Champions Trophy | ನಾಳೆ ಇಂಡಿಯಾ-ಪಾ‌ಕ್‌ ಹಣಾಹಣಿ; ​ಭಾರತಕ್ಕೆ ಸೇಡು ತೀರಿಸಿಕೊಳ್ಳುವ ತವಕ  

Date:

2017ರಲ್ಲಿ ನಡೆದ ಚಾಂಪಿಯನ್ಸ್​ ಟ್ರೋಫಿ ಅಂತಿಮ ಪಂದ್ಯದಲ್ಲಿ ಪಾಕ್​ ವಿರುದ್ಧ ಸೋಲು ಕಂಡಿದ್ದ ಭಾರತ ಭಾನುವಾರ (ಫೆ.23) ನಡೆಯುವ ಪಂದ್ಯದಲ್ಲಿ ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ ಪಂದ್ಯ ಭಾನುವಾರ ನಡೆಯಲಿದೆ. ಗುರುವಾರ ನಡೆದಿದ್ದ ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಭಾರತ ತಂಡ ಆತ್ಮವಿಶ್ವಾಸದಲ್ಲಿದೆ. ಗೆಲ್ಲಲು ಯೋಜನೆ ರೂಪಿಸಿಕೊಂಡಿದ್ದು, ಈ ಹಿನ್ನೆಲೆ ತಂಡದಲ್ಲಿ ಪ್ರಮುಖ ಬೌಲರ್​ ಬದಲಾವಣೆ ಮಾಡುವ ಪ್ರಯೋಗಕ್ಕೆ ಮುಂದಾಗಿದೆ.

ಸ್ಟಾರ್​ ಸ್ಪಿನ್​ ಬೌಲರ್​ ಕುಲ್ದೀಪ್​ ಯಾದವ್​ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಇತ್ತೀಚೆಗೆ ತವರಿನಲ್ಲಿ ನಡೆದಿದ್ದ ಇಂಗ್ಲೆಂಡ್​ ವಿರುದ್ಧ ಏಕದಿನ ಸರಣಿಯಲ್ಲಿ 2 ಪಂದ್ಯಗಳನ್ನು ಆಡಿದ್ದ ಕುಲ್ದೀಪ್​ ಕೇವಲ 2 ವಿಕೆಟ್​ ಪಡೆಯವಲ್ಲಿ ಮಾತ್ರ ಯಶಸ್ವಿ ಆಗಿದ್ದರು. ಅಲ್ಲದೇ ಬಾಂಗ್ಲಾ ವಿರುದ್ಧ ಮೊದಲ ಪಂದ್ಯದಲ್ಲಿ ವಿಕೆಟ್​ ಪಡೆಯುವಲ್ಲಿ ವಿಫಲರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕ್​ ವಿರುದ್ಧ ಪಂದ್ಯ ಗೆಲ್ಲಲೇಬೇಕು ಎಂಬ ಯೋಜನೆ ರೂಪಿಸಿರುವ ಭಾರತ ಕುಲ್ದೀಪ್​ ಬದಲಿಗೆ ಅವರ ಸ್ಥಾನಕ್ಕೆ ವರುಣ್​ ಚಕ್ರವರ್ತಿ ಅವರನ್ನು ಕರೆತರಲು ಪ್ಲಾನ್​ ರೂಪಿಸಿದೆ. ಇಂಗ್ಲೆಂಡ್​ ವಿರುದ್ಧದ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ವರುಣ್​ 5 ಪಂದ್ಯಗಳಿಂದ 14 ವಿಕೆಟ್​ ಪಡೆದಿದ್ದರು. ನಂತರ ಏರಡನೇ ಏಕದಿನ ಪಂದ್ಯದಲ್ಲೂ ಬೌಲಿಂಗ್​ ಮಾಡಿ 1 ವಿಕೆಟ್​ ಉರುಳಿಸಿದ್ದರು.

ಮೊದಲ ಪಂದ್ಯದಲ್ಲಿ ಬ್ಯಾಟಿಂಗ್​ ಮತ್ತು ಬೌಲಿಂಗ್​​ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿರುವ ರೋಹಿತ್​ ಸೈನ್ಯ ಇದೀಗ ಪಾಕ್​ ವಿರುದ್ಧದ ಪಂದ್ಯದಲ್ಲೂ ಅದೇ ಫಾರ್ಮ್​ ಮುಂದುವರಿಸಿ ಗೆಲುವು ಸಾಧಿಸಲು ಯೋಜನೆ ರೂಪಿಸಿಕೊಂಡಿದೆ. ಆದರೆ, ಈ ಪಂದ್ಯದಲ್ಲಿ ಒಂದು ಬದಲಾವಣೆ ಮಾಡಲು ಭಾರತ ನಿರ್ಧರಿಸಿದೆ. ಬೌಲಿಂಗ್ ಸ್ವಲ್ಪ ಬದಲಾವಣೆ ಇರಲಿದೆ.

ಇತಿಹಾಸದತ್ತ ತಿರುಗಿ ನೋಡಿದಾಗ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಟ್ಟು ಐದು ಬಾರಿ ಮುಖಾಮುಖಿಯಾಗಿವೆ. ಆದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಎರಡು ಬಾರಿಯ ಚಾಂಪಿಯನ್ (2002, 2013) ಭಾರತದ ವಿರುದ್ಧ ಪಾಕಿಸ್ತಾನ ಮೇಲುಗೈ ಸಾಧಿಸಿದ್ದು, 3-2ರ ಅಂತರದ ಮುನ್ನಡೆ ಕಾಯ್ದುಕೊಂಡಿದೆ.

ಸಂಭಾವ್ಯ ಭಾರತ ತಂಡ

ರೋಹಿತ್​ ಶರ್ಮಾ (ನಾಯಕ), ಶುಭಮನ್​ ಗಿಲ್​, ವಿರಾಟ್​ ಕೊಹ್ಲಿ, ಶ್ರೇಯಸ್​ ಅಯ್ಯರ್​, ಅಕ್ಷರ್​ ಪಟೇಲ್​, ಕೆ ಎಲ್​ ರಾಹುಲ್​ (ವಿಕೆಟ್​ ಕೀಪರ್​), ಹಾರ್ದಿಕ್​ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್​ ರಾಣಾ, ಮೊಹಮ್ಮದ್​ ಶಮಿ, ವರುಣ್​ ಚಕ್ರವರ್ತಿ ಅಥವಾ ಕುಲ್ದೀಪ್​ ಯಾದವ್​.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...