ಕಳಪೆ ಪ್ರದರ್ಶನ, ಡ್ರೆಸ್ಸಿಂಗ್‌ ರೂಮ್‌ ಗೌಪ್ಯ ಮಾಹಿತಿ ಸೋರಿಕೆ: ಬ್ಯಾಟಿಂಗ್, ಫೀಲ್ಡಿಂಗ್ ಕೋಚ್‌ಗಳನ್ನು ವಜಾ ಮಾಡಿದ ಬಿಸಿಸಿಐ

Date:

ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ 2024-25ರಲ್ಲಿ ಭಾರತ ತಂಡದ ಹೀನಾಯ ಸೋಲಿನ ಹಿನ್ನೆಲೆ ಹಾಗೂ ಡ್ರೆಸ್ಸಿಂಗ್‌ ರೂಮ್‌ನ ಗೌಪ್ಯ ಮಾಹಿತಿ ಸೋರಿಕೆ ಹಿನ್ನೆಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಂಡದ ಕೆಲ ಕೋಚ್‌ಗಳನ್ನು ತೆಗೆದುಹಾಕುವ ತ್ವರಿತ ಮತ್ತು ನಿರ್ಣಾಯಕ ಕ್ರಮವನ್ನು ಕೈಗೊಂಡಿದೆ.

ಎಂಟು ತಿಂಗಳ ಹಿಂದೆಯಷ್ಟೇ ನೇಮಕವಾಗಿದ್ದ ಸಹಾಯಕ ಕೋಚ್ ಅಭಿಷೇಕ್ ನಾಯರ್ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.

ಅವರ ಜೊತೆಗೆ ಫೀಲ್ಡಿಂಗ್ ಕೋಚ್ ಟಿ.ದಿಲೀಪ್ ಮತ್ತು ಸ್ಟ್ರೆಂತ್ ಅಂಡ್ ಕಂಡೀಷನಿಂಗ್ ಕೋಚ್ ಸೋಹಂ ದೇಸಾಯಿ ಅವರನ್ನೂ ವಜಾ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿನೋದ್ ಕಾಂಬ್ಳಿಗೆ ಆರ್ಥಿಕ ನೆರವು ನೀಡಿದ ಲಿಟಲ್ ಮಾಸ್ಟರ್

ಟಿ.ದಿಲೀಪ್ ಅವರ ಬದಲಿಗೆ, ಸಹಾಯಕ ತರಬೇತುದಾರ ರಿಯಾನ್ ಟೆನ್ ಡೋಸ್ಚೇಟ್ ಅವರಿಗೆ ಫೀಲ್ಡಿಂಗ್ ಜವಾಬ್ದಾರಿಗಳನ್ನು ತಾತ್ಕಾಲಿಕವಾಗಿ ನೀಡಲಾಗಿದೆ. ಸೋಹಂ ದೇಸಾಯಿ ಬದಲಿಗೆ ದಕ್ಷಿಣ ಆಫ್ರಿಕಾದ ತರಬೇತುದಾರ ಆಡ್ರಿಯನ್ ಲೆ ರೌಕ್ಸ್ ಗೆ ಫಿಟ್ನೆಸ್ ಜವಾಬ್ಧಾರಿಯನ್ನು ನೀಡಲಾಗಿದೆ.

ಜೂನ್ 20ರಂದು ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಮುಂಚಿತವಾಗಿ ಹೊಸ ಸಿಬ್ಬಂದಿಗಳು ಭಾರತೀಯ ತಂಡವನ್ನು ಸೇರುವ ನಿರೀಕ್ಷೆಯಿದೆ. ಈ ಸಿಬ್ಬಂದಿ ಕಳಪೆ ಪ್ರದರ್ಶನದ ಜೊತೆ ಡ್ರೆಸ್ಸಿಂಗ್‌ ರೂಮ್‌ ಗೌಪ್ಯ ಮಾಹಿತಿಗಳನ್ನು ಸೋರಿಕೆ ಮಾಡಿದ್ದರು.

ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ರೋಹಿತ್‌ ಶರ್ಮಾ ಸಾರಥ್ಯದ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 3-1 ಅಂತರದಲ್ಲಿ ಸೋಲು ಅನುಭವಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...