ಚಿನ್ನಸ್ವಾಮಿ ಕ್ರೀಡಾಂಗಣ ದುರಂತ: ವಿರಾಟ್ ಕೊಹ್ಲಿ ವಿರುದ್ದ ದೂರು ದಾಖಲು

Date:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ತಂಡದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ ವಿರುದ್ಧವೂ ಪೊಲೀಸರಿಗೆ ಶುಕ್ರವಾರ ದೂರು ನೀಡಲಾಗಿದೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‌ಎ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.

ಇದೀಗ ವಿರಾಟ್ ಕೊಹ್ಲಿ ವಿರುದ್ಧವೂ ಎಫ್​ಐಆರ್ ದಾಖಲಿಸುವಂತೆ ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ. ಅಲ್ಲದೆ ಈ ಸಂಬಂಧ ನೈಜ ಹೋರಾಟಗಾರರ ವೇದಿಕೆಯ ಎಚ್ ಎಂ ವೆಂಕಟೇಶ್ ಅವರು ವಿರಾಟ್ ಕೊಹ್ಲಿ ವಿರುದ್ಧ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚಿನ್ನಸ್ವಾಮಿ ಸ್ಟೇಡಿಯಂ ದುರಂತ: ಆರ್‌ಸಿಬಿ, ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ಧ ಎಫ್‌ಐಆರ್‌ ದಾಖಲು

ಮೊದಲು ದೂರು ಸ್ವೀಕರಿಸಲು ಹಿಂದೇಟು ಹಾಕಿದ ಕಬ್ಬನ್ ಪಾರ್ಕ್ ಪೊಲೀಸರು, ಹಲವು ಗಂಟೆಗಳ ಬಳಿಕ ಕೊನೆಗೂ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಈಗಾಗಲೇ ದಾಖಲಾಗಿರುವ ಎಫ್ಐಆರ್ ಜತೆ ಇದನ್ನು ಪರಿಗಣಿಸುವುದಾಗಿ ಹಿಂಬರಹ ನೀಡಿದ್ದಾರೆ.

ಬೆಂಗಳೂರಿನ ಮತ್ತು ರಾಜ್ಯದ ವಿವಿಧ ಕಡೆಗಳಿಂದ ಬಂದವರಲ್ಲಿ ವಿರಾಟ್ ಕೊಹ್ಲಿ ಅಭಿಮಾನಿಗಳೇ ಹೆಚ್ಚಾಗಿದ್ದು ವಿರಾಟ್ ಕೊಹ್ಲಿಯನ್ನು ನೋಡಿ ಕಣ್ಣುಂಬಿಸಿಕೊಳ್ಳಬೇಕೆಂಬ ಹುಚ್ಚು ಹಂಬಲದಿಂದ ಬಂದವರು ಕಾಲ್ತುಳಿತದಲ್ಲಿ ಮರಣ ಹೊಂದಿದ್ದಾರೆ. ಇವರನ್ನು ನಿಯಂತ್ರಿಸುವಲ್ಲಿ ಪೊಲೀಸರು ತಮ್ಮ ಕರ್ತವ್ಯ ಲೋಪವನ್ನು ಮಾಡಿರುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿರಾಟ್ ಕೊಹ್ಲಿ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಪಾರ ಬಂಧುಗಳಿಗೆ ಈ ಸಮಾರಂಭದಲ್ಲಿ ಭಾಗವಹಿಸಲು ಪ್ರಚೋದನೆ ನೀಡಿದ್ದರು ಅವರು ಯಾವುದೇ ಸಾರ್ವಜನಿಕ ಸುರಕ್ಷತೆ ಬಗ್ಗೆ ಎಚ್ಚರಿಕೆ ನೀಡಿರಲಿಲ್ಲ ಎಂದು ಉಲ್ಲೇಖಿಸಿ ವಿರಾಟ್ ಕೊಹ್ಲಿ ವಿರುದ್ಧ ದೂರು ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...