ಪಿಂಕ್‌ ಬಾಲ್‌ ಟೆಸ್ಟ್: ಸ್ಟಾರ್ಕ್ ಮಾರಕ ಬೌಲಿಂಗ್, ಭಾರತ 180ಕ್ಕೆ ಆಲೌಟ್

Date:

ಬಾರ್ಡರ್‌ – ಗವಾಸ್ಕರ್‌ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು ಸಂಪೂರ್ಣ ವಿಫಲರಾದರು. ಟಾಸ್‌ ಗೆದ್ದು ಮೊದಲು ಬ್ಯಾಟ್ ಆರಂಭಿಸಿದ ಭಾರತಕ್ಕೆ ಉತ್ತಮ ಜೊತೆಯಾಟವನ್ನು ನೀಡುವಲ್ಲಿ ಬ್ಯಾಟರ್‌ಗಳು ವೈಫಲ್ಯ ಅನುಭವಿಸಿದರು.

ಅಡಿಲೇಡ್‌ನ ಓವಲ್‌ನಲ್ಲಿ ನಡೆಯುತ್ತಿರುವ ಪಿಂಕ್‌ ಬಾಲ್‌ ಟೆಸ್ಟ್‌ನಲ್ಲಿ ಭಾರತ ಮೊದಲ ಇನಿಂಗ್ಸ್‌ನಲ್ಲಿ 44.1 ಓವರ್‌ಗಳಲ್ಲಿ 180 ರನ್‌ಗಳಿಗೆ ಆಲೌಟ್‌ ಆಯಿತು. ಟೀಮ್ ಇಂಡಿಯಾದ ನಾಯಕ ರೋಹಿತ್‌ ಶರ್ಮಾ ತಂಡಕ್ಕೆ ಸೇರಿದರೂ, ಇನಿಂಗ್ಸ್‌ ಆರಂಭಿಸುವ ಹೊಣೆಯನ್ನು ಕೆ ಎಲ್ ರಾಹುಲ್‌ ಹಾಗೂ ಯಶಸ್ವಿ ಜೈಸ್ವಾಲ್‌ ಅವರಿಗೆ ನೀಡಿದರು. ಈ ವೇಳೆ ಯಶಸ್ವಿ ಜೈಸ್ವಾಲ್‌ ತಾವು ಎದುರಿಸಿದ ಮೊದಲ ಚೆಂಡಿನಲ್ಲಿ ವಿಕೆಟ್‌ ಒಪ್ಪಿಸಿದರು. ಆ ಮೂಲಕ ಪಿಂಕ್‌ ಮೊದಲ ಎಸೆತದಲ್ಲಿ ಔಟ್ ಆದ ಮೊದಲ ಆಟಗಾರ ಎಂಬ ಕುಖ್ಯಾತಿ ಯಶಸ್ವಿ ಪಾಲಾಯಿತು.

ಎರಡನೇ ವಿಕೆಟ್‌ಗೆ ಕೆ ಎಲ್‌ ರಾಹುಲ್‌ ಅವರೊಂದಿಗೆ ಆಟವಾಡಿದ ಶುಭಮನ್‌ ಗಿಲ್‌ ಒಂದಿಷ್ಟು ರನ್‌ಗಳನ್ನು ಕಲೆ ಹಾಕಿದರು. ಈ ಜೋಡಿ ಎರಡನೇ ವಿಕೆಟ್‌ಗೆ 113 ಎಸೆತಗಳನ್ನು ಎದುರಿಸಿ 69 ರನ್‌ ಸೇರಿಸಿತು. ರಾಹುಲ್ 64 ಎಸೆತಗಳಲ್ಲಿ 37 ರನ್‌ ಸಿಡಿಸಿ ಔಟ್ ಆದರೆ, ಭರವಸೆಯ ಆಟಗಾರ ಶುಭಮನ್‌ ಗಿಲ್‌ 51 ಎಸೆತಗಳಲ್ಲಿ 31 ಬಾರಿಸಿ ಪೆವಿಲಿಯನ್‌ಗೆ ತೆರಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ | ರಾಹುಲ್ ಆಟಕ್ಕೆ ಹತ್ತು ವರ್ಷ ಮತ್ತು ಪಿಂಕ್ ಬಾಲ್ ಟೆಸ್ಟ್

ವಿರಾಟ್‌ ಕೊಹ್ಲಿ 7, ರಿಷಭ್‌ ಪಂತ್‌ 21, ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ 3 ರನ್‌ ಬಾರಿಸಿ ಔಟ್ ಆದರು. ವಾಷಿಂಗ್ಟನ್‌ ಸುಂದರ್ ಅವರ ಸ್ಥಾನದಲ್ಲಿ ಕಾಣಿಸಿಕೊಂಡಿರುವ ಅಶ್ವಿನ್ 22 ರನ್‌ ಬಾರಿಸಿದರು. ಟೀಮ್ ಇಂಡಿಯಾದ ಪರ ಗರಿಷ್ಠ ರನ್‌ ಕಲೆ ಹಾಕಿದ್ದು ಯುವ ಆಲ್‌ರೌಂಡರ್‌ ನಿತೀಶ್‌ ಕುಮಾರ್ ರೆಡ್ಡಿ. ನಿತೀಶ್ 3 ಬೌಂಡರಿ, 3 ಸಿಕ್ಸರ್ ಸಹಾಯದಿಂದ 42 ರನ್‌ ಸಿಡಿಸಿ ಔಟ್ ಆದರು.

ಆಸ್ಟ್ರೇಲಿಯಾ ತಂಡದ ಪರ ಅಮೋಘ ದಾಳಿಯನ್ನು ಸಂಘಟಿಸಿದ ವೇಗಿ ಮಿಚೆಲ್ ಸ್ಟಾರ್ಕ್‌ ಅಬ್ಬರಿಸಿದರು. ಇವರು 14.1 ಓವರ್‌ಗಳಲ್ಲಿ 48 ರನ್‌ ನೀಡಿ 6 ವಿಕೆಟ್‌ ಪಡೆದರು. ಉಳಿದಂತೆ ಪ್ಯಾಟ್‌ ಕಮಿನ್ಸ್‌ ಹಾಗೂ ಸ್ಕಾಟ್ ಬೋಲ್ಯಾಂಡ್ ತಲಾ ಎರಡು ವಿಕೆಟ್‌ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...