ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

Date:

ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲುವ ಮೂಲಕ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟ್ರೋಫಿ ಎತ್ತಿ ಹಿಡಿದ ರೋಹಿತ್‌ ಶರ್ಮಾ ಸಾರಥ್ಯದ ಟೀಮ್ ಇಂಡಿಯಾಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಬಿಸಿಸಿಐ 125 ಕೋಟಿ ರೂ.ಗಳ ಭಾರಿ ಬಹುಮಾನವನ್ನು ಘೋಷಿಸಿದೆ.

ಈ ಐತಿಹಾಸಿಕ ಗೆಲುವು ದಾಖಲಿಸಿದ ಟೀಮ್ ಇಂಡಿಯಾಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶುಭ ಕೋರಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಅಧಿಕೃತ ಟ್ವಿಟರ್‌ ಖಾತೆ ಮೂಲಕ ಬಿಸಿಸಿಐ ಬರೋಬ್ಬರಿ 125 ಕೋಟಿ ರೂ. ಬಹುಮಾನ ನೀಡಲು ಮುಂದಾಗಿದೆ ಎಂದು ಘೋಷಿಸಿದ್ದಾರೆ.

“2024ರ ಸಾಲಿನಿ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ.ಗಳ ಬಹುಮಾನ ನೀಡಲಿದೆ. ಈ ತಂಡ ಅಮೋಘ ಪ್ರತಿಭೆ ಅನಾವರಣಗೊಳಿಸಿ, ಬದ್ಧತೆಯಿಂದ ಹಾಗೂ ಅತ್ಯುತ್ತಮ ಕ್ರೀಡಾಮನೋಭಾವದೊಂದಿಗೆ ಸ್ಪರ್ಧಿಸಿ ಚಾಂಪಿಯನ್ಸ್‌ ಪಟ್ಟ ಪಡೆದಿದೆ. ತಂಡದ ಎಲ್ಲ ಆಟಗಾರರು, ಕೋಚ್‌ಗಳು ಮತ್ತು ಸಹಾಯಕ ಸಿಬ್ಬಂದಿಗೆ ಶುಭಾಶಯಗಳು. ಇದೊಂದು ಅಮೋಘ ಸಾಧನೆ ಆಗಿದೆ,” ಎಂದು ಬಿಸಿಸಿಐ ಎಕ್ಸ್‌ನಲ್ಲಿ ಜಯ್ ಶಾ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್ ಫೈನಲ್ | ರೋಚಕ ಹಣಾಹಣಿಯಲ್ಲಿ ಟೀಮ್ ಇಂಡಿಯಾ ‘ಚಾಂಪಿಯನ್’

ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಚಾಂಪಿಯನ್ಸ್‌ ಭಾರತ ತಂಡಕ್ಕೆ ಬರೋಬ್ಬರಿ 20.42 ಕೋಟಿ ರೂ.ಗಳ ಬಹುಮಾನ ಮೊತ್ತ ನೀಡಿದೆ. ರನ್ನರ್ಸ್‌ ಅಪ್‌ ದಕ್ಷಿಣ ಆಫ್ರಿಕಾ ತಂಡಕ್ಕೆ 10.67 ಕೋಟಿ ರೂ. ಬಹುಮಾನ ಪಡೆದಿದೆ. ಇದಲ್ಲದೆ ಟೂರ್ನಿಯಲ್ಲಿ ಗೆದ್ದ ಪ್ರತಿ ಪಂದ್ಯಕ್ಕೆ 25.97 ಲಕ್ಷ ರೂ. ಕೂಡ ಪ್ರತಿ ತಂಡಗಳಿಗೆ ಸಿಗಲಿದೆ. ಹೀಗಾಗಿ ಭಾರತ ತಂಡ ಒಟ್ಟಾರೆ 22.63 ಕೋಟಿ ರೂ. ಜೇಬಿಗಿಳಿಸಿದೆ.

ವೆಸ್ಟ್‌ ಇಂಡೀಸ್‌ನ ಬಾರ್ಬೆಡೋಸ್‌ನಲ್ಲಿರುವ ಕೆನ್ಸಿಂಗ್ಟನ್‌ ಓವಲ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ, ಅನುಭವಿ ಬ್ಯಾಟರ್‌ ವಿರಾಟ್‌ ಕೊಹ್ಲಿ (76) ಬಾರಿಸಿದ ಜವಾಬ್ದಾರಿಯುತ ಅರ್ಧಶತಕದ ಬಲದಿಂದ 20 ಓವರ್‌ಗಳಲ್ಲಿ 176/7 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿತು. ಅಕ್ಷರ್‌ ಪಟೇಲ್‌ 31 ಎಸೆತಗಳಲ್ಲಿ 47 ರನ್‌ಗಳನ್ನು ಸಿಡಿಸುವ ಮೂಲಕ ಕೊಹ್ಲಿಗೆ ಉತ್ತಮ ಸಾಥ್‌ ನೀಡಿದ್ದರು.

ಬಳಿಕ ಗುರಿ ಬೆನ್ನಟ್ಟಿದ ಹರಿಣ ಪಡೆ ಆರಂಭಿಕ ಆಘಾತ ಅನುಭವಿಸಿದರೂ, ಇನಿಂಗ್ಸ್‌ ಮಧ್ಯದಲ್ಲಿ ಕ್ವಿಂಟನ್‌ ಡಿ ಕಾಕ್‌ (39), ಟ್ರಿಸ್ಟನ್‌ ಸ್ಟಬ್ಸ್‌ (31), ಹೆನ್ರಿಚ್‌ ಕ್ಲಾಸೆನ್‌ (52) ಮತ್ತು ಡೇವಿಡ್‌ ಮಿಲ್ಲರ್‌ (21) ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ಗೆಲುವಿನತ್ತ ದಾಪುಗಾಲಿಟ್ಟಿತ್ತು. ಜಸ್‌ಪ್ರೀತ್‌ ಬುಮ್ರಾ (18ಕ್ಕೆ 2), ಹಾರ್ದಿಕ್‌ ಪಾಂಡ್ಯ (20ಕ್ಕೆ 3) ಮತ್ತು ಅರ್ಷದೀಪ್‌ ಸಿಂಗ್‌ (20ಕ್ಕೆ 2) ಕರಾರುವಾಕ್ ಬೌಲಿಂಗ್‌ ದಾಳಿ ಸಂಘಟಿಸಿದರ ಪರಿಣಮ ದಕ್ಷಿಣ ಆಫ್ರಿಕಾ ತಂಡ 20 ಓವರ್‌ಗಳಲ್ಲಿ 169/8 ರನ್‌ ಗಳಿಸಲು ಶಕ್ತವಾಗಿ ಸೋಲು ಅನುಭವಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...