ಏಷ್ಯಾ ಕಪ್ | ಶುಭ್‌ಮನ್‌ ಗಿಲ್ ಶತಕ ವ್ಯರ್ಥ; ಸಂಘಟಿತ ಹೋರಾಟದಿಂದ ಬಾಂಗ್ಲಾಗೆ ಗೆಲುವು

Date:

ಏಷ್ಯಾ ಕಪ್ ಸೂಪರ್‌ 4 ಅಂತಿಮ ಹಾಗೂ ಅಪೌಚಾರಿಕ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಭಾರತದ ವಿರುದ್ಧ 6 ರನ್‌ಗಳ ರೋಚಕ ಜಯ ಗಳಿಸಿತು.

ಕೊಲೊಂಬೊದ ಆರ್​ ಪ್ರೇಮದಾಸ ಮೈದಾನದಲ್ಲಿ ನಡೆದ ಈ ಹಣಾಹಣಿಯಲ್ಲಿ ಬಾಂಗ್ಲಾದೇಶ ನೀಡಿದ 266 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ 49.5 ಓವರ್‌ಗಳಲ್ಲಿ 259 ರನ್‌ಗಳಿಗೆ ಆಲೌಟ್‌ ಆಯಿತು. ಭಾರತದ ಸ್ಟಾರ್‌ ಆಟಗಾರರೆಲ್ಲರೂ ಕಳೆ ಪ್ರದರ್ಶನ ನೀಡಿದರೂ ಆರಂಭಿಕ ಆಟಗಾರ ಶುಭ್‌ಮನ್‌ ಗಿಲ್‌(121,133 ಎಸೆತ, 5 ಸಿಕ್ಸ್, 8 ಬೌಂಡರಿ) ಏಕಾಂಗಿ ಹೋರಾಟದ ಮೂಲಕ ಶತಕ ಗಳಿಸಿ ಮೆಚ್ಚುಗೆಗೆ ಕಾರಣರಾದರು.

ಕೊನೆಯಲ್ಲಿ 42(34 ಎಸೆತ,3 ಬೌಂಡರಿ, 2 ಸಿಕ್ಸರ್ ) ರನ್‌ ಗಳಿಸಿ ಆಡವಾಡುತ್ತಿದ್ದ ಆಲ್‌ರೌಂಡರ್‌ ಅಕ್ಷರ್‌ ಪಟೇಲ್ ಔಟಾಗುವುದರೊಂದಿಗೆ ಭಾರತದ ಗೆಲುವಿನ ಕನಸು ಕಮರಿಹೋಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಂಗ್ಲಾ ಪರ ಮುಸ್ತಫಿಜುರ್ ರೆಹಮಾನ್ 50/3, ತಂಜಿಮ್ ಹಸನ್ ಸಾಕಿಬ್ 32/1 ಹಾಗೂ ಮಹೇದಿ ಹಸನ್ 50/2 ವಿಕೆಟ್ ಗಳಿಸುವ ಮೂಲಕ ಗೆಲುವಿನ ರೂವಾರಿಗಳಾದರು.

ಇದಕ್ಕೂ ಮೊದಲು ಟಾಸ್‌ ಗೆದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಬಾಂಗ್ಲಾದೇಶವನ್ನು ಬ್ಯಾಂಟಿಂಗ್‌ಗೆ ಆಹ್ವಾನಿಸಿದರು. ನಿಗದಿತ 50 ಓವರ್‌ಗಳನ್ನು ಆಡಿದ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 265 ರನ್ ಕಲೆ ಹಾಕಿತು.

2023ರ ಏಕದಿನ ಕ್ರಿಕೆಟ್ ವಿಶ್ವಕಪ್‌ನ ನ್ಯೂಜಿಲೆಂಡ್ ತಂಡದಲ್ಲಿ ಬೆಂಗಳೂರು ಮೂಲದ ಕನ್ನಡಿಗನಿಗೆ ಸ್ಥಾನ

ಆರಂಭದಲ್ಲಿ ಬಾಂಗ್ಲಾದೇಶಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಭಾರತೀಯ ವೇಗಿಗಳ ಮಾರಕ ದಾಳಿಗೆ ಪೆಲಿವಿಯನ್ ಪರೇಡ್ ನಡೆಸಿದರು. ತಂಜಿದ್ ಹಸನ್ (13), ಅನಾಮುಲ್ ಹಕ್​​ಗೆ (4) ಶಾರ್ದೂಲ್​ ಠಾಕೂರ್​ ಔಟ್‌ ಮಾಡಿದರು. ಲಿಟನ್ ದಾಸ್​ (4) ಮತ್ತು ಮೆಹಿದಿ ಹಸನ್ ಮಿರಾಜ್ (13) ಅವರು ಮೊಹಮ್ಮದ್ ಶಮಿ ಮತ್ತು ಅಕ್ಷರ್​​ ಪಟೇಲ್​ ಬೌಲಿಂಗ್​ನಲ್ಲಿ ಪೆವಿಲಿಯನ್‌ಗೆ ತೆರಳಿದರು.

ಶಕೀಬ್​ – ಹೃದೋಯ್ ಅರ್ಧಶತಕ
59 ರನ್​ಗಳಿಗೆ 4 ವಿಕೆಟ್​ ಕಳೆದುಕೊಂಡು ಸಂಕಷ್ಟದಲ್ಲಿದ್ದ ಬಾಂಗ್ಲಾಗೆ ನಾಯಕ ಶಕೀಬ್ ಅಲ್ ಹಸನ್ ಮತ್ತು ತೌಹಿದ್ ಹೃದೋಯ್​ ಉತ್ತಮ ಪ್ರದರ್ಶನ ನೀಡಿದರು. ತಲಾ ಅರ್ಧಶತಕ ಸಿಡಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಭಾರತೀಯ ಬೌಲರ್​​ಗಳಿಗೆ ಕಾಡಿದ ಶಕೀಬ್​, ವೃತ್ತಿಜೀವನದ 55ನೇ ಅರ್ಧಶತಕ ಸಿಡಿಸಿದರು. 85 ಎಸೆತಗಳಲ್ಲಿ 6 ಬೌಂಡರಿ, 3 ಸಿಕ್ಸರ್​​ಗಳ ನೆರವಿನಿಂದ 80 ರನ್​ ಗಳಿಸಿ ಶಾರ್ದೂಲ್​ಗೆ ವಿಕೆಟ್​ ಒಪ್ಪಿಸಿದರು.

ಮತ್ತೊಂದೆಡೆ ಶಕೀಬ್​ಗೆ ಅದ್ಭುತವಾಗಿ ಸಾಥ್ ನೀಡಿದ ತೌಹಿದ್ ಹೃದೋಯ್ ಕೂಡ ಅರ್ಧಶತಕ ಚಚ್ಚಿದರು. ವೃತ್ತಿಜೀವನದ ಐದನೇ ಅರ್ಧಶತಕ ಸಿಡಿಸಿದ ತೌಹಿದ್, ಜವಾಬ್ದಾರಿಯುತ ಇನ್ನಿಂಗ್ಸ್​​ ಕಟ್ಟಿದರು. ಆದರೆ ತಂಡವನ್ನು ಉತ್ತಮ ಮೊತ್ತದತ್ತ ಕೊಂಡೊಯ್ಯುತ್ತಿದ್ದ ತೌಹಿದ್, 81 ಎಸೆತಗಳಲ್ಲಿ 54 ರನ್​ ಗಳಿಸಿ ಶಮಿ ಬೌಲಿಂಗ್​ನಲ್ಲಿ ಔಟಾದರು. ಅಂತಿಮವಾಗಿ ಬಾಂಗ್ಲಾದೇಶ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 265 ರನ್ ಪೇರಿಸಿತು.

ಜಡೇಜಾ 200 ವಿಕೆಟ್​ಗಳ ಸಾಧನೆ
ಭಾರತ ತಂಡದ ಆಲ್​ರೌಂಡರ್​ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ 200 ವಿಕೆಟ್​ಗಳ ಸಾಧನೆ ಮಾಡಿದರು. ಶಮೀಮ್ ಹೊಸೈನ್​ರನ್ನು ಎಲ್​ಬಿಡಬ್ಲ್ಯು ಬಲೆಗೆ ಬೀಳಿಸಿದ ಜಡೇಜಾ ಏಕದಿನ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದರು.

ಇನ್ನುಳಿದಂತೆ ಟೀಂ ಇಂಡಿಯಾ ಪರ ಶಾರ್ದೂಲ್​ 3 , ಮೊಹಮ್ಮದ್ ಶಮಿ 2 , ಅಕ್ಷರ್ ಪಟೇಲ್, ಪ್ರಸಿದ್ಧ್ ಕೃಷ್ಣ ತಲಾ 1 ವಿಕೆಟ್ ಪಡೆದರು.

80 ರನ್‌ ಗಳಿಸಿದ ಬಾಂಗ್ಲಾ ದೇಶದ ನಾಯಕ ಶಕಿಬ್‌ ಅಲ್‌ ಹಸನ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.

ಏಷ್ಯಾ ಕಪ್ ಫೈನಲ್ ಪಂದ್ಯ ಸೆ.17 ರಂದು ಭಾನುವಾರ ಕೊಲೊಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...