ಭಾರತಕ್ಕೆ ಬರಲ್ಲ ಎಂದ ಬಾಂಗ್ಲಾಕ್ಕೆ ಐಸಿಸಿಯಿಂದ ಆಘಾತ; ಸ್ಕಾಟ್ಲೆಂಡ್‌ಗೆ ಟಿ20 ವಿಶ್ವಕಪ್ ಅವಕಾಶ

Date:

2026ರ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮಹತ್ವದ ಮತ್ತು ಕಠಿಣ ನಿರ್ಧಾರವೊಂದನ್ನು ಕೈಗೊಂಡಿದೆ. ಭದ್ರತಾ ಕಾರಣಗಳನ್ನು ಮುಂದಿಟ್ಟು ಭಾರತಕ್ಕೆ ಪ್ರಯಾಣಿಸಲು ನಿರಾಕರಿಸಿದ ಬಾಂಗ್ಲಾದೇಶ ತಂಡವನ್ನು ವಿಶ್ವಕಪ್ ಟೂರ್ನಿಯಿಂದ ಐಸಿಸಿ ಅಧಿಕೃತವಾಗಿ ಹೊರಹಾಕಿದೆ. ಬಾಂಗ್ಲಾ ಬದಲಿಗೆ ಸ್ಕಾಟ್ಲೆಂಡ್ ತಂಡವನ್ನು ಟೂರ್ನಿಗೆ ಸೇರ್ಪಡೆಗೊಳಿಸಿ ಐಸಿಸಿ ಆದೇಶ ಹೊರಡಿಸಿದೆ.

​ಶುಕ್ರವಾರ (ಜ.23) ದುಬೈನಲ್ಲಿ ಐಸಿಸಿ ಅಧ್ಯಕ್ಷ ಜಯ್ ಶಾ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಣಾಯಕ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಭಾರತದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಪಾಲ್ಗೊಳ್ಳಲು ತಮಗೆ ಭದ್ರತಾ ಆತಂಕವಿದ್ದು, ಈ ಕುರಿತು ಐಸಿಸಿ ಸೂಕ್ತ ಭರವಸೆ ನೀಡಿಲ್ಲ ಎಂದು ಆರೋಪಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ತಕರಾರು ತೆಗೆದಿತ್ತು. ಗುರುವಾರ ಆಟಗಾರರೊಂದಿಗೆ ಸಭೆ ನಡೆಸಿದ ನಂತರ, ಬಿಸಿಬಿ ಪತ್ರಿಕಾಗೋಷ್ಠಿ ನಡೆಸಿ ಟೂರ್ನಿಯನ್ನು ಬಹಿಷ್ಕರಿಸುವುದಾಗಿ ಘೋಷಿಸಿತ್ತು.

​ವಿವಾದವನ್ನು ಇತ್ಯರ್ಥಪಡಿಸಲು ‘ವ್ಯಾಜ್ಯ ಪರಿಹಾರ ಸಮಿತಿ’ಗೆ ವಿಷಯವನ್ನು ವರ್ಗಾಯಿಸುವಂತೆ ಬಾಂಗ್ಲಾದೇಶ ಕೊನೆಯ ಪ್ರಯತ್ನವಾಗಿ ಪತ್ರ ಬರೆದಿತ್ತಾದರೂ, ಮೇಲ್ಮನವಿ ವೇದಿಕೆಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಸಮಿತಿ ಸ್ಪಷ್ಟಪಡಿಸಿದೆ. ಐಸಿಸಿ ನೀಡಿದ್ದ ಅಂತಿಮ ಗಡುವಿನೊಳಗೆ ಬಿಸಿಬಿ ತನ್ನ ನಿಲುವು ಬದಲಿಸದ ಕಾರಣ, ಅಂತಿಮವಾಗಿ ಬಾಂಗ್ಲಾದೇಶವನ್ನು ಕೈಬಿಟ್ಟು ಸ್ಕಾಟ್ಲೆಂಡ್ ತಂಡವನ್ನು ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಗೌತಮ್‌ ಗಂಭೀರ್; ತಂಡವನ್ನು ಗೆಲ್ಲಿಸುತ್ತಿಲ್ಲ, ತಾವೂ ಬದಲಾಗುತ್ತಿಲ್ಲ

ಯುರೋಪಿಯನ್ ಅರ್ಹತಾ ಸುತ್ತಿನಲ್ಲಿ ಇಟಲಿ, ನೆದರ್ಲೆಂಡ್ಸ್ ಮತ್ತು ಜೆರ್ಸಿ ತಂಡಗಳಿಗಿಂತ ಹಿಂದಿದ್ದರೂ, ಐಸಿಸಿ ಶ್ರೇಯಾಂಕದ ಆಧಾರದ ಮೇಲೆ ಸ್ಕಾಟ್ಲೆಂಡ್ ತಂಡಕ್ಕೆ ವಿಶ್ವಕಪ್ ಟಿಕೆಟ್ ಲಭಿಸಿದೆ. ಸ್ಕಾಟ್ಲೆಂಡ್ ಇದುವರೆಗೆ ಐದು ಟಿ20 ವಿಶ್ವಕಪ್‌ಗಳಲ್ಲಿ ಭಾಗವಹಿಸಿದ್ದು, ಕಳೆದ 2024ರ ಆವೃತ್ತಿಯಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳಿಗೆ ಪ್ರಬಲ ಪೈಪೋಟಿ ನೀಡಿ ಗಮನ ಸೆಳೆದಿತ್ತು.

​ಸ್ಕಾಟ್ಲೆಂಡ್ ಪಂದ್ಯಗಳ ವೇಳಾಪಟ್ಟಿ:
ಬಾಂಗ್ಲಾದೇಶದ ಬದಲಿಯಾಗಿ ‘ಸಿ’ ಗುಂಪಿನಲ್ಲಿ ಸ್ಥಾನ ಪಡೆದಿರುವ ಸ್ಕಾಟ್ಲೆಂಡ್; ಇಂಗ್ಲೆಂಡ್, ವೆಸ್ಟ್ ಇಂಡೀಸ್, ಇಟಲಿ ಮತ್ತು ನೇಪಾಳದೊಂದಿಗೆ ಸೆಣಸಲಿದೆ.

​ಫೆಬ್ರವರಿ 7: ವೆಸ್ಟ್ ಇಂಡೀಸ್ ವಿರುದ್ಧ (ಸ್ಥಳ: ಕೋಲ್ಕತ್ತಾ)
​ಫೆಬ್ರವರಿ 9: ಇಟಲಿ ವಿರುದ್ಧ (ಸ್ಥಳ: ಈಡನ್ ಗಾರ್ಡನ್ಸ್, ಕೋಲ್ಕತ್ತಾ)
​ಫೆಬ್ರವರಿ 14: ಇಂಗ್ಲೆಂಡ್ ವಿರುದ್ಧ (ಸ್ಥಳ: ಈಡನ್ ಗಾರ್ಡನ್ಸ್, ಕೋಲ್ಕತ್ತಾ)
​ಫೆಬ್ರವರಿ 17: ನೇಪಾಳ ವಿರುದ್ಧ (ಸ್ಥಳ: ಮುಂಬೈ)

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...