ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ | ಟಾಸ್ ಗೆದ್ದ ಭಾರತ; ಸರ್ಫರಾಜ್‌, ಜುರೆಲ್‌ಗೆ ಸ್ಥಾನ

Date:

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದಿನಿಂದ ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ಧದ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಪಂದ್ಯ ಆರಂಭಿಸಿರುವ ಭಾರತ ಒಂದು ಓವರ್‌ನಲ್ಲಿ 6 ರನ್‌ ಗಳಿಸಿದೆ. ರೋಹಿತ್ ಶರ್ಮಾ (5), ಜೈಸ್ವಾಲ್ (0) ಬ್ಯಾಟಿಂಗ್ ಮಾಡುತ್ತಿದ್ದಾರೆ.

ಟೀಂ ಇಂಡಿಯಾ ಆಡುವ 11ರ ಬಳಗದಲ್ಲಿ 4 ಬದಲಾವಣೆಗಳನ್ನು ಮಾಡಲಾಗಿದೆ. ಶ್ರೇಯಸ್‌ ಅಯ್ಯರ್ ಹಾಗೂ ಕೆ ಎಸ್ ಭರತ್‌ ಸ್ಥಾನಕ್ಕೆ ಮುಂಬೈನ ಸರ್ಫರಾಜ್‌ ಖಾನ್‌ ಹಾಗೂ ಧ್ರವ ಜುರೆಲ್ ಅವರನ್ನು ಆಯ್ಕೆ ಮಾಡಲಾಗಿದೆ. ಅಕ್ಸರ್‌ ಪಟೇಲ್ ಬದಲು ರವೀಂದ್ರ ಜಡೇಜಾ ಹಾಗೂ ಮುಕೇಶ್ ಕುಮಾರ್ ಅವರನ್ನು ರಣಜಿ ಆಡಲು ಕಳಿಸಲಾಗಿದ್ದು, ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಸೇರಿಸಿಕೊಳ್ಳಲಾಗಿದೆ.

ಆತಿಥೇಯ ಭಾರತ ತಂಡಕ್ಕೆ ಗುರುವಾರ ಆರಂಭವಾಗಲಿರುವ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಕಟ್ಟುನಿಟ್ಟಾದ ಮತ್ತು ಜಾಣ್ಮೆಯನ್ನು ಸಮನಾಗಿ ಬೆರೆಸಿದ ತಂತ್ರಗಾರಿಕೆಯೊಂದಿಗೆ ಆಡಬೇಕಾದ ಅವಶ್ಯಕತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐದು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1–1ರಿಂದ ಸಮಬಲ ಸಾಧಿಸಿವೆ. ಆತಿಥೇಯ ತಂಡಕ್ಕೆ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಪ್ರಮುಖ ಸಮಸ್ಯೆಯಾಗಿದೆ.

ನಾಯಕ ರೋಹಿತ್ ಶರ್ಮಾ ರನ್‌ಗಳನ್ನು ಗಳಿಸುವಲ್ಲಿ ವಿಫಲರಾಗಿದ್ದಾರೆ. ಅನುಭವಿಗಳಾದ ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ಅವರ ಅನುಪಸ್ಥಿತಿ ಕೂಡ ಕಾಡುತ್ತಿದೆ. ಕೆ.ಎಸ್‌. ಭರತ್ ಅವರು ನಿರೀಕ್ಷೆಗೆ ತಕ್ಕಂತೆ ಆಡದಿರುವುದರಿಂದ ಅವರಿಗೆ ವಿಶ್ರಾಂತಿ ಕೊಟ್ಟು ಜುರೇಲ್‌ಗೆ ಸ್ಥಾನ ನೀಡಲಾಗಿದೆ.

ಹೈದರಾಬಾದಿನಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಭಾರತಕ್ಕೆ ಆಘಾತ ನೀಡಿತ್ತು.  ವಿಶಾಖಪಟ್ಟಣದಲ್ಲಿ ನಡೆದಿದ್ದ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ತಿರುಗೇಟು ನೀಡಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್‌ಗೆ ರೆಡ್ ಕಾರ್ಪೆಟ್, ರೈತರಿಗೆ ಮುಳ್ಳಿನ ಬೇಲಿ- ಇದು ಮೋದಿ ಶೈಲಿ

ತಂಡದ ಯಶಸ್ವಿ ಜೈಸ್ವಾಲ್ ದ್ವಿಶತಕ ಮತ್ತು ಜಸ್‌ಪ್ರೀತ್ ಬೂಮ್ರಾ ಅವರ ಅಮೋಘ ವೇಗದ ಬೌಲಿಂಗ್ ಮುಂದೆ ಇಂಗ್ಲೆಂಡ್ ತಂಡ ತತ್ತರಿಸಿತ್ತು. ಆ ಸೋಲಿಗೆ ಸೇಡು ತೀರಿಸಿಕೊಳ್ಳಲು ಇಂಗ್ಲೆಂಡ್ ಕಾತರದಿಂದ ಕಾಯುತ್ತಿದೆ.

ಬೆನ್‌ ಸ್ಟೋಕ್ಸ್‌ಗೆ 100ನೇ ಪಂದ್ಯ, 500ಕ್ಕೆ ಅಶ್ವಿನ್‌ಗೆ ಒಂದು ವಿಕೆಟ್ ಬಾಕಿ

ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್‌ ಅವರು ತಮ್ಮ 100ನೇ ಟೆಸ್ಟ್ ಪಂದ್ಯವನ್ನು ಗೆದ್ದು ಅವಿಸ್ಮರಣೀಯ ಗೊಳಿಸಿಕೊಳ್ಳುವ ತವಕದಲ್ಲಿದ್ದಾರೆ. ಅನುಭವಿ ಆಫ್‌ಸ್ಪಿನ್ನರ್ ಆರ್. ಅಶ್ವಿನ್ ಅವರಿಗೆ ಟೆಸ್ಟ್‌ ಕ್ರಿಕೆಟ್‌ನಲ್ಲಿ 500 ವಿಕೆಟ್‌ಗಳ ಕ್ಲಬ್ ಸೇರಲು ಇನ್ನೊಂದು ವಿಕೆಟ್ ಮಾತ್ರ ಬಾಕಿ ಇದೆ.

97 ಟೆಸ್ಟ್‌ಗಳನ್ನು ಆಡಿರುವ 37 ವರ್ಷದ ಅಶ್ವಿನ್ ಅವರು ಐದನೂರರ ಗಡಿ ದಾಟಿದ ವಿಶ್ವದ 9ನೇ ಬೌಲರ್ ಆಗಲಿದ್ದಾರೆ. ಅನಿಲ್ ಕುಂಬ್ಳೆ ಅವರ ನಂತರ ಈ ಸಾಧನೆ ಮಾಡಿದ ಭಾರತದ ಸ್ಪಿನ್ನರ್ ಆಗಲಿದ್ದಾರೆ.

ಪಂದ್ಯವಾಡುವ 11ರ ಬಳಗದ ಉಭಯ ತಂಡಗಳು:

ಭಾರತ:

ರೋಹಿತ್ ಶರ್ಮಾ (ನಾಯಕ), ಜಸ್‌ಪ್ರೀತ್ ಬೂಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟೀದಾರ್, ಸರ್ಫರಾಜ್ ಖಾನ್, ಧ್ರುವ ಜುರೆಲ್, (ವಿಕೆಟ್‌ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್,.

ಇಂಗ್ಲೆಂಡ್:

ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹಮದ್, ಜೇಮ್ಸ್ ಆ್ಯಂಡರ್ಸನ್, ಬೆನ್ ಡಕೆಟ್, ಜಾಕ್‌ ಕ್ರಾಲಿ, ಬೆನ್ ಫೋಕ್ಸ್ (ವಿಕೆಟ್‌ಕೀಪರ್), ಟಾಮ್ ಹಾರ್ಟ್ಲಿ, ಓಲಿ ಪೋಪ್, ಜೋ ರೂಟ್, ಮಾರ್ಕ್ ವುಡ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...