ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

Date:

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ ಬ್ಯಾಟಿಂಗ್ ಮಾತ್ರವಲ್ಲದೇ ಬೌಲಿಂಗ್‌ನಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಪ್ರದರ್ಶನ ನೀಡುವ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು 10 ರನ್‌ಗಳಿಂದ ಸೋಲಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ ಕೇವಲ 4 ವಿಕೆಟ್‌ ನಷ್ಟಕ್ಕೆ 257 ರನ್‌ ಬಾರಿಸಿತ್ತು. 258 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 247 ರನ್‌ ಗಳಿಸಿ 10 ರನ್‌ಗಳ ವಿರೋಚಿತವಾಗಿ ಸೋಲೊಪ್ಪಿಕೊಂಡಿತು.

ಕೊನೆವರೆಗೂ ತಿಲಕ್‌‌, ಹಾರ್ದಿಕ್ ಹೋರಾಟ ನಡೆಸಿದರಾದರೂ, ಮುಂಬೈ ಇಂಡಿಯನ್ಸ್‌ಗೆ ಗೆಲುವು ತಂದುಕೊಡುವಲ್ಲಿ ವಿಫಲರಾದರು. ಈ ಮೂಲಕ ಮುಂಬೈ ತಂಡದ ಸೋಲಿನ ಬವಣೆ ಮುಂದುವರಿದಿದ್ದು ಹಾಲಿ ಆವೃತ್ತಿಯಲ್ಲಿ 9ನೇ ಪರಾಜಯಕ್ಕೆ ಒಳಗಾಗಿದೆ. ಈ ಸೋಲಿನಿಂದ ಮುಂಬೈ ಪ್ಲೇಆಫ್‌ ಅರ್ಹತೆ ಅತಂತ್ರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡೆಲ್ಲಿ ಕ್ಯಾಪಿಟಲ್ಸ್ ತಂಡ ಐದನೇ ಗೆಲುವನ್ನು ತನ್ನದಾಗಿಸಿಕೊಂಡು ಒಟ್ಟು 10 ಅಂಕಗಳನ್ನು ಪಡೆದುಕೊಂಡಿದ್ದು ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ. ಇದೇ ವೇಳೆ ಮುಂಬಯಿ ಇಂಡಿಯನ್ಸ್​ ಬಳಗ ಕೇವಲ 6 ಅಂಕಗಳೊಂದಿಗೆ 9ನೇ ಸ್ಥಾನವನ್ನು ಪಡೆದುಕೊಂಡಿತು.

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಹೊರಟ ಮುಂಬೈ ತಂಡಕ್ಕೆ ಉತ್ತಮ ಆರಂಭ ದೊರಕಲಿಲ್ಲ. ರೋಹಿತ್ ಶರ್ಮಾ 8 ರನ್​ಗೆ ಔಟಾದರೆ ಇಶಾನ್ ಕಿಶನ್​ 20 ರನ್​ಗಳಿಗೆ ವಿಕೆಟ್​ ಒಪ್ಪಿಸಿದರು. 45 ರನ್​ಗೆ 2 ವಿಕೆಟ್​ ನಷ್ಟ ಮಾಡಿಕೊಂಡ ಮುಂಬೈಗೆ ಆತಂಕ ಎದುರಾಯಿತು. ಈ ವೇಳೆ ಆಡಲು ಬಂದ ಸೂರ್ಯಕುಮಾರ್ ಯಾದವ್​ 13 ಎಸೆತಕ್ಕೆ 26 ರನ್ ಬಾರಿಸಿ ಮಿಂಚುವ ಸೂಚನೆ ಕೊಟ್ಟರು. ಆದರೆ ಸೂರ್ಯರ ಆಟ ಹೆಚ್ಚು ಹೊತ್ತು ನಡೆಯಲಿಲ್ಲ. ಆದರೆ, ಮತ್ತೊಂದು ಬದಿಯಲ್ಲಿ ತಿಲಕ್ ವರ್ಮಾ ಗಟ್ಟಿಯಾಗಿ ನಿಂತು ಡೆಲ್ಲಿ ಬೌಲರ್​ಗಳನ್ನು ದಂಡಿಸಿದರು. ಅದೇ ರೀತಿ ಹಾಲಿ ಆವೃತ್ತಿಯಲ್ಲಿ ಮೊದಲ ಬ್ಯಾರಿಗೆ ಬ್ಯಾಟಿಂಗ್​ನಲ್ಲಿ ಮಿಂಚಿದ ಹಾರ್ದಿಕ್ ಪಾಂಡ್ಯ 24 ಎಸೆತಕ್ಕೆ 46 ರನ್ ಬಾರಿಸಿದರು.

ನಂತರ ಬಂದ ನೇಹಲ್ ವದೇರಾ 4 ರನ್​ಗೆ ಔಟಾದರು. ಟಿಮ್ ಡೇವಿಡ್ 17 ಎಸೆತಕ್ಕೆ 37 ರನ್ ಬಾರಿಸ ಗೆಲುವಿನ ಸನಿಹಕ್ಕೆ ಬರಲು ನೆರವಾದರು. ಆದರೆ, ಕೊನೆಯಲ್ಲಿ ಮುಂಬೈ ಇಂಡಿಯನ್ಸ್ 10 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಡೆಲ್ಲಿ ಪರ ರಸಿಕ್​ ಸಲಾಂ ಹಾಗೂ ಮುಖೇಶ್ ಕುಮಾರ್​ ತಲಾ 3 ವಿಕೆಟ್​ ಉರುಳಿಸಿ ತಂಡ ಗೆಲುವಿಗೆ ನೆರವಾದರು.

ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಡೆಲ್ಲಿ, ಜೇಕ್​ ಫೇಸರ್​ ಮೆಕ್​ಗುರ್ಕ್​ ಅಬ್ಬರದ ಬ್ಯಾಟಿಂಗ್‌ ನಡೆಸುವ ಮೂಲಕ ಮಿಂಚಿದರು. 27 ಎಸೆತಗಳಲ್ಲಿ 84 ರನ್ ಚಚ್ಚಿದರು. ಅಭಿಷೇಕ್ ಪೊರೆಲ್​ (36 ರನ್​) ಜತೆಗೂಡಿ 114 ರನ್‌ಗಳ ಜೊತೆಯಾಟ ನಡೆಸಿ, ಮಿಂಚಿದರು. ಶಾಯ್​ ಹೋಪ್​ 17 ಎಸೆತಕ್ಕೆ 41 ರನ್, ನಾಯಕ ರಿಷಭ್ ಪಂತ್​ 29 ರನ್ ಬಾರಿಸಿ ಮಿಂಚಿದರೆ, ಟ್ರಿಸ್ಟಾನ್ 25 ಎಸೆತಕ್ಕೆ 48 ರನ್ ಬಾರಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...