ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಟಿ-20ಗೆ ದಿಢೀರ್ ವಿದಾಯ

Date:

ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ್ದಾರೆ. ಮುಂಬರುವ ಏಕದಿನ ವಿಶ್ವಕಪ್​ಗೆ ಆದ್ಯತೆ ನೀಡುವ ಸಲುವಾಗಿ ಚುಟುಕು ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸುತ್ತಿರುವುದಾಗಿ ಸ್ಟಾರ್ಕ್ ತಿಳಿಸಿದ್ದಾರೆ.‌

13 ವರ್ಷಗಳ ವರ್ಷಗಳ ಸುದೀರ್ಘ ಚುಟುಕು ಕ್ರಿಕೆಟ್ ಆಟದಲ್ಲಿ ಇದ್ದರು. ಆಸ್ಟ್ರೇಲಿಯಾ ಕ್ರಿಕೆಟ್ ಸರ್ವ ಶ್ರೇಷ್ಠ ವೇಗಿಗಳಲ್ಲಿ ಒಬ್ಬರಾಗಿದ್ದರು. ಮಿಚೆಲ್ ಸ್ಟಾರ್ಕ್ ದಿಢೀರ್ ನಿವೃತ್ತಿ ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಆಗಿಸಿದೆ.

“ಸದ್ಯ ನಾನು ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಆದಾಗ್ಯೂ ಏಕದಿನ ಹಾಗೂ ಟೆಸ್ಟ್​ ಕ್ರಿಕೆಟ್​ನಲ್ಲಿ ಮುಂದುವರೆಯುವೆ. ನನ್ನ ಮೊದಲ ಆದ್ಯತೆ ಯಾವತ್ತಿದ್ದರೂ ಅದು ಟೆಸ್ಟ್ ಆಡುವುದು. ಹಾಗೆಯೇ 2027ರ ಏಕದಿನ ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಟಿ-20 ಕ್ರಿಕೆಟ್​ಗೆ ವಿದಾಯ ಹೇಳಿದ್ದೇನೆ” ಎಂದು ಮಿಚೆಲ್ ಸ್ಟಾರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಟಾರ್ಕ್ ಆಸೀಸ್ ಪರ ಒಟ್ಟು 65 ಟಿ-20 ಪಂದ್ಯಗಳನ್ನು ಆಡಿದ್ದಾರೆ. 2021ರ ಟಿ20 ವಿಶ್ವಕಪ್ ಗೆಲುವಲ್ಲಿ ಸ್ಟಾರ್ಕ್ ಪ್ರಮುಖ ಪಾತ್ರವಹಿಸಿದ್ದರು. 2024 ರಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆದ ಟಿ-20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಪರ ಸ್ಟಾರ್ಕ್ ಕೊನೆಯ ಬಾರಿ ಟಿ-20 ಪಂದ್ಯ ಆಡಿದ್ದರು.

ಆಸ್ಟ್ರೇಲಿಯಾ ಪರ ಆಡಮ್ ಜಂಪಾ ನಂತರ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ಸ್ಟಾರ್ಕ್ ಪಾತ್ರರಾಗಿದ್ದಾರೆ. 2012 ರಲ್ಲಿ ಪಾಕಿಸ್ತಾನ ವಿರುದ್ಧ ಆಡುವ ಮೂಲಕ ಟಿ-20 ತಂಡದಲ್ಲಿ ಸ್ಥಾನ ಪಡೆದಿದ್ದರು.

ಆಸ್ಟ್ರೇಲಿಯಾ ಪರ 65 ಟಿ20 ಪಂದ್ಯಗಳನ್ನಾಡಿರುವ ಮಿಚೆಲ್ ಸ್ಟಾರ್ಕ್ 1458 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 1881 ರನ್​ಗಳನ್ನು ನೀಡಿರುವ ಅವರು ಒಟ್ಟು 79 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...