ಚಾಂಪಿಯನ್ಸ್‌ ಟ್ರೋಫಿ | ಮೊದಲ ಸ್ಥಾನಕ್ಕಾಗಿ ಭಾರತ – ಕಿವೀಸ್‌ ನಡುವೆ ಅನೌಪಚಾರಿಕ ಪಂದ್ಯ

Date:

ತಲಾ ಎರಡು ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಪ್ರವೇಶ ಪಡೆದಿರುವ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳು ಪ್ರಸಕ್ತ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಲೀಗ್‌ ಹಂತದ ಕೊನೆಯ ಪಂದ್ಯಗಳನ್ನಾಡಲಿವೆ.

ಎ-ಗುಂಪಿನಲ್ಲಿ ಸ್ಥಾನ ಪಡೆದಿರುವ ಇವೆರಡೂ ತಂಡಗಳು ಈಗಾಗಲೇ ಸೆಮಿಫೈನಲ್ ಪ್ರವೇಶಿಸಿರುವುದರಿಂದ ಈ ಪಂದ್ಯದ ಫಲಿತಾಂಶ ಯಾವುದೇ ಪ್ರಭಾವ ಬೀರುವುದಿಲ್ಲ. ಆದರೆ ಇಂದು ನಡೆಯಲಿರುವ ಪಂದ್ಯವು ಭಾರತ ತಂಡದ ಸೆಮಿಫೈನಲ್ ಎದುರಾಳಿಯನ್ನು ನಿರ್ಧರಿಸಲಿದೆ.

ಉಭಯ ತಂಡಗಳ ಹಳೆಯ ದಾಖಲೆಗಳನ್ನು ಗಮನಿಸಿದರೆ ಈವರೆಗೆ ಎರಡೂ ತಂಡಗಳು 118 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 60 ಪಂದ್ಯಗಳಲ್ಲಿ ಭಾರತ, 50 ಪಂದ್ಯಗಳಲ್ಲಿ ನ್ಯೂಜಿಲೆಂಡ್‌ ಗೆಲುವು ಸಾಧಿಸಿದೆ. 7 ಪಂದ್ಯಗಳು ಫಲಿತಾಂಶವಿಲ್ಲದೇ ರದ್ದಾಗಿದ್ದರೆ, 1 ಪಂದ್ಯ ಟೈನಲ್ಲಿ ಅಂತ್ಯಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಲಾ 4 ಅಂಕ ಗಳಿಸಿದ್ದರೂ ರನ್‌ರೇಟ್‌ ಆಧಾರದಲ್ಲಿ ಕಿವೀಸ್‌ ಎ-ಗುಂಪಿನ ಅಗ್ರಸ್ಥಾನದಲ್ಲಿದ್ದರೆ, ಭಾರತ 2ನೇ ಸ್ಥಾನದಲ್ಲಿದೆ. ಭಾನುವಾರದ ಪಂದ್ಯದಲ್ಲಿ ಭಾರತ ಗೆದ್ದರೇ ತನ್ನ ಗುಂಪಿನಿಂದ ಅಗ್ರಸ್ಥಾನಿಯಾಗಿ ಹೊಮ್ಮಲಿದೆ. ವಿಜೇತ ತಂಡ ಸೆಮೀಸ್‌ ಪಂದ್ಯವನ್ನು ಆತ್ಮವಿಶ್ವಾಸದಿಂದ ಎದುರಿಸುವ ಅವಕಾಶವನ್ನು ಪಡೆದುಕೊಳ್ಳಲಿದೆ.

ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್‌ ಟ್ರೋಫಿ | ಪಾಕ್‌ ವಿರುದ್ಧದ ಒಂದು ಪಂದ್ಯ – ವಿರಾಟ್ ಕೊಹ್ಲಿಗೆ ಹಲವು ದಾಖಲೆಗಳ ಕಿರೀಟ

ಹಿಂದಿನ ಪಂದ್ಯಗಳ ಗೆಲುವಿನ ಹೊರತಾಗಿಯೂ ಟೀಂ ಇಂಡಿಯಾ ಬ್ಯಾಟರ್‌ಗಳು ಸ್ಪಿನ್‌ ಬೌಲಿಂಗ್‌ನಲ್ಲಿ ರನ್‌ಗಳಿಸಲು ಪರದಾಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಸ್ಪಿನ್ನರ್‌ಗಳಾದ ಮೆಹಿದಿ ಹಸನ್‌ ಮಿರಾಜ್‌ (0/37) ಮತ್ತು ರಿಷಾದ್‌ ಹೊಸೈನ್‌ (2/38) ಅವರ ಬೌಲಿಂಗ್‌ ದಾಳಿ ಎದುರಿಸುವ ಸಂದರ್ಭದಲ್ಲಿ ಭಾರತೀಯ ಬ್ಯಾಟರ್‌ಗಳು ಎಚ್ಚರಿಕೆಯ ಆಟ ಪ್ರದರ್ಶಿಸಿದ್ದರು.

ಪಾಕ್‌ ವಿರುದ್ಧದ ಪಂದ್ಯದಲ್ಲಿ ʻಮಿಸ್ಟರಿ ಸ್ಪಿನ್ನರ್‌ʼ ಎಂದೇ ಬಿರುದಾಂಕಿತ ಲೆಗ್‌ ಸ್ಪಿನ್ನರ್‌ ಅಬ್ರಾರ್‌ ಅಹಮದ್‌ (1/28) ಅವರ ಎಸೆತಗಳನ್ನು ಎದುರಿಸುವಾಗಲೂ ಅದೇ ಎಚ್ಚರಿಕೆ ಮತ್ತು ಸುರಕ್ಷಿತ ಆಟಕ್ಕೆ ರೋಹಿತ್‌ ಪಡೆ ಮುಂದಾಗಿತ್ತು. ಪ್ರತಿಯೊಂದು ಎಸೆತಗಳನ್ನು ಕೊಹ್ಲಿ ಎಚ್ಚರಿಕೆಯಿಂದ ಎದುರಿಸುತ್ತಿದ್ದರು. ಆದರೆ ಮಿಷಲ್‌ ಸ್ಯಾಂಟ್ನರ್‌ ನೇತೃತ್ವದಲ್ಲಿ ಬಲಿಷ್ಠ ಸ್ಪಿನ್‌ ಪಡೆಯನ್ನು ಹೊಂದಿರುವ ಕಿವೀಸ್‌ನಿಂದ ಭಾರತ ಕಠಿಣ ಸವಾಲನ್ನು ನಿರೀಕ್ಷಿಸಬಹುದಾಗಿದೆ.

ಪಾಕ್‌ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ಕಿವೀಸ್‌ನ ಮಿಚೆಲ್‌ ಸ್ಯಾಂಟ್ನರ್‌ (66ಕ್ಕೆ 3), ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಮೈಕೆಲ್‌ ಬ್ರೇಸ್‌ವೆಲ್‌ (28ಕ್ಕೆ 4) ಎದುರಾಳಿ ತಂಡದ ಬ್ಯಾಟರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ್ದರು. ಹೀಗಾಗಿ ಬ್ಯಾಟಿಂಗ್‌ ಲಯಕ್ಕೆ ಮರಳಿರುವ ಕಿಂಗ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆ ಎಲ್‌ ರಾಹುಲ್‌, ಶುಭಮನ್‌ ಗಿಲ್‌ ಅವರಿಂದ ಉತ್ತಮ ಪ್ರದರ್ಶನವನ್ನು ತಂಡ ನಿರೀಕ್ಷಿಸಿದೆ.

ಟೀಂ ಇಂಡಿಯಾ ಈವರೆಗೆ ಕಣಕ್ಕಿಳಿಸಿರುವ ಮೂವರು ಸ್ಪಿನ್ನರ್‌ಗಳಾದ ರವೀಂದ್ರ ಜಡೇಜ, ಅಕ್ಷರ್‌ ಪಟೇಲ್‌ ಮತ್ತು ಕುಲ್‌ದೀಪ್ ಯಾದವ್‌ ಹೆಚ್ಚು ವಿಕೆಟ್‌ಗಳನ್ನು ಪಡೆಯದೇ ಇದ್ದರೂ ಎದುರಾಳಿ ಬ್ಯಾಟರ್‌ಗಳನ್ನು ನಿಯಂತ್ರಿಸಿದ್ದಾರೆ. ಅದರಲ್ಲೂ ಪಾಕ್‌ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್‌ ರಿಜ್ವಾನ್‌ ಮತ್ತು ಸೌದ್‌ ಶಕೀಲ್‌ ನೂರಕ್ಕೂ ಹೆಚ್ಚು ರನ್‌ಗಳ ಜೊತೆಯಾಟ ನೀಡಿದರೂ 11-34 ಓವರ್‌ಗಳ ಅವಧಿಯಲ್ಲಿ ಭಾರತೀಯ ಸ್ಪಿನ್‌ ಬೌಲಿಂಗ್‌ ಪಡೆಯ ದಾಳಿಯಿಂದ ಪಾಕ್‌ ರನ್‌ ಗಳಿಕೆ ಹೆಚ್ಚಿಸಲು ಹರಸಾಹಸ ಪಟ್ಟಿತು.

ನ್ಯೂಜಿಲೆಂಡ್‌ನ ಕೇನ್‌ ವಿಲಿಯಮ್ಸನ್‌, ವಿಲ್‌ ಯಂಗ್‌, ಟಾಮ್‌ ಲಾಥಮ್‌, ಡಿವೋನ್‌ ಕಾನ್ವೆ ಮತ್ತು ರಚಿನ್‌ ರವೀಂದ್ರ ಅವರು ಸ್ಪಿನ್‌ ದಾಳಿಯನ್ನು ಸಮರ್ಥವಾಗಿ ಎದುರಿಸಬಲ್ಲ ಬ್ಯಾಟರ್‌ಗಳಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...