IPL-2025 | ತವರಲ್ಲಿಯೇ ಮತ್ತೆ ಸೋತ ಆರ್‌ಸಿಬಿ: ರಾಹುಲ್‌ ಆಕರ್ಷಕ ಆಟದಿಂದ ಗೆದ್ದ ಡೆಲ್ಲಿ

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿ ತಂಡವು 6 ವಿಕೆಟ್‌ಗಳಿಂದ ಸೋಲೊಪ್ಪಿಕೊಂಡಿದೆ. ಆ ಮೂಲಕ ತವರಲ್ಲಿ ಸೋಲಿನ ಸುಳಿಯಿಂದ ಪಾರಾಗುವಲ್ಲಿ ವಿಫಲವಾಗಿದೆ.

ಗೆಲ್ಲಲು ಕೇವಲ 164 ರನ್‌ಗಳ ಗುರಿಯನ್ನು ಪಡೆದಿದ್ದ ಡೆಲ್ಲಿ ಕ್ಯಾಪಿಟಲ್ಸ್, ಕೆ ಎಲ್ ರಾಹುಲ್‌ ಅವರ ಆಕರ್ಷಕ ಅರ್ಧಶತಕ (93 ರನ್) ನೆರವಿನಿಂದ 4 ವಿಕೆಟ್‌ಗಳಿಂದ ಗೆದ್ದು ಬೀಗಿತು.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ್ದ ಆರ್‌ಸಿಬಿ ದಿಢೀರ್ ಕುಸಿತದ ಪರಿಣಾಮವಾಗಿ ಕೇವಲ 164 ರನ್‌ಗಳನ್ನು ಕಲೆ ಹಾಕಿತ್ತು. ಇನ್ನೂ 13 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ತಲುಪಿತು. ಆರ್‌ಸಿಬಿ ತಂಡವು ತನ್ನ ತವರಲ್ಲೇ ಎರಡನೇ ಸೋಲು ಅನುಭವಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷವೆಂದರೆ, ಆರ್‌ಸಿಬಿ vs ಡಿಸಿ ಪಂದ್ಯದಲ್ಲಿ ಕೆಎಲ್‌ ರಾಹುಲ್‌ ಅವರು ಬರೋಬ್ಬರಿ 9 ವರ್ಷಗಳ ನಂತರ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅರ್ಧ ಶತಕ ಬಾರಿಸಿದ್ದಾರೆ. ಹೌದು, ಕನ್ನಡದ ಈ ಹುಡುಗ ಬೆಂಗಳೂರಿನಲ್ಲಿ 9 ವರ್ಷಗಳ ಬಳಿಕ ಅರ್ಧ ಶತಕವೊಂದನ್ನು ದಾಖಲಿಸಿದ್ದು, ಈ ಅರ್ಧ ಶತಕ ಆರ್‌ಸಿಬಿ ವಿರುದ್ಧ ಬಂದಿರುವುದು ವಿಶೇಷ.

ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಕೆಎಲ್‌ ರಾಹುಲ್ ಕೇವಲ 53 ಎಸೆತಗಳಲ್ಲಿ ಅಜೇಯ 93 ರನ್ ಗಳಿಸಿ ಮಿಂಚಿದರು. ಅವರ ಈ ಅದ್ಭುತ ಆಟದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರು ವಿಕೆಟ್ ಗಳಿಂದ ಜಯ ಸಾಧಿಸಿತು. ರಾಹುಲ್ ಅವರ ಈ ಇನ್ನಿಂಗ್ಸ್ ವಿಶೇಷವಾಗಿತ್ತು. ಏಕೆಂದರೆ ಇದು ಒಂಬತ್ತು ವರ್ಷಗಳ ನಂತರ ಬೆಂಗಳೂರಿನಲ್ಲಿ ಅವರು ಗಳಿಸಿದ ಮೊದಲ ಅರ್ಧ ಶತಕವಾಗಿತ್ತು.

ಈ ಹಿಂದೆ ಕೆಎಲ್‌ ರಾಹುಲ್ ಅವರು ಮುಂಬೈ ಇಂಡಿಯನ್ಸ್ (ಎಂಐ) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್‌) ವಿರುದ್ಧ 50+ ರನ್ ಗಳಿಸಿದ್ದರು. ಆದರೆ, ತವರಿನ ಅಂಗಳದಲ್ಲಿ ಅವರಿಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಈ ಬಾರಿ ಅವರು ಅದ್ಭುತ ಫಾರ್ಮ್‌ನಲ್ಲಿದ್ದು, ಡೆಲ್ಲಿ ತಂಡವು ಈ ಸೀಸನ್‌ನಲ್ಲಿ ನಾಲ್ಕನೇ ಗೆಲುವು ಸಾಧಿಸಲು ಪ್ರಮುಖ ಕಾರಣರಾದರು.

ಆರ್‌ಸಿಬಿ ನೀಡಿದ್ದ 164 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ, ಆರಂಭದಲ್ಲೇ ಆಘಾತ ಎದುರಾಯಿತು. ಫಾಫ್ ಡು ಪ್ಲೆಸಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್ ಮತ್ತು ಅಭಿಷೇಕ್ ಪೊರೆಲ್ ಬೇಗನೆ ಔಟಾದರು. ನಂತರ ಕೆಎಲ್‌ ರಾಹುಲ್‌ ಅವರು ಜವಾಬ್ದಾರಿಯನ್ನು ತೆಗೆದುಕೊಂಡು, ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಟ್ರಿಸ್ಟಾನ್ ಸ್ಟಬ್ಸ್ ಮಧ್ಯಮ ಕ್ರಮಾಂಕದಲ್ಲಿ ಕೆಎಲ್‌ ರಾಹುಲ್‌ ಅವರಿಗೆ ಉತ್ತಮ ಬೆಂಬಲ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...