US Open Badminton: ಕರ್ನಾಟಕದ ಆಯೂಷ್‌ ಶೆಟ್ಟಿ ಚಾಂಪಿಯನ್‌;ಮಹಿಳೆಯರ ವಿಭಾಗದಲ್ಲಿ ತನ್ವಿ ಶರ್ಮಾ ರನ್ನರ್‌ ಅಪ್‌

Date:

ಯುಎಸ್‌ ಓಪನ್‌ BWF Super 300 ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಕಾರ್ಕಳ ಮೂಲದ 20 ವರ್ಷದ ಆಯೂಷ್‌ ಶೆಟ್ಟಿ ಚಾಂಪಿಯನ್‌ ಆಗಿ ಹೊಮ್ಮಿದ್ದಾರೆ. ಹಾಗೆಯೇ ಮಹಿಳೆಯರ ವಿಭಾಗದಲ್ಲಿ ಭಾರತದ ತನ್ವಿ ಶರ್ಮಾ ರನ್ನರ್‌ ಅಪ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಆಯುಷ್ ಫೈನಲ್‌ನಲ್ಲಿ ಕೆನಡಾದ ಬ್ರಿಯಾನ್ ಯಾಂಗ್ ಅವರನ್ನು 21-18, 21-13 ಅಂತರದಿಂದ ಸೋಲಿಸಿ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. 2025 ರಲ್ಲಿ ಭಾರತಕ್ಕೆ ಸಿಕ್ಕಿದ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿ ಇದಾಗಿದೆ.

6 ಅಡಿ 4 ಇಂಚು ಎತ್ತರ ಹೊಂದಿರುವ ಆಯುಷ್‌ ಶೆಟ್ಟಿ ಭರ್ಜರಿ ಸ್ಮ್ಯಾಶ್ ಹೊಡೆಯುವ ಮೂಲಕ ನೇರ ಸೆಟ್‌ಗಳಿಂದ ಪಂದ್ಯದಲ್ಲಿ ಜಯಶಾಲಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯರ ವಿಭಾಗದಲ್ಲಿ ಭಾರತದ ತನ್ವಿ ಶರ್ಮಾ ರನ್ನರ್‌ ಅಪ್‌ ಪ್ರಶಸ್ತಿಗೆ ಭಾಜನರಾದರು. ತಾನ್ವಿ ಶರ್ಮಾ ಚೀನಾದ ಬೈವೆನ್‌ ಜೆಂಗ್‌ ಅವರನ್ನು 21-16, 21-16 ನೇರ ಸೆಟ್‌ಗಳಿಂದ ಪರಾಭವಗೊಂಡರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ

ಈ ವರ್ಷದ ಆರಂಭದಲ್ಲಿ ಆಯೂಷ್‌ ಶೆಟ್ಟಿ ಓರ್ಲಿಯನ್ಸ್ ಮಾಸ್ಟರ್ಸ್ ಸೂಪರ್ 300 ರ ಸೆಮಿಫೈನಲ್ ತಲುಪಿದ್ದರು. ಮಾಜಿ ವಿಶ್ವ ಚಾಂಪಿಯನ್ ಲೋಹ್ ಕೀನ್ ಯೂ ಮತ್ತು ರಾಸ್ಮಸ್ ಗೆಮ್ಕೆ ಅವರನ್ನು ಸೋಲಿಸಿದರು. ಮೇ ತಿಂಗಳಲ್ಲಿ ಅವರು ಹಿರಿಯ ಆಟಗಾರ ಕಿಡಂಬಿ ಶ್ರೀಕಾಂತ್ ಅವರನ್ನು ಸೋಲಿಸಿ ತೈಪೆ ಓಪನ್‌ನ ಸೆಮಿಫೈನಲ್ ಪ್ರವೇಶಿಸಿದ್ದರು.

ಆಯುಷ್ ಶೆಟ್ಟಿ ತಮ್ಮ ಎಂಟನೇ ವಯಸ್ಸಿನಲ್ಲಿ ಬ್ಯಾಡ್ಮಿಂಟನ್ ಆಡಲು ಆರಂಭಿಸಿದ್ದರು. ತಂದೆ ಮನೆಯ ಅಂಗಳದಲ್ಲಿ ಆಡುವುದನ್ನು ನೋಡಿ ಬ್ಯಾಡ್ಮಿಂಟನ್‌ ಆಟದತ್ತ ಆಸಕ್ತಿ ಬೆಳೆಸಿದರು. ಆರಂಭದಲ್ಲಿ ಕಾರ್ಕಳ ಮತ್ತು ಮಂಗಳೂರಿನಲ್ಲಿ ತರಬೇತಿ ಪಡೆದಿದ್ದರು. ನಂತರ ಆಯುಷ್ ಶೆಟ್ಟಿ ಕುಟುಂಬ ಬೆಂಗಳೂರಿಗೆ ನೆಲೆಗೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...