ಭಾರತೀಯ ಕುಸ್ತಿ ಫೆಡರೇಶನ್: ನೂತನ ಅಧ್ಯಕ್ಷನಾಗಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಆಯ್ಕೆ

Date:

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಅಧಿಕಾರಾವಧಿ ಮುಗಿದಿದೆ. ಆತನಿಂದ ತೆರವಾಗುತ್ತಿರುವ ಸ್ಥಾನಕ್ಕೆ ಆತನ ಆಪ್ತನೇ ಆಗಿರುವ ಸಂಜಯ್ ಸಿಂಗ್‌ ಆಯ್ಕೆಯಾಗಿದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ಸಂಜಯ್‌ ಸಿಂಗ್‌ ಹೊಸ ಅಧ್ಯಕ್ಷನಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕುಸ್ತಿ ಅಸೋಸಿಯೇಷನ್‌ನ ಉಪಾಧ್ಯಕ್ಷರಾಗಿದ್ದ ಸಂಜಯ್ ಅವರು ಪ್ರತಿಸ್ಪರ್ಧಿ ಅನಿತಾ ಶೆರಾನ್ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಸಿಂಗ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕುಸ್ತಿಪಟು ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರು ಪ್ರತಿಭಟನೆ ಆರಂಭಿಸಿದ್ದರು. ಅವರ ಪ್ರತಿಭಟನೆಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿತ್ತು. ಆದರೆ, ಕೇಂದ್ರ ಸರ್ಕಾರದಲ್ಲಿ ಸಂಸದರೂ ಆಗಿರುವ ಬ್ರಿಜ್ ಭೂಷಣ್ ವಿರುದ್ಧ ಸರ್ಕಾರ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಬದಲಾಗಿ, ದೆಹಲಿ ಪೊಲೀಸರು ಧರಣಿ ನಿರತ ಕುಸ್ತಿಪಟುಗಳನ್ನು ಜಂತರ್‌-ಮಂತರ್‌ನಿಂದ ಹೊರಗಟ್ಟಲು ಭಾರೀ ಪ್ರಯತ್ನ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 28 ರಂದು ಕುಸ್ತಿಪಟುಗಳು ಜಂತರ್‌ ಮಂತರ್‌ನಿಂದ ಹೊಸ ಸಂಸತ್ತಿನ ಭವನದ ಕಡೆಗೆ ಮೆರವಣಿಗೆ ಹೊರಟಿದ್ದರು. ಅವರನ್ನು ಪೊಲೀಸರು ತಡೆದಿದ್ದರು. ಜೂನ್ 7 ರಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಬ್ರಿಜ್ ಭೂಷಣ್ ಅವರ ಕುಟುಂಬದ ಸದಸ್ಯರು ಅಥವಾ ಆಪ್ತರು ಯಾರೂ ಕುಸ್ತಿ ಫೆಡರೇಷನ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡುವುದಿಲ್ಲ ಎಂದು ಭರವಸೆ ನೀಡದ ಬಳಿಕ, ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ್ದರು.

ಆದರೆ, ಈಗ ಬ್ರಿಜ್ ಭೂಷಣ್ ಅವರ ಆಪ್ತ ಸಂಜಯ್‌ ಕುಸ್ತಿ ಫೆಡರೇಷನ್‌ನ ನೂತನ ಅಧ್ಯಕ್ಷರಾಗಿದ್ದಾರೆ. ಅಲ್ಲದೆ, ಸಂಜಯ್ ಆರ್‌ಎಸ್‌ಎಸ್‌ ಹಿನ್ನೆಲೆಯನ್ನೂ ಹೊಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...