ಬಾಂಗ್ಲಾ ಪರ ಅತ್ಯಧಿಕ ಏಕದಿನ ಪಂದ್ಯವಾಡಿರುವ ಕ್ರಿಕೆಟಿಗ ಮುಷ್ಫಿಕರ್ ರಹೀಮ್ ನಿವೃತ್ತಿ ಘೋಷಣೆ

Date:

2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಂಗ್ಲಾದೇಶ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾದ ಬೆನ್ನಲ್ಲೇ ಬಾಂಗ್ಲಾ ಕ್ರಿಕೆಟಿಗ ಮುಷ್ಫಿಕರ್ ರಹೀಮ್ ಏಕದಿನ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ.

37 ವರ್ಷದ ವಿಕೆಟ್ ಕೀಪರ್-ಬ್ಯಾಟರ್ ತಮ್ಮ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆಯುವುದಾಗಿ ಎಕ್ಸ್ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ. ಹಾಗೆಯೇ ಕಳೆದ ಎರಡು ವಾರಗಳಲ್ಲಿ ಸಾಕಷ್ಟು ಸವಾಲುಗಳು ಎದುರಾದವು ಎಂದು ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಭಾರತದ ವಿರುದ್ಧ ಸೋಲು: ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಸ್ಟೀವ್ ಸ್ಮಿತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ದುಬೈನಲ್ಲಿ ನಡೆದ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಭಾರತ ವಿರುದ್ಧ ಸೋತ ನಂತರ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಅದಾದ ಬಳಿಕ ಈಗ ಬಾಂಗ್ಲಾ ಕ್ರಿಕೆಟಿಗ ಮುಷ್ಫಿಕರ್ ರಹೀಮ್ ನಿವೃತ್ತಿ ಘೋಷಿಸಿದ್ದಾರೆ.

ಬೊಗ್ರಾ ಮೂಲದ ಮುಷ್ಫಿಕರ್ 2005ರಲ್ಲಿ ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ಪಂದ್ಯದ ಮೂಲಕ ವೃತ್ತಿ ಜೀವನ ಆರಂಭಿಸಿದರು. 19 ವರ್ಷಗಳ ಕಾಲ ಏಕದಿನ ಪಂದ್ಯಗಳನ್ನು ಆಡಿದ್ದಾರೆ. 2022ರಲ್ಲಿ ಅಂತಾರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದ ಮುಷ್ಫಿಕರ್ ಸದ್ಯ ಟೆಸ್ಟ್ ಕ್ರಿಕೆಟ್ ಮಾತ್ರ ಆಡಲಿದ್ದಾರೆ.

ಇದನ್ನು ಓದಿದ್ದೀರಾ? ಎಲ್ಲ ಮಾದರಿ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾ

ಮುಷ್ಫಿಕರ್ ರಹೀಮ್ ಬಾಂಗ್ಲಾದೇಶ ಪರ ಅತಿ ಹೆಚ್ಚು (274) ಏಕದಿನ ಪಂದ್ಯಗಳನ್ನು ಆಡಿದ ಆಟಗಾರರಾಗಿದ್ದಾರೆ. ಶಕೀಬ್ ಅಲ್ ಹಸನ್ (247), ತಮೀಮ್ ಇಕ್ಬಾಲ್ (243), ಮಹ್ಮದುಲ್ಲಾ (239) ಮತ್ತು ಮಶ್ರಫೆ ಮೊರ್ತಾಜಾ (218) ತಮ್ಮ ವೃತ್ತಿಜೀವನದಲ್ಲಿ 200ಕ್ಕೂ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಇತರ ಬಾಂಗ್ಲಾದೇಶ ಕ್ರಿಕೆಟಿಗರು.

ಮುಷ್ಫಿಕರ್ ರಹೀಮ್ ಬಾಂಗ್ಲಾದೇಶದ ಪರ ಏಕದಿನ ಪಂದ್ಯಗಳಲ್ಲಿ ಅತೀ ಅಧಿಕ ರನ್‌ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ತಮೀಮ್ ಇಕ್ಬಾಲ್ 8357 ರನ್‌ ಗಳಿಸಿ ಮೊದಲ ಸ್ಥಾನದಲ್ಲಿದ್ದರೆ, 274 ಪಂದ್ಯಗಳಿಂದ 7795 ಗಳಿಸುವ ಮೂಲಕ ರಹೀಮ್ ಎರಡನೇ ಸ್ಥಾನದಲ್ಲಿದ್ದಾರೆ.

ಇನ್ನು ರಹೀಮ್ ವಿಕೆಟ್ ಕೀಪರ್ ಕೂಡಾ ಹೌದು. ಮುಷ್ಫಿಕರ್ ರಹೀಮ್ 260 ಪಂದ್ಯಗಳಲ್ಲಿ 7 ಶತಕಗಳು ಮತ್ತು 47 ಅರ್ಧಶತಕ ಗಳಿಸಿದ್ದಾರೆ. ಹಾಗೆಯೇ ಏಕದಿನ ವಿಶ್ವಕಪ್‌ನಲ್ಲಿ ಶತಕ ಗಳಿಸಿದ ಮೂವರು ಬಾಂಗ್ಲಾದೇಶದ ಬ್ಯಾಟ್ಸ್‌ಮನ್‌ಗಳಲ್ಲಿ ಮುಷ್ಫಿಕರ್ ರಹೀಮ್ (ಇನ್ನಿಬ್ಬರು ಮಹ್ಮದುಲ್ಲಾ, ಶಕೀಬ್ ಅಲ್ ಹಸನ್) ಕೂಡಾ ಒಬ್ಬರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...