ಐಪಿಎಲ್ 2023 | ರಾಜಪಕ್ಸೆ, ಧವನ್‌ ಸ್ಫೋಟಕ ಬ್ಯಾಟಿಂಗ್; ಕೆಕೆಆರ್‌ಗೆ ಸವಾಲಿನ ಗುರಿ

Date:

ಭಾನುಕಾ ರಾಜಪಕ್ಸೆ ಹಾಗೂ ನಾಯಕ ಶಿಖರ್ ಧವನ್ ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಪಂಜಾಬ್‌ ಕಿಂಗ್ಸ್ ಇಲೆವೆನ್ ತಂಡ ಐಪಿಎಲ್‌ 2023ರ 16ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ಗೆ 192 ರನ್‌ಗಳ ಸವಾಲಿನ ಗುರಿ ನೀಡಿದೆ.

ಮೊಹಾಲಿಯ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಕೋಲ್ಕತಾ ನೈಟ್ ರೈಡರ್ಸ್‌ ತಂಡಕ್ಕೆ ಆರಂಭಿಕ ಬ್ಯಾಟ್ಸ್‌ಮೆನ್‌ಗಳಾದ ಪ್ರಭಸಿಮ್ರನ್ ಸಿಂಗ್ ಹಾಗೂ ನಾಯಕ ಶಿಖರ್ ಧವನ್ ಜೋಡಿ ಮೊದಲ ವಿಕೆಟ್‌ಗೆ 2 ಓವರ್‌ಗಳಿಗೆ 23 ರನ್‌ಗಳ ಜತೆಯಾಟವಾಡಿದರು.

12 ಎಸೆತಗಳನ್ನು ಎದುರಿಸಿದ ಪ್ರಭಸಿಮ್ರನ್ ಸಿಂಗ್ 2 ಬೌಂಡರಿ, 2 ಸಿಕ್ಸರ್ ಸಿಡಿಸಿ 23 ರನ್‌ ಗಳಿಸಿ ಟಿಮ್ ಸೌಥಿಗೆ ಕ್ಯಾಚಿತ್ತು ಪೆವಿಲಿಯನ್‌ಗೆ ನಿರ್ಗಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಆಗಮಿಸಿದ ಎರಡನೇ ಕ್ರಮಾಂಕದ ಆಟಗಾರ ಭಾನುಕಾ ರಾಜಪಕ್ಸೆ, ನಾಯಕ ಶಿಖರ್ ಧವನ್ ಅವರೊಂದಿಗೆ 55 ಎಸೆತಗಳಲ್ಲಿ 86 ರನ್‌ಗಳ ಜತೆಯಾಟವಾಡಿದರು. ಅಬ್ಬರದ ಬ್ಯಾಟಿಂಗ್ ನಡೆಸಿದ ರಾಜಪಕ್ಸೆ ಕೇವಲ 32 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್‌ನೊಂದಿಗೆ 50 ರನ್‌ ಸಿಡಿಸಿ ಉಮೇಶ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ನಾಯಕ ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್‌ ನಡೆಸಿ 29 ಎಸೆತಗಳಲ್ಲಿ 6 ಬೌಂಡರಿಗಳೊಂದಿಗೆ 40 ರನ್ ಬಾರಿಸಿ ವರುಣ್‌ಗೆ ಬೌಲ್ಡ್‌ ಆದರು.

ಕೊನೆಯಲ್ಲಿ ವಿಕೆಟ್ ಕೀಪರ್ ಬ್ಯಾಟರ್‌ ಜಿತೇಶ್ ಶರ್ಮಾ (21), ಸಿಕಂದರ್ ರಾಜಾ (16) ಹಾಗೂ ಸ್ಯಾಮ್ ಕರ್ರನ್‌ (26) ಕೂಡ ಭರ್ಜರಿ ಬ್ಯಾಟಿಂಗ್ ಆಡಿ ತಂಡದ ಮೊತ್ತವನ್ನು 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 191 ರನ್‌ ಕಲೆ ಹಾಕಿದರು.

ಕೆಕೆಆರ್‌ ಪರ ಟಿಮ್ ಸೌಥಿ 54/2, ಉಮೇಶ್ ಯಾದವ್‌, ಸುನಿಲ್‌ ನರೈನ್‌ ಹಾಗೂ ವರುಣ್‌ ಚಕ್ರವರ್ತಿ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...