ಬಾರ್ಡರ್-ಗವಾಸ್ಕರ್ ಟ್ರೋಫಿ | ಟೀಮ್ ಇಂಡಿಯಾಕ್ಕೆ ಸೋಲು; ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಕನಸು ಭಗ್ನ

Date:

ಟೀಮ್ ಇಂಡಿಯಾ ವಿರುದ್ಧ ಸಿಡ್ನಿಯಲ್ಲಿ ಇಂದು ಮುಕ್ತಾಯ ಕಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್‌ ಪಂದ್ಯವನ್ನು ಆಸ್ಟ್ರೇಲಿಯಾ ಗೆಲ್ಲುವುದರೊಂದಿಗೆ 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯನ್ನು 3-1 ರಿಂದ ವಶಪಡಿಸಿಕೊಂಡಿದೆ. ಜೊತೆಗೆ, ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದ್ದು, ರೋಹಿತ್ ಶರ್ಮಾ ಬಳಗದ ಕನಸು ಭಗ್ನಗೊಂಡಿದೆ.

ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ ಕಾಂಗರೂ ಪಡೆ ಸುದೀರ್ಘ ಹತ್ತು ವರ್ಷಗಳ ಬಳಿಕ ಭಾರತ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಆಸೀಸ್ 2014-15ರ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದು ದಾಖಲೆ ಬರೆದಿದೆ. ಇದರೊಂದಿಗೆ ಆಸ್ಟ್ರೇಲಿಯಾ ಎದುರು ಟೀಮ್ ಇಂಡಿಯಾ ದಶಕಗಳ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡಿದ್ದು, ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಐತಿಹಾಸಿಕ ಗೆಲುವಿನೊಂದಿಗೆ ಪ್ಯಾಟ್ ಕಮ್ಮಿನ್ಸ್ ಬಳಗವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ (ಡಬ್ಲ್ಯೂಟಿಸಿ) ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಜೂನ್‌ನಲ್ಲಿ ಇಂಗ್ಲೆಂಡ್‌ನ ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಆಸ್ಟ್ರೇಲಿಯಾ ಎದುರಿಸಲಿದೆ.

ಸಿಡ್ನಿ ಟೆಸ್ಟ್ ಪಂದ್ಯದ ಮೂರನೇ ದಿನವಾದ ಭಾನುವಾರ ಭಾರೀ ಕುತೂಹಲ ಮೂಡಿಸಿತ್ತು. 4 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ದಿನ ಎರಡನೇ ಇನ್ನಿಂಗ್ಸ್‌ ಆರಂಭಿಸಿದ್ದ ಟೀಮ್ ಇಂಡಿಯಾ, ರಿಷಭ್ ಪಂತ್ ಅವರ ಅರ್ಧಶತಕ(61 ರನ್)ದ ನೆರವಿನಿಂದ ಮೂರನೇ ದಿನ 157 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿತ್ತು. ಆ ಮೂಲಕ ಆಸ್ಟ್ರೇಲಿಯಾ ಗೆಲುವಿಗೆ 162 ರನ್‌ಗಳ ಗುರಿ ನೀಡಿತ್ತು. ಈ ಗುರಿಯನ್ನು ಆತಿಥೇಯರು, 27 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಮುಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನು ಓದಿದ್ದೀರಾ? 150 ಕಿ.ಮೀ ಈಜಿ ದಾಖಲೆ ಬರೆದ 52 ವರ್ಷದ ಮಹಿಳೆ; ಸಿಎಂ ಶ್ಲಾಘನೆ!

ಈ ಪಂದ್ಯಕ್ಕೆ ಭಾರತ ತಂಡದ ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾ ಅವರು ಬ್ಯಾಟಿಂಗ್ ಮಾಡಿದ್ದಾರಾದರೂ, ಬೆನ್ನುನೋವಿನಿಂದಾಗಿ ಬೌಲಿಂಗ್‌ ಮಾಡಲು ಸಾಧ್ಯವಾಗಲಿಲ್ಲ. ಸರಣಿಯಲ್ಲಿ 32 ವಿಕೆಟ್ ಪಡೆದಿದ್ದ ಬುಮ್ರಾ ವಿಶ್ರಾಂತಿ ಪಡೆದುಕೊಳ್ಳಬೇಕಾಯಿತು. ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡ ಸೋಲನುಭವಿಸಬೇಕಾಯಿತು.

ಸರಣಿಯ 9 ಇನ್ನಿಂಗ್ಸ್‌ನಲ್ಲಿ 32 ವಿಕೆಟ್ ಪಡೆದಿದ್ದ ಜಸ್ಪ್ರೀತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೆ, ಸಿಡ್ನಿಯ ಪಂದ್ಯದಲ್ಲಿ 10 ವಿಕೆಟ್ ಪಡೆದಿದ್ದ ಆಸ್ಟ್ರೇಲಿಯಾ ಬೌಲರ್ ಸ್ಕಾಟ್ ಬೋಲ್ಯಾಂಡ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...