ಐಪಿಎಲ್ 2023 | ಮೊಯಿನ್ ಅಲಿ ಮಾರಕ ಬೌಲಿಂಗ್‌ ದಾಳಿಗೆ ಕುಸಿದ ಲಖನೌ; ಚೆನ್ನೈಗೆ ರೋಚಕ ಗೆಲುವು

Date:

ಮೊಯಿನ್ ಅಲಿ ಅವರ ಮಾರಕ ಸ್ಪಿನ್‌ ದಾಳಿ ಹಾಗೂ ಋತುರಾಜ್‌ ಗಾಯಕ್ವಾಡ್, ಡೆವೋನ್‌ ಕಾನ್ವೆ ಅವರ ಸ್ಫೋಟಕ ಬ್ಯಾಟಿಂಗ್‌ನಿಂದಾಗಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಲಖನೌ ಸೂಪರ್ ಜೈಂಟ್ಸ್‌ಅನ್ನು 12 ರನ್‌ಗಳ ಮೂಲಕ ಮಣಿಸಿ ಐಪಿಎಲ್‌ 16 ಆವೃತ್ತಿಯಲ್ಲಿ ಮೊದಲ ಗೆಲುವು ದಾಖಲಿಸಿತು.

ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ಸಿಎಸ್‌ಕೆ ನೀಡಿದ 217 ರನ್‌ಗಳನ್ನು ಬೆನ್ನಟ್ಟಿದ ಕೆ ಎಲ್‌ ರಾಹುಲ್ ನೇತೃತ್ವದ ಲಖನೌ ತಂಡ ಕೈಲ್ ಮೇಯರ್ಸ್ ಹಾಗೂ ನಿಕೋಲಸ್ ಪೂರನ್ ಅವರ ಸ್ಫೋಟಕ ಬ್ಯಾಟಿಂಗ್‌ ಹೊರತಾಗಿಯೂ 20 ಓವರ್‌ಗಳಲ್ಲಿ 205 ರನ್‌ಗಳನ್ನು ಗಳಿಸಿ ಸೋಲಪ್ಪಿಕೊಂಡಿತು.

ಕೈಲ್ ಮೇಯರ್ಸ್ ಕೇವಲ 22 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್‌ ಮೂಲಕ 53 ರನ್‌ ಹಾಗೂ ಮತ್ತೊಬ್ಬ ಸ್ಫೋಟಕ ಆಟಗಾರ ನಿಕೋಲಸ್ ಪೂರನ್ 18 ಚಂಡುಗಳಲ್ಲಿ 3 ಸಿಕ್ಸರ್‌ ಮತ್ತು 2 ಬೌಂಡರಿ ಮೂಲಕ ಲಖನೌ ತಂಡಕ್ಕೆ ಗೆಲುವಿನ ಆಶಾಭಾವನೆ ಮೂಡಿಸಿದರು. ಆದರೆ ಚೆನ್ನೈ ತಂಡದ ಕರಾರುವಕ್‌ ಬೌಲಿಂಗ್‌ ದಾಳಿ ಜಯದ ನಗೆ ಬೀರಲು ಅವಕಾಶ ನೀಡಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಲ್ಕು ವಿಕೆಟ್ ಪಡೆದ ಮೋಹಿನ್‌ ಅಲಿ

ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಸ್ಪಿನ್ನರ್ ಮೊಯಿನ್‌ ಅಲಿ, ಬೌಂಡರಿ ಹಾಗೂ ಸಿಕ್ಸರ್‌ ಮೂಲಕ ರನ್‌ಗಳ ಮಳೆ ಸುರಿಸುತ್ತಿದ್ದ ಲಖನೌದ ಸ್ಪೋಟಕ ಆಟಗಾರರಾದ ಕೈಲ್ ಮೇಯರ್ಸ್,ಮಾರ್ಕಸ್ ಸ್ಟೊಯಿನಿಸ್ ಹಾಗೂ ನಾಯಕ ಕೆ ಎಲ್‌ ರಾಹುಲ್‌,ಕೃನಾಲ್‌ ಪಾಂಡ್ಯ ಅವರ ವಿಕೆಟ್ ಪಡೆಯುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇವರೊಂದಿಗೆ ತುಷಾರ್‌ ದೇಶಪಾಂಡೆ ಎರಡು ಹಾಗೂ ಮಿಚೆಲ್ ಸ್ಯಾಂಟ್ನರ್ ಒಂದು ವಿಕೆಟ್ ಪಡೆದರು.

ಸ್ಫೋಟಿಸಿದ ಋತುರಾಜ್‌, ಡಿವೋನ್‌ ಕಾನ್ವೆ

ಟಾಸ್ ಸೋತು ಬ್ಯಾಟಿಂಗ್‌ ಆರಂಭಿಸಿದ ಚೆನ್ನೈ ಸೂಪರ್‌ ಕಿಂಗ್ಸ್ ಆರಂಭಿಕ ಆಟಗಾರರಾದ ಋತುರಾಜ್‌ ಹಾಗೂ ಡಿವೋನ್‌ ಕಾನ್ವೆ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ 7 ವಿಕೆಟ್ ನಷ್ಟಕ್ಕೆ 217 ರನ್‌ಗಳ ಭರ್ಜರಿ ಮೊತ್ತ ದಾಖಲಿಸಿತ್ತು. ಇಬ್ಬರೂ ಆಟಗಾರರು ಎರಡನೇ ಓವರ್‌ನಿಂದಲೇ ಬ್ಯಾಟ್‌ ಸಿಡಿಸಲು ಆರಂಭಿಸಿದರು.

ಕಾನ್ವೆ ಐದನೇ ಓವರ್‌ನಲಿ ಕೆ ಗೌತಮ್‌ ಬೌಲಿಂಗ್‌ನಲ್ಲಿ ಮೂರು ಸಿಕ್ಸರ್‌ ಬಾರಿಸಿದರು. ಇವರಿಬ್ಬರ ಜೋಡಿ ಮಾರ್ಕ್‌ ವುಡ್‌ ಬೌಲಿಂಗ್‌ನಲ್ಲಿ ಆರನೇ ಓವರ್‌ನಲ್ಲಿ 19 ಹಾಗೂ ಎಂಟನೇ ಓವರ್‌ನಲ್ಲಿ 15 ರನ್‌ ಬಾರಿಸಿದರು. ಹತ್ತನೆ ಓವರ್‌ನಲ್ಲಿ ರವಿ ಬಿಷ್ಣೋಯಿ ಬೌಲಿಂಗ್‌ನಲ್ಲಿ ಔಟಾದ ಋತುರಾಜ್‌ 31 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಮೂರು ಬೌಂಡರಿಗಳೊಂದಿಗೆ 57 ರನ್‌ ಸಿಡಿಸಿದ್ದರು.

ಡಿವೋನ್‌ ಕಾನ್ವೆ ಕೂಡ ತಾವೇನು ಕಡಿಮೆಯಿಲ್ಲದಂತೆ 29 ಚಂಡುಗಳಲ್ಲಿ 5 ಬೌಂಡರಿ, 2 ಅಮೋಘ ಸಿಕ್ಸರ್‌ನೊಂದಿಗೆ 47 ರನ್‌ ಪೇರಿಸಿದರು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಲು ಬಂದ ಶಿವಂ ದುಬೆ ಕೇವಲ 16 ಚಂಡುಗಳಲ್ಲಿ 3 ಸೊಗಸಾದ ಸಿಕ್ಸರ್ ಹಾಗೂ ಒಂದು ಬೌಂಡರಿಯೊಂದಿಗೆ 27 ರನ್‌ ಕಲೆ ಹಾಕಿದರು.

ಆರನೇ ಕ್ರಮಾಂಕದಲ್ಲಿ ಆಗಮಿಸಿದ ಅಂಬಾಟಿ ರಾಯುಡು 14 ಚಂಡುಗಳಲ್ಲಿ 2 ಸಿಕ್ಸರ್‌ ಹಾಗೂ 2 ಬೌಂಡರಿ ಮೂಲಕ 27 ರನ್‌ ಗಳಿಸಿ ಕೊನೆಯಲ್ಲಿ ಪ್ರೇಕ್ಷಕರಿಗೆ ರಸದೌತಣ ನೀಡಿದರು. ನಾಯಕ ಧೋನಿ ಕೂಡ 3 ಎಸೆತಗಳಲ್ಲಿ 2 ಸಿಕ್ಸರ್‌ ಮೂಲಕ 12 ರನ್‌ ಸ್ಪೋಟಿಸಿದರು.

ಲಖನೌ ಪರ ರವಿ ಬಿಷ್ಣೋಯಿ 28/3 ಗಳಿಸಿ ಯಶಸ್ವಿ ಬೌಲರ್‌ ಎನಿಸಿದರೆ, ಮಾರ್ಕ್‌ವುಡ್‌ ಹಾಗೂ ಆವೇಶ್‌ ಖಾನ್‌ ತಲಾ ಒಂದೊಂದು ವಿಕೆಟ್ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...