ಮಾಜಿ ಕ್ರಿಕೆಟಿಗ ಅನ್ಶುಮಾನ್ ಗಾಯಕ್ವಾಡ್ ಕ್ಯಾನ್ಸರ್ ಚಿಕಿತ್ಸೆಗೆ ಬಿಸಿಸಿಐ 1 ಕೋಟಿ ರೂ. ನೆರವು

Date:

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನ್ಶುಮಾನ್‌ ಗಾಯಕ್ವಾಡ್ ಅವರ ಕ್ಯಾನ್ಸರ್‌ ಚಿಕಿತ್ಸೆಗೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ 1 ಕೋಟಿ ರೂ. ಪ್ರಕಟಿಸಿದ್ದಾರೆ. ಗಾಯಕ್ವಾಡ್‌ ಕುಟುಂಬದೊಂದಿಗೆ ಸ್ವತಃ ಮಾತನಾಡಿರುವ ಜಯ್‌ ಶಾ ಕಾಯಿಲೆಯಿಂದ ಚೇತರಿಸಿಕೊಳ್ಳಲು ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಯ್‌ ಶಾ, ಗಾಯಕ್‌ವಾಡ್ ಅವರು ಈ ಕಷ್ಟದ ಸಮಯದಿಂದ ಹೊರಬರಲು ಅವರ ಕುಟುಂಬಕ್ಕೆ ಎಲ್ಲ ರೀತಿಯ ನೆರವಿನ ಜೊತೆ ಆತ್ಮವಿಶ್ವಾಸ ತುಂಬಲಾಗುವುದು ಎಂದು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಟಿಂ ಇಂಡಿಯಾ ಮಾಜಿ ಕ್ರಿಕೆಟಿಗ ಗಾಯಕ್ವಾಡ್‌ ಅವರ ಅನಾರೋಗ್ಯದ ಬಗ್ಗೆ ಮೊದಲ ಬಾರಿಗೆ ಮತ್ತೊಬ್ಬ ಮಾಜಿ ಕ್ರಿಕೆಟಿಗ ಸಂದೀಪ್‌ ಪಾಟೀಲ್‌ ಮಾತನಾಡಿದ್ದರು. ಲಂಡನ್‌ನಲ್ಲಿ ಅನ್ಶುಮಾನ್‌ ಗಾಯಕ್ವಾಡ್‌ ಅವರು ಕಳೆದ ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.  ಅವರಿಗೆ ಹಣಕಾಸಿನ ನೆರವು ಅಗತ್ಯವಿದೆ ಎಂದು ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಆಟಗಾರ ದಿಲೀಪ್‌ ವೆಂಗಸರ್ಕರ್‌ ಕೂಡ ಬಿಸಿಸಿಐ ಖಜಾಂಜಿ ಅಶೀಸ್ ಸೆಲಾರ್‌ ಅವರಿಗೆ ಈ ವಿಷಯದ ಬಗ್ಗೆ ತಿಳಿಸಿ ನೆರವಿಗೆ ಮನವಿ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್ ಟ್ರೋಫಿಯ ಪಾಕ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಯಾಣ ಅಸಂಭವ; ಹೈಬ್ರಿಡ್ ಮಾದರಿ ಸರಣಿ ಸಾಧ್ಯತೆ

ಇತ್ತೀಚಿಗೆ 1983ರ ಏಕದಿನ ವಿಶ್ವಕಪ್‌ ವಿಜೇತ ತಂಡದ ನಾಯಕರಾದ ಕಪಿಲ್‌ ದೇವ್‌ 71 ವರ್ಷದ ಗಾಯಕ್ವಾಡ್‌ ಅವರಿಗೆ ಆರ್ಥಿಕ ನೆರವು ನೀಡುವಂತೆ ಬಿಸಿಸಿಐಗೆ ಆಗ್ರಹಿಸಿದ್ದರು.

ಸೂಕ್ತ ನೆರವಿಲ್ಲದೆ ತೊಂದರೆ ಅನುಭವಿಸುತ್ತಿರುವ ಮಾಜಿ ಕ್ರಿಕೆಟಿಗರಿಗೆ ಬಿಸಿಸಿಐ ಸೂಕ್ತ ವ್ಯವಸ್ಥೆ ಒದಗಿಸಬೇಕು. ಬಿಸಿಸಿಐ ವಿಶ್ವದಲ್ಲಿಯೇ ಅತ್ಯಂತ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾಗಿ ಹೊರಹೊಮ್ಮಿದೆ. ಪ್ರಸ್ತುತ ಆಟಗಾರರ ಜೊತೆ ಹಿಂದೆ ಸೇವೆ ಸಲ್ಲಿಸಿರುವ ಆಟಗಾರರತ್ತಲೂ ಗಮನಹರಿಸಬೇಕು ಎಂದು ಹೇಳಿದ್ದರು.

71 ವರ್ಷದ ಗಾಯಕ್ವಾಡ್ ಅವರು 70 ಹಾಗೂ 80ರ ದಶಕದ ಕ್ರಿಕೆಟಿಗರಾಗಿದ್ದು, 40 ಟೆಸ್ಟ್‌ಗಳಲ್ಲಿ 1985 ರನ್‌ ಪೇರಿಸಿದ್ದಾರೆ. ದ್ವಿಶಕದೊಂದಿಗೆ 2 ಶತಕ ಬಾರಿಸಿದ್ದು, ಅವರ ಅತ್ಯುತ್ತಮ ಸ್ಕೋರ್‌ 201 ಇದೆ. ಇದರ ಜೊತೆ 15 ಏಕದಿನ ಪಂದ್ಯಗಳನ್ನು ಗಾಯಕ್ವಾಡ್‌ ಆಡಿದ್ದಾರೆ. ಅಲ್ಲದೆ ಟೀಂ ಇಂಡಿಯಾಕ್ಕೆ ಎರಡು ಬಾರಿ ಹೆಡ್‌ ಕೋಚ್‌ ಆಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...