ಕಠಿಣ ನಿಯಮಗಳ ಮೊರೆ ಹೋದ ಬಿಸಿಸಿಐ; ಕೊಹ್ಲಿ-ಅನುಷ್ಕಾಗೆ ನಿರಾಶೆ: ವರದಿ

Date:

ಇತ್ತೀಚೆಗೆ ನಡೆದ ಟೆಸ್ಟ್ ಸರಣಿಗಳಲ್ಲಿ ಭಾರತದ ಕ್ರಿಕೆಟ್‌ ತಂಡ ಕಳಪೆ ಪ್ರದರ್ಶನ ನೀಡಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಈವರೆಗೆ, ಆಟಗಾರರು ತಮ್ಮ ಕುಟುಂಬಗಳನ್ನು, ವಿಶೇಷವಾಗಿ ಪತ್ನಿಯರನ್ನು ಟೂರ್ನಿ ನಡೆಯುವ ಪ್ರದೇಶಕ್ಕೆ ಕರೆದೊಯ್ಯಲು, ಟೂರ್ನಿಯ ಸಮಯದಲ್ಲೂ ಕುಟುಂಬದೊಂದಿಗೆ ಇರುವ ಸ್ವಾತಂತ್ರ್ಯವಿತ್ತು. ಈಗ, ಕೆಲವು ತೀವ್ರ ಬದಲಾವಣೆಗಳನ್ನು ತರಲು ಬಿಸಿಸಿಐ ಸಜ್ಜಾಗಿದೆ ಎಂದು ವರದಿಯಾಗಿದೆ.

ವರದಿಯ ಪ್ರಕಾರ, ಆಟಗಾರರು ತಮ್ಮ ಕುಟುಂಬಗಳೊಂದಿಗೆ ದೀರ್ಘಕಾಲ ಇದ್ದರೆ, ಅದರಲ್ಲೂ ಟೂರ್ನಿಯ ಸಮಯದಲ್ಲೂ ವಿದೇಶಿ ಪ್ರವಾಸಗಳಲ್ಲಿಯೂ ಕುಟುಂಬದೊಂದಿಗೆ ಸಮಯ ಕಳೆಯುವುದು ಅವರ ಪ್ರದರ್ಶನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಬಿಸಿಸಿಐ ಭಾವಿಸಿದೆ. ಆದ್ದರಿಂದ, 2019ರ ಮೊದಲು ಅಸ್ತಿತ್ವದಲ್ಲಿದ್ದ ನಿಯಮವನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದೆ. ಆ ಮೂಲಕ, ಆಟಗಾರರು ತಮ್ಮ ಕುಟುಂಬದೊಂದಿಗೆ ಕಳೆಯುವ ಸಮಯವನ್ನು ಸೀಮಿತಗೊಳಿಸಲಾಗುತ್ತದೆ.

45 ದಿನಗಳ ವಿದೇಶಿ ಪ್ರವಾಸದ ಸಮಯದಲ್ಲಿ ಕುಟುಂಬಗಳು, ವಿಶೇಷವಾಗಿ ಪತ್ನಿಯರು ಆಟಗಾರರೊಂದಿಗೆ ಎರಡು ವಾರಗಳ ಕಾಲ ಮಾತ್ರ ಇರಲು ಅವಕಾಶ ನೀಡುತ್ತದೆ. ಅಷ್ಟೇ ಅಲ್ಲ, ಪ್ರತಿಯೊಬ್ಬ ಆಟಗಾರನು ತಂಡದ ಇತರ ಸದಸ್ಯರೊಂದಿಗೆ ತಂಡದ ಬಸ್‌ನಲ್ಲಿಯೇ ಪ್ರಯಾಣಿಸಬೇಕಾಗುತ್ತದೆ. ಒಂಟಿ ಪ್ರಯಾಣವನ್ನು ಬಿಸಿಸಿಐ ನಿರ್ಬಂಧಿಸುತ್ತದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಮಾನ ಪ್ರಯಾಣದ ಸಮಯದಲ್ಲಿ, ಆಟಗಾರರ ಲಗೇಜ್ ತೂಕ 150 ಕೆ.ಜಿ ಮೀರುವಂತಿಲ್ಲ. ತೂಕ ಹೆಚ್ಚಿದ್ದರೆ ಆ ವೆಚ್ಚವನ್ನು ಆಟಗಾರರೇ ಭರಿಸಬೇಕಾಗುತ್ತದೆ.

ಬಿಸಿಸಿಐ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಅವರ ಮ್ಯಾನೇಜರ್ ಗೌರವ್ ಅರೋರಾ ಅವರ ವಿರುದ್ಧವೂ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಗಂಭೀರ್ ಅವರ ಮ್ಯಾನೇಜರ್ ತಂಡವು ಹೋಟೆಲ್‌ನಲ್ಲಿ ಉಳಿಯಲು ಅಥವಾ ಕ್ರೀಡಾಂಗಣಗಳಲ್ಲಿನ ವಿಐಪಿ ಬಾಕ್ಸ್‌ನಲ್ಲಿ ಕುಳಿತುಕೊಳ್ಳಲು ಅವಕಾಶ ನೀಡಲಾಗುವುದಿಲ್ಲ. ತಂಡದ ಬಸ್‌ನಲ್ಲಿ ಅಥವಾ ಅದರ ಹಿಂದಿನ ಬಸ್‌ನಲ್ಲಿ ಗಂಭೀರ್ ಅವರೊಂದಿಗೆ ಹೋಗಲು ಮ್ಯಾನೇಜರ್‌ಗೆ ಅವಕಾಶ ಇರುವುದಿಲ್ಲ ಎಂದು ತಿಳಿದುಬಂದಿದೆ.

ಗಮನಾರ್ಹವಾಗಿ, ಇತರ ಆಟಗಾರರಿಗಿಂತ ವಿರಾಟ್ ಕೊಹ್ಲಿ ಅವರು ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾ ಅವರನ್ನು ಎಲ್ಲ ಟೂರ್ನಿಗಳಲ್ಲಿಯೂ ಜೊತೆಯಲ್ಲಿ ಕರೆದೊಯ್ಯುತ್ತಿದ್ದರು. ಈಗ, ಟೂರ್ನಿ ವೇಳೆಯ ಪ್ರವಾಸದಲ್ಲಿ ಕುಟುಂಬದೊಂದಿಗೆ ಕಳೆಯುವ ಸಮಯಕ್ಕೆ ಬಿಸಿಸಿಐ ನಿರ್ಬಂಧ ಹೇರಲು ಮುಂದಾಗಿರುವುದರಿಂದ, ಅನುಷ್ಕಾ ಅವರು ಎಲ್ಲ ಟೂರ್ನಿಗಳಲ್ಲೂ, ಟೂರ್ನಿಯ ಪೂರ್ಣ ಸಮಯದಲ್ಲಿ ಕೊಹ್ಲಿ ಅವರಿಂದಿಗೆ ಇರಲು ಅಥವಾ ಪ್ರಯಾಣ ಮಾಡಲು ಸಾಧ್ಯವಾಗುವುದಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...