ಟೀಂ ಇಂಡಿಯಾಗೆ 131 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

Date:

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ 131 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಈ ಬಹುಮಾನ ಮೊತ್ತವನ್ನು ಭಾರತ ತಂಡದ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗುವುದು ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿತ್ತು. ಈ ಬಾರಿ 6 ಕೋಟಿ ರೂ. ಹೆಚ್ಚಿಸಲಾಗಿದೆ. ಅದರಂತೆ ಟೀಮ್ ಇಂಡಿಯಾ 131 ಕೋಟಿ ರೂ.ಗಳ ನಗದು ಬಹುಮಾನ ಪಡೆಯಲಿದ್ದಾರೆ.

ಇತ್ತ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಐಸಿಸಿ ಕಡೆಯಿಂದ ಸಿಕ್ಕಿರುವುದು 27.60 ಕೋಟಿ ರೂ. ಮಾತ್ರ. ಇದೀಗ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾಗೆ ಭಾರತೀಯ ಕ್ರಿಕೆಟ್ ಬೋರ್ಡ್ ದುಪ್ಪಟ್ಟು ಮೊತ್ತದ ಬಹುಮಾನ ಘೋಷಿಸಿ ಗಮನ ಸೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಹಮದಾಬಾದ್‌ನಲ್ಲಿ ನಡೆದ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತ ಪ್ರತಿಷ್ಠಿತ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಪ್ರಶಸ್ತಿ ಉಳಿಸಿಕೊಂಡ ಮೊದಲ ತಂಡವಾಗಿ ಟೀಮ್ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ. ಈ ಮೂಲಕ ಮೂರನೇ ಬಾರಿ ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡಿದೆ.

ಇದನ್ನು ಓದಿದ್ದೀರಾ? ಸ್ಟಾರ್ ಆಟಗಾರರಿಲ್ಲದಿದ್ದರೂ ಭಾರತದ ಯುವಪಡೆ ‘ಟಿ20 ವಿಶ್ವಕಪ್’ ಗೆದ್ದಿದ್ದೇ ರೋಚಕ!

ಈ ಐತಿಹಾಸಿಕ ಸಾಧನೆಗಾಗಿ ಮಂಡಳಿಯು ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಆಯ್ಕೆದಾರರನ್ನು ಮತ್ತೊಮ್ಮೆ ಅಭಿನಂದಿಸುತ್ತದೆ ಮತ್ತು ಭವಿಷ್ಯದಲ್ಲಿ ಅವರಿಗೆ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತದೆ.

ಅಲ್ಲದೆ ಟಿ20 ವಿಶ್ವಕಪ್‌ನಲ್ಲಿ ಜಯಗಳಿಸಿದ ಟೀಮ್ ಇಂಡಿಯಾಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 131 ಕೋಟಿ ರೂಪಾಯಿ ನಗದು ಬಹುಮಾನವನ್ನು ನೀಡಲಿದೆ ಎಂದು ಘೋಷಿಸಿದೆ.

ಅಹಮದಾಬಾದ್​ನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ ತಂಡವು 19 ಓವರ್​ಗಳಲ್ಲಿ 159 ರನ್​ ಬಾರಿಸಿ ಆಲೌಟ್ ಆಯಿತು.

ಈ ಮೂಲಕ ಭಾರತ ತಂಡವು 96 ರನ್​ಗಳ ಅಮೋಘ ಗೆಲುವು ದಾಖಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಚಾಂಪಿಯನ್ ತಂಡಕ್ಕೆ ಮತ್ತು ಸಿಬ್ಬಂದಿ ವರ್ಗಗಳಿಗೆ ಬಿಸಿಸಿಐ ಬರೋಬ್ಬರಿ 131 ಕೋಟಿ ರೂ. ಬಹುಮಾನವನ್ನು ಘೋಷಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...