ಸ್ನೇಹಿತನಿಂದಾಗಿ ಆತ್ಮಹತ್ಯೆ ನಿರ್ಧಾರ ಕೈಬಿಟ್ಟೆ: ಕ್ರಿಕೆಟಿಗ ಯಜುವೇಂದ್ರ ಚಾಹಲ್

Date:

ಪತ್ನಿ ಧನಶ್ರೀ ವರ್ಮಾ ಅವರಿಂದ ದೂರವಾಗಿದ್ದರ ಬಗ್ಗೆ ಕ್ರಿಕೆಟಿಗ ಯಜುವೇಂದ್ರ ಚಾಹಲ್ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದಾರೆ.

ಮದುವೆಯಾದ ಒಂದೆರಡು ವರ್ಷಗಳ ತರುವಾಯ ಇಬ್ಬರ ನಡುವೆ ಹೊಂದಾಣಿಕೆ ಬೆಳೆಯಲಿಲ್ಲ. ಅವಳಿಗೆ ನಾನು ಸಮಯ ಕೊಡೊಕೆ ಆಗುತ್ತಿರಲಿಲ್ಲ, ಇದರಿಂದ ಜಗಳ ಆಗುತ್ತಿತ್ತು. ಕ್ರಮೇಣ ಅದು ಬೆಳೆಯಿತು. ಮದುವೆಯಾಗಿ ಮೂರು ವರ್ಷದ ನಂತರ ಬೇರೆ ಆಗಲು ನಿರ್ಧರಿಸಲಾಯಿತು ಎಂದು ರಾಜ್ ಶಮಾನಿ ಯೂಟ್ಯೂಬ್ ಚಾನಲ್ ಜೊತೆ ಅವರು ಮಾತನಾಡಿದ್ದಾರೆ.

ಆಗ ಇಬ್ಬರು ಬೇರೆ ಆಗುವ ತೀರ್ಮಾನ ಮಾಡಲಾಯಿತು. ಆದರೆ, ಈ ವಿಷಯವನ್ನು ಬಹಿರಂಗಗೊಳಿಸುವುದು ಬೇಡ ಎಂದು ತೀರ್ಮಾನ ಆಯಿತು. ಹಾಗೆಯೇ ಎರಡು ವರ್ಷ ಮುಂದುವರೆಸಿಕೊಂಡು ಬರಲಾಯಿತು ಎಂದು ಬೇಸರ ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಡೆಗೆ ನಮ್ಮಿಬ್ಬರ ಸಂಬಂಧ ಸರಿ ಇಲ್ಲ ಎಂದು ಮಾತುಗಳು ಕೇಳಿಬರಲು ಶುರುವಾಯಿತು. ವಿಚ್ಛೇದನಕ್ಕೆಅರ್ಜಿ ಸಲ್ಲಿಸಲಾಯಿತು. ಆ ವೇಳೆ ಮಾಧ್ಯಮಗಳು, ಸಾಮಾಜಿಕ ಮಾಧ್ಯಮಗಳಲ್ಲಿನ ಚರ್ಚೆ, ಟೀಕೆ, ಬೆಂಬಲ ಎಲ್ಲ ನೋಡಿ ನಾನು ಖಿನ್ನತೆಗೆ ಹೋಗಿದ್ದೆ. ಆತ್ಮಹತ್ಯೆಯ ವಿಚಾರವನ್ನೂ ಮಾಡಿದ್ದೆ. ಎರಡೇ ಗಂಟೆ ಮಲಗುತ್ತಿದ್ದೆ, ಅಳುತ್ತಿದ್ದೆ, ಆದರೆ, ಸ್ನೇಹಿತ ತಡೆದ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಾಢ್ಯರೊಂದಿಗೆ ಜೊತೆಯಾಗುವುದು ಜನದ್ರೋಹ

ಯಾರಾದರೂ ಏನಾದರೂ ಹೇಳಬಹುದು. ಆದರೆ, ನಾನು ಇಬ್ಬರು ಸಹೋದರಿಯರೊಂದಿಗೆ ಬೆಳೆದಿದ್ದೇನೆ. ಹೆಣ್ಣನ್ನು ಗೌರವಿಸುವುದು ನನಗೆ ಗೊತ್ತು. ಅದೆಲ್ಲ ಮುಗಿದು ಹೋದ ಕಥೆ. ದೇವರ ದಯೆಯಿಂದ ಬದುಕಿದ್ದೇನೆ ಎಂದು ಹೇಳಿದ್ದಾರೆ. ಈ ಕುರಿತು ದಿ ಹಿಂದೂಸ್ತಾನ್ ಟೈಮ್ಸ್ ವೆಬ್‌ಸೈಟ್ ವರದಿ ಮಾಡಿದೆ.

ಪತ್ನಿ ಧನಶ್ರೀ ವರ್ಮಾ ಅವರಿಗೆ ವಿಚ್ಛೇದನ ನೀಡಲು ಮುಂಬೈನ ಬಾಂದ್ರಾದ ಕೌಟುಂಬಿಕ ನ್ಯಾಯಾಲಯ ಕಳೆದ ಮಾರ್ಚ್‌ನಲ್ಲಿ ಅನುಮತಿ ನೀಡಿತ್ತು.

2020ರ ಡಿಸೆಂಬರ್‌ನಲ್ಲಿ ಇಬ್ಬರ ವಿವಾಹ ನಡೆದಿತ್ತು. ಅರ್ಜಿಯ ಪ್ರಕಾರ 2022ರ ಜೂನ್‌ನಿಂದ ಇಬ್ಬರೂ ಪ್ರತ್ಯೇಕ ವಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...