‘ಭಾರತ-ಪಾಕ್ ಪಂದ್ಯ ನಡೆಯಬಾರದು’ ಎಂದಿದ್ದ ಬಿಜೆಪಿ ಸಂಸದ ಗೌತಮ್ ಗಂಭೀರ್ ‘ಕಮೆಂಟರಿ’ಯಾಗಿ ಪ್ರತ್ಯಕ್ಷ; ಟ್ರೋಲ್

Date:

  • ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ನಡೆದಿದ್ದ ಭಾರತ-ಪಾಕ್ ಪಂದ್ಯದಲ್ಲಿ ‘ಕಮೆಂಟರಿ’ಯಾಗಿ ಮಾಜಿ ಕ್ರಿಕೆಟಿಗ
  • ‘ಅತ್ಯಂತ ನಾಚಿಕೆಯಿಲ್ಲದ ವ್ಯಕ್ತಿ ಗೌತಮ್ ಗಂಭೀರ್’ ಎಂದ ನೆಟ್ಟಿಗ

ಕೆಲವು ವಾರಗಳ ಹಿಂದೆ ‘ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪಂದ್ಯ ನಡೆಯಕೂಡದು’ ಎಂದು ಹೇಳಿಕೆ ನೀಡಿ ಸುದ್ದಿಯಾಗಿದ್ದ ಬಿಜೆಪಿ ಸಂಸದ, ಮಾಜಿ ಟೀಮ್ ಇಂಡಿಯಾ ಬ್ಯಾಟರ್ ಗೌತಮ್ ಗಂಭೀರ್, ನಿನ್ನೆಯ ಪಂದ್ಯದಲ್ಲಿ ‘ಕಮೆಂಟರಿ’ಯಾಗಿ ಪ್ರತ್ಯಕ್ಷಗೊಂಡಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ಟ್ರೋಲ್‌ಗೊಳಗಾಗಿದ್ದಾರೆ.

“ಪಾಕಿಸ್ತಾನದೊಂದಿಗಿನ ಸಮಸ್ಯೆಗಳು ಬಗೆಹರಿಯುವವರೆಗೆ ಭಾರತದ ತಂಡ ಪಾಕ್‌ ಜೊತೆ ಯಾವುದೇ ಕ್ರೀಡಾಕೂಟದಲ್ಲಿ ಭಾಗಿಯಾಗಬಾರದು. ಯಾವುದೇ ಕಾರ್ಯಕ್ರಮವಾಗಲಿ, ಕ್ರಿಕೆಟ್ ಪಂದ್ಯವೇ ಆಗಲಿ ನಮ್ಮ ಸೈನಿಕರ ಪ್ರಾಣಕ್ಕಿಂತ ಮಿಗಿಲಾದದ್ದು ಅಲ್ಲ. ಯಾವುದೇ ಘಟನೆಯು ದೇಶಕ್ಕಿಂತ ದೊಡ್ಡದಲ್ಲ. ಪಾಕಿಸ್ತಾನದೊಂದಿಗಿನ ಪಂದ್ಯವನ್ನು ರದ್ದುಗೊಳಿಸಬೇಕು” ಎಂದು ಮೂರು ವಾರಗಳ ಹಿಂದೆ ಮಾಧ್ಯಮವೊಂದರ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದರು.

ಬಿಜೆಪಿಯ ಸಂಸದರೂ ಆಗಿರುವ ಗೌತಮ್‌ ಗಂಭೀರ್‌, ನೀಡಿದ್ದ ಈ ಹೇಳಿಕೆ ಸಾಕಷ್ಟು ಸುದ್ದಿಯಾಗಿತ್ತು. ಆದರೆ, ಇದೀಗ, ಹೇಳಿಕೆ ನೀಡಿದ ಕೆಲವಾರಗಳಾಗಿಲ್ಲ, ಪಲ್ಲೆಕೆಲೆಯಲ್ಲಿ ನಿನ್ನೆ ನಡೆದ ಭಾರತ-ಪಾಕಿಸ್ತಾನದ ಪಂದ್ಯದಲ್ಲಿ ವೀಕ್ಷಕ ವಿವರಣೆಗಾರನಾಗಿ ಪ್ರತ್ಯಕ್ಷಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಷ್ಯಾ ಕಪ್ 2023ರ ಮೂರನೇ ಪಂದ್ಯ ಭಾರತ ಮತ್ತು ಪಾಕಿಸ್ತಾನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಆದರೆ, ಈ ಪಂದ್ಯಕ್ಕಾಗಿ, ಮಾಜಿ ಕ್ರಿಕೆಟಿಗರಾದ ರವಿಶಾಸ್ತ್ರಿ ಮತ್ತು ಗೌತಮ್ ಗಂಭೀರ್ ಭಾರತದ ಕಡೆಯಿಂದ ‘ಕಮೆಂಟರಿ ಪ್ಯಾನೆಲ್‌’ನ ಭಾಗವಾಗಿದ್ದರು.

ಗೌತಮ್‌ ಗಂಭೀರ್‌ ಅವರು ಹೇಳಿಕೆಯನ್ನು ಉಲ್ಲೇಖಿಸಿ, ನೆಟ್ಟಿಗರು ಸೋಷಿಯಲ್ ಮೀಡಿಯಾಗಳಲ್ಲಿ ಟ್ರೋಲ್ ಮಾಡಿದ್ದಾರೆ.

ರೋಶನ್ ರೈ ಎಂಬವರು ಟ್ವೀಟ್ ಮಾಡಿ, “ಇದು ಬಿಜೆಪಿಯ ಸಂಸದ ಗೌತಮ್ ಗಂಭೀರ್. ಕೆಲವು ವಾರಗಳ ಹಿಂದೆ, ಭಾರತವು ಪಾಕಿಸ್ತಾನದೊಂದಿಗೆ ಆಡುವುದನ್ನು ಅವರು ತೀವ್ರವಾಗಿ ಆಕ್ಷೇಪಿಸಿದ್ದಲ್ಲದೇ, ಭಾರತ ಮತ್ತು ಪಾಕಿಸ್ತಾನದ ಪಂದ್ಯವನ್ನು ರದ್ದುಗೊಳಿಸಬೇಕು ಎಂದು ಹೇಳಿಕೆ ನೀಡಿದ್ದರು. ಇಂದು ಕಮೆಂಟರಿ ಬಾಕ್ಸ್‌ನಲ್ಲಿ ಕುಳಿತಿದ್ದಾರೆ. ದೇಶದ ಅತ್ಯಂತ ನಾಚಿಕೆಯಿಲ್ಲದ ವ್ಯಕ್ತಿ ಈ ಗೌತಮ್ ಗಂಭೀರ್” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದಕ್ಕೆ ಹಲವರು ಕಮೆಂಟ್ ಮಾಡಿದ್ದು, “ಬಿಜೆಪಿಯವರು ಎಂದರೆ ಹಾಗೇನೇ. ಹೇಳೋದೊಂದು, ಮಾಡುವುದು ಇನ್ನೊಂದು” ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...