ಕ್ರಿಕೆಟ್ | ಮುಂಬೈ ತಂಡ ತೊರೆದು ಗೋವಾ ಸೇರುತ್ತೇನೆಂದ ಯಶಸ್ವಿ ಜೈಸ್ವಾಲ್

Date:

ಭಾರತೀಯ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ರಣಜಿಯಲ್ಲಿ ಮುಂಬೈ ತಂಡ ತೊರೆಯಲು ನಿರ್ಧರಿಸಿದ್ದಾರೆ. ಗೋವಾ ತಂಡ ಸೇರುವುದಾಗಿ ಹೇಳಿಕೊಂಡಿದ್ದಾರೆ.

ವೈಯಕ್ತಿಕ ಕಾರಣಗಳನ್ನು ಉಲ್ಲೆಖಿಸಿ ಜೈಸ್ವಾಲ್ ಅವರು ‘ಮುಂಬೈ ಕ್ರಿಕೆಟ್ ಅಸೋಸಿಯೇಷನ್‌’ಗೆ (ಎಂಸಿಎ) ಪತ್ರ ಬರೆದಿದ್ದಾರೆ. ತಮ್ಮನ್ನು ತಂಡದಿಂದ ಇಡುಗಡೆಗೊಳಿಸುವಂತೆ ವಿನಂತಿ ಮಾಡಿದ್ದಾರೆ. ಅಲ್ಲದೆ, 2025-26ನೇ ರಣಜಿ ಕ್ರಿಕೆಟ್ ಋತುವಿನಿಂದ ಗೋವಾ ತಂಡದಲ್ಲಿ ಆಡುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಎಂಸಿಎ ಅಧಿಕಾರಿ ಕೂಡ ಖಾತ್ರಿ ಪಡಿಸಿದ್ದು, “ಜೈಸ್ವಾಲ್ ನಡೆ ಆಶ್ಚರ್ಯಕರವಾಗಿದೆ. ಅವರು ಈ ರೀತಿಯ ನಿರ್ಧಾರ ತೆಗೆದುಕೊಳ್ಳಲು ಪ್ರಮುಖ ಕಾರಣ ಇರಬಹುದು. ಮುಂಬೈ ತಂಡದಿಂದ ತಮ್ಮನ್ನು ಬಿಡುಗಡೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ. ಅವರ ವಿನಂತಿಯನ್ನು ನಾವು ಸ್ವೀಕರಿಸಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋವಾ ಕ್ರಿಕೆಟ್ ಅಸೋಸಿಯೇಷನ್‌ನ ಕಾರ್ಯದರ್ಶಿ ಶಂಬಾ ದೇಸಾಯಿ ಕೂಡ ಪ್ರತಿಕ್ರಿಯಿಸಿದ್ದು, “”ಜೈಸ್ವಾಲ್ ನಮ್ಮ ತಂಡದಲ್ಲಿ ಆಡಲು ಬಯಸಿದ್ದಾರೆ. ಅವರನ್ನು ನಾವು ಸ್ವಾಗತಿಸುತ್ತೇವೆ. ಅವರು ಗೋವಾ ತಂಡವನ್ನು ಮುನ್ನಡೆಸಬಹುದು. ಆದಾಗ್ಯೂ, ತಂಡದಲ್ಲಿ ಅವರ ಲಭ್ಯತೆ ಯಾವ ರೀತಿಯಲ್ಲಿರುತ್ತದೆ ಎಂಬುದರ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ” ಎಂದು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಐಪಿಎಲ್ ಕ್ರಿಕೆಟ್ | ಆಟಗಾರರು, ಅಭಿಮಾನಿಗಳು ಮತ್ತು ಸೋಷಿಯಲ್ ಮೀಡಿಯಾ ಎಂಬ ಕಿಂದರಿಜೋಗಿ

ಇತ್ತೀಚೆಗೆ, ಭಾರತೀಯ ಕ್ರಿಕೆಟ್‌ ತಂಡದಲ್ಲಿ ಇರುವ ಎಲ್ಲ ಆಟಗಾರರು ಕಡ್ಢಾಯವಾಗಿ ದೇಶಿಯ ಕ್ರಿಕೆಟ್ (ರಣಜಿ)ಯಲ್ಲಿ ಆಡಲೇಬೇಕೆಂದು ಬಿಸಿಸಿಐ ನಿಯಮ ರೂಪಿಸಿದೆ. ಈ ಹಿನ್ನೆಲೆಯಲ್ಲಿ ಜೈಸ್ವಾಲ್ 2024-25ನೇ ಋತುವಿನ ರಣಜಿ ಟೂರ್ನಿಯಲ್ಲಿ ಮುಂಬೈ ತಂಡದಲ್ಲಿ ಆಡಿದ್ದರು. ಇದೀಗ, ತಂಡ ತೊರೆಯಲು ನಿರ್ಧರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...