ಐಪಿಎಲ್ 2024 | ಚೆನ್ನೈನ ಪತಿರಾಣ ಬೌಲಿಂಗ್‌ಗೆ ಮುಂಬೈ ಕಂಗಾಲು; ರೋಹಿತ್ ಶತಕ ವ್ಯರ್ಥ

Date:

ಋತುರಾಜ್ ಗಾಯಕ್ವಾಡ್ (69), ಶಿವಂ ದುವೆ (66) ಮತ್ತು ಎಂ ಎಸ್ ಧೋನಿ (ಅಜೇಯ 20) ಅವರ  ಬ್ಯಾಟಿಂಗ್ ಕಲರವ ಮತ್ತು ಮತೀಶಾ ಪತಿರಾಣ ಅವರ (28/4) ಅದ್ಭುತ ಬೌಲಿಂಗ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.

ಪ್ರಸಕ್ತ ಆವೃತ್ತಿಯಲ್ಲಿ ಇದೇ ಮೊದಲ ಬಾರಿಗೆ ತವರಿನಿಂದ ಹೊರಗೆ ಚೆನ್ನೈ ಜಯಗಳಿಸಿತು. ರೋಹಿತ್ ಶರ್ಮಾ ಸಿಡಿಸಿದ ಶತಕದ ಹೊರತಾಗಿಯೂ ಮುಂಬೈ 20 ರನ್‌ಗಳ ಅಂತರದಿಂದ ಸೋಲನುಭವಿಸಿದೆ. ಹಾರ್ದಿಕ್ ಪಡೆಗೆ ಇದು ಟೂರ್ನಿಯಲ್ಲಿ 4ನೇ ಸೋಲಾಗಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಆವೃತ್ತಿಯ 29ನೇ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಸಿಎಸ್‌ಕೆ ಬೃಹತ್ ಮೊತ್ತ ದಾಖಲಿಸಿತು. ಋತುರಾಜ್ ಮತ್ತು ದುಬೆ ತಲಾ ಅರ್ಧಶತಕ ಸಿಡಿಸಿದರೆ, ಕೊನೆಯಲ್ಲಿ ಧೋನಿ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಅಂತಿಮವಾಗಿ ಚೆನ್ನೈ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 206 ರನ್ ಪೇರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿ ಬೆನ್ನಟ್ಟಿದ ಮುಂಬೈ ರೋಹಿತ್ ಶರ್ಮಾ ಬಿರುಸಿನ ಬ್ಯಾಟಿಂಗ್ ಹೊರತಾಗಿಯೂ ಗೆಲುವು ತಂದುಕೊಡಲಾಗಲಿಲ್ಲ. ಮುಂಬೈ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಲಷ್ಟೆ ಸಾಧ್ಯವಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಮೊದಲು ಭರ್ಜರಿ ಆರಂಭ ಪಡೆದ ಮುಂಬೈ, 7 ಓವರ್‌ಗಳಲ್ಲಿ ಮೊದಲ ವಿಕೆಟ್‌ಗೆ 70 ರನ್ ಕಲೆ ಹಾಕಿತು. ಆರಂಭಿಕ ಆಟಗಾರ ಇಶಾನ್ ಕಿಶನ್ 23 ರನ್‌ಗಳಿಸಿ ಔಟಾದರು. ಕಳೆದ ಪಂದ್ಯದಲ್ಲಿ ಸ್ಪೋಟಕ ಆಟವಾಡಿದ್ದ ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ಶೂನ್ಯಕ್ಕೆ ಪೆವಿಲಿಯನ್‌ಗೆ ತೆರಳಿಸಿದರು.

ಒಂದೇ ಓವರ್‌ನಲ್ಲಿ ಇಬ್ಬರು ಆಟಗಾರರನ್ನು ಮತೀಶಾ ಪತಿರಾಣ ಶೂನ್ಯಕ್ಕೆ ಔಟ್‌ ಮಾಡಿದರು. ಇವೆಲ್ಲದರ ನಡುವೆಯೂ ಆರಂಭಿಕ ಆಟಗಾರ ರೋಹಿತ್ ಶರ್ಮಾ, ಕೊನೆಯವರೆಗೂ ಭರ್ಜರಿ ಬ್ಯಾಟಿಂಗ್‌ ನಡೆಸಿದರು. ಐಪಿಎಲ್‌ನಲ್ಲಿ 2ನೇ ಶತಕ ಸಿಡಿಸಿದರೂ ಮುಂಬೈಗೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. 63 ಎಸೆತಗಳಲ್ಲಿ 13 ಬೌಂಡರಿ, 5 ಸಿಕ್ಸರ್ ಸಹಿತ 105 ನ್ ಗಳಿಸಿ ಅಜೇಯರಾಗಿ ಉಳಿದರು.

ಈ ಮೊದಲು ಬ್ಯಾಟಿಂಗ್ ನಡೆಸಿದ ಸಿಎಸ್‌ಕೆ, ಉತ್ತಮ ಆರಂಭ ಪಡೆಯಲಿಲ್ಲ. ಬಡ್ತಿ ಪಡೆದು ಆರಂಭಿಕನಾಗಿ ಕಣಕ್ಕಿಳಿದ ಅಜಿಂಕ್ಯ ರಹಾನೆ 5 ರನ್‌ಗೆ ವಿಕೆಟ್ ಒಪ್ಪಿಸಿದರು. ರಚಿನ್ ರವೀಂದ್ರ (21) ಕೂಡ ಹೆಚ್ಚು ಹೊತ್ತು ಕ್ರೀಸಿನಲ್ಲಿ ನಿಲ್ಲಲಿಲ್ಲ. ಜೆರಾಲ್ಡ್ ಕೊಯೆಟ್ಜಿ ಮತ್ತು ಶ್ರೇಯಸ್ ಗೋಪಾಲ್ ತಲಾ ಒಂದು ವಿಕೆಟ್ ಪಡೆದರು. ಬಳಿಕ ಜೊತೆಯಾದ ನಾಯಕ ಋತುರಾಜ್ ಗಾಯಕ್ವಾಡ್ ಮತ್ತು ಶಿವಂ ದುಬೆ 3ನೇ ವಿಕೆಟ್‌ಗೆ 90 ರನ್‌ಗಳ ಜೊತೆಯಾಟವಾಡಿದರು.

ಅದ್ಭುತ ಅಟವಾಡಿದ ಈ ಜೋಡಿ, ತಲಾ ಅರ್ಧಶತಕ ಸಿಡಿಸಿ ಮಿಂಚಿದರು. ಋತುರಾಜ್ 40 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಹಿತ 69 ರನ್ ಬಾರಿಸಿದರೆ, ಶಿವಂ ದುಬೆ 38 ಎಸೆತಗಳಲ್ಲಿ 10 ಬೌಂಡರಿ, 2 ಸಿಕ್ಸರ್ ಸಹಿತ ಅಜೇಯ 66 ರನ್ ಚಚ್ಚಿದರು. ಕೊನೆಯಲ್ಲಿ ಬಂದ ಆಪತ್ಬಾಂಧವ ಧೋನಿ 4 ಎಸೆತಗಳಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಹಿತ 20 ರನ್ ಬಾರಿಸಿದರು. ಗೆಲುವಿಗೆ ಈ ರನ್‌ ಪ್ರಮುಖ ಕಾರಣವಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...