಕ್ಷಿಣ ಆಫ್ರಿಕಾದ ಇನಿಂಗ್ಸ್ ಕುಸಿಯಿತು.
ಇದನ್ನು ಓದಿದ್ದೀರಾ? ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ದಾಖಲೆ ಅಳಿಸಿದ ಜೋಸ್ ಬಟ್ಲರ್
ದಕ್ಷಿಣ ಆಫ್ರಿಕಾ ಪರ, ವಿಯಾನ್ ಮುಲ್ಡರ್ ಆರು, ಟ್ರಿಸ್ಟಾನ್ ಸ್ಟಬ್ಸ್ ಎರಡು, ಕೇಶವ್ ಮಹಾರಾಜ್ ಏಳು ಮತ್ತು ಕಗಿಸೊ ರಬಾಡ ಒಂದು ರನ್ ಗಳಿಸಿದರೆ ಐಡೆನ್ ಮಾರ್ಕ್ರಾಮ್ ಮತ್ತು ಮಾರ್ಕೊ ಯಾನ್ಸೆನ್ಗೆ ಖಾತೆ ತೆರೆಯಲು ಸಹ ಸಾಧ್ಯವಾಗಲಿಲ್ಲ.
ಪ್ಯಾಟ್ ಕಮ್ಮಿನ್ಸ್ ಈ ಆವೃತ್ತಿಯಲ್ಲಿ ಆರನೇ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದರು. ಅಷ್ಟೇ ಅಲ್ಲದೆ ಪ್ರಸ್ತುತ ಡಬ್ಲ್ಯೂಟಿಸಿ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಆಗಿದ್ದಾರೆ. ಅವರು 2023-25ರ ಆವೃತ್ತಿಯಲ್ಲಿ ಇದುವರೆಗೆ 79 ವಿಕೆಟ್‌ಗಳನ್ನು ಕಬಳಿಸಿದ್ದು ಈ ಮೂಲಕ ಭಾರತದ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿದ್ದಾರೆ.
ಎರಡನೃ ಇನಿಂಗ್ಸ್ ಆಡುತ್ತಿರುವ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಅನುಭವಿಸಿದ್ದು, ಟೀ ವಿರಾಮದ ನಂತರ 17.3 ಓವರ್‌ಗಳಲ್ಲಿ 43 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದೆ. ವೇಗಿ ಕಗ್ಗಿಸೊ ರಬಾಡ ಖವಾಜಾ ಮತ್ತು ಗ್ರೀನ್ ಅವರ ವಿಕಿಟ್ ಕಿತ್ತು ತಂಡಕ್ಕೆ ಬಲ ನೀಡಿದ್ದಾರೆ.





