ಐಪಿಎಲ್‌ 2023 | ಬಟ್ಲರ್ ಉತ್ತಮ ಬ್ಯಾಟಿಂಗ್; ಚೆನ್ನೈಗೆ 176 ರನ್​​ ಗುರಿ ನೀಡಿದ ರಾಜಸ್ಥಾನ

Date:

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ (ಐಪಿಎಲ್‌) 17ನೇ ಪಂದ್ಯದಲ್ಲಿ ಬುಧವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್‌ 176 ರನ್‌ಗಳ ಸವಾಲಿನ ​​ ಗುರಿ ನೀಡಿದೆ.

ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್ ಟಾಸ್​​ ಸೋತು ಮೊದಲು ಬ್ಯಾಟಿಂಗ್ ಮಾಡಿತು.

ರಾಯಲ್ಸ್​ ಪರವಾಗಿ ಓಪನರ್​ ಆಗಿ ಬಂದು ನಿರೀಕ್ಷೆ ಹುಟ್ಟಿಸಿದ್ದ ಜೈಸ್ವಾಲ್​ ಕೇವಲ 10 ರನ್‌ಗೆ ವಿಕೆಟ್​ ಒಪ್ಪಿಸಿದರು. ಬಳಿಕ ಕ್ರೀಸ್​ನಲ್ಲಿ ಸುಮಾರು 15 ಓವರ್‍‌ವರೆಗೂ ನಿಂತ ಜೋಸ್​ ಬಟ್ಲರ್, 36 ಎಸೆತಗಳಲ್ಲಿ 3 ಸಿಕ್ಸರ್​, 1 ಬೌಂಡರಿಯ ನೆರವಿನೊಂದಿಗೆ 52 ರನ್​ ಸಿಡಿಸಿ ಜವಾಬ್ದಾರಿಯುತ ಬ್ಯಾಟಿಂಗ್​ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಬಂದ ದೇವದತ್​ ಪಡಿಕ್ಕಲ್​ 38, ಅಶ್ವಿನ್​ 30, ಶಿಮ್ರಾನ್ ಹೆಟ್ಮಾಯರ್​ ಕೂಡ 30 ರನ್​ ಸಿಡಿಸಿದರು. ಸಂಜು ಸ್ಯಾಮ್ಸನ್​ ಶೂನ್ಯಕ್ಕೆ ಔಟ್ ಆದರು. ರಾಜಸ್ಥಾನ್​​ ನಿಗದಿತ 20 ಓವರ್‍‌ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 175 ರನ್​ ಗಳಿಸಿತು.

ಚೆನ್ನೈ ಪರ ರವೀಂದ್ರ ಜಡೇಜ, ಆಕಾಶ್ ಸಿಂಗ್ ಹಾಗೂ ತುಷಾರ್ ದೇಶಪಾಂಡೆ ತಲಾ ಎರಡು ವಿಕೆಟ್ ಪಡೆದರೆ, ಮೊಯಿನ್ ಅಲಿ ಒಂದು ವಿಕೆಟ್ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...