ಏಷ್ಯನ್ ಚಾಂಪಿಯನ್‌ಶಿಪ್ | ಕಂಚು ಗೆದ್ದ ಭವಾನಿ ದೇವಿ; ಫೆನ್ಸಿಂಗ್‌ನಲ್ಲಿ ಭಾರತಕ್ಕೆ ಮೊದಲ ಪದಕ

Date:

ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಭವಾನಿ ದೇವಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.  

ಸೋಮವಾರ ಚೆನ್ನೈನಲ್ಲಿ ನಡೆದ ಕ್ವಾರ್ಟರ್‌ ಫೈನಲ್‌ನಲ್ಲಿ ಹಾಲಿ ವಿಶ್ವ ಚಾಂಪಿಯನ್ ಮಿಸಾಕಿ ಎಮುರಾ ಅವರನ್ನು ಭವಾನಿ ದೇವಿ 15-10 ಅಂಕಗಳ ಅಂತರದಲ್ಲಿ ಮಣಿಸಿ, ಸೆಮಿಫೈನಲ್‌ ಹಂತಕ್ಕೆ ಅರ್ಹತೆ ಪಡೆದರು. ಆ ಮೂಲಕ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಭಾರತಕ್ಕೆ ಮೊದಲ ಪದಕವನ್ನು ಖಚಿತಪಡಿಸಿದ್ದರು.

ಸೆಮಿಫೈನಲ್‌ನಲ್ಲಿ ಸೋಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಲಿ ವಿಶ್ವ ಚಾಂಪಿಯನ್ ಮಿಸಾಕಿ ಎಮುರಾ ಅವರನ್ನು ಮಣಿಸಿದರೂ ಸಹ, ಸೆಮಿಫೈನಲ್‌ ಉಜ್ಬೇಕಿಸ್ತಾನ್‌ನ ಜೈನಾಬ್ ದೈಬೆಕೋವಾ ವಿರುದ್ಧ 15-14 ಅಂತರದಲ್ಲಿ  ಭವಾನಿ ರೋಚಕ ಸೋಲು ಕಂಡಿದ್ದಾರೆ. ಹೀಗಾಗಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ಇದರೊಂದಿಗೆ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಕೀರ್ತಿಗೆ 29 ವರ್ಷ ವಯಸ್ಸಿನ ಭವಾನಿ ದೇವಿ ಪಾತ್ರರಾಗಿದ್ಧಾರೆ.

ವಿಶ್ವದ ನಂಬರ್ ಒನ್ ಆಟಗಾರ್ತಿ ಮಿಸಾಕಿ ವಿರುದ್ಧ ಭವಾನಿ ದೇವಿ ದಾಖಲಿಸಿದ ಮೊದಲ ಗೆಲುವು ಇದಾಗಿದೆ. ಮಿಸಾಕಿ ವಿರುದ್ಧದ ಈ ಹಿಂದಿನ ಮೂರೂ ಪಂದ್ಯಗಳಲ್ಲೂ ಭಾರತದ ಆಟಗಾರ್ತಿ ಸೋಲು ಕಂಡಿದ್ದರು.

ಫೆನ್ಸಿಂಗ್‌ನಲ್ಲಿ ಭಾರತದ ಹೆಮ್ಮೆ ಭವಾನಿ

ಫೆನ್ಸಿಂಗ್‌ ಕ್ರೀಡೆಯ ಇತಿಹಾಸದಲ್ಲೇ ಭಾರತಕ್ಕೆ ಮೊತ್ತ ಮೊದಲ ಪದಕ ಗೆದ್ದುಕೊಟ್ಟ ಕೀರ್ತಿ ಭವಾನಿ ದೇವಿ ಅವರದ್ದಾಗಿದೆ. 2017ರಲ್ಲಿ ಐಲ್ಯಾಂಡ್‌ನ ರೇಕ್‌ಜಾವಿಕ್‌ನಲ್ಲಿ ನಡೆದ ಟರ್ನೋಯ್ ಸ್ಯಾಟಲೈಟ್ ಫೆನ್ಸಿಂಗ್ ಚಾಂಪಿಯನ್‌ಶಿಪ್‌ನ ಫೈನಲ್‌ ಹಣಾಹಣಿಯಲ್ಲಿ ದೇವಿ ಅವರು, ಬ್ರಿಟನ್‌ನ ಸಾರಾ ಜೇನ್ ಹ್ಯಾಂಪ್ಸನ್ ಅವರನ್ನು 15-13 ಅಂಕಗಳಿಂದ ಸೋಲಿಸಿ ಚಿನ್ನದ ಪದಕವನ್ನು ಗೆದ್ದಿದ್ದರು.

ಇದಾದ ಬಳಿಕ ಕಾಮನ್‌ವೆಲ್ತ್‌ ಕೂಟದಲ್ಲಿ ಸತತ 2ನೇ ಬಾರಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.  ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಭವಾನಿ ದೇವಿ, ಆ ಮೂಲಕ ಒಲಿಂಪಿಕ್ಸ್‌ನಲ್ಲಿ ಆಡಿದ ಭಾರತದ ಮೊದಲ ಫೆನ್ಸರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...