ಐಪಿಎಲ್‌ 2024 | ಡೆಲ್ಲಿ ಕ್ಯಾಪಿಟಲ್ಸ್‌ಗೆ ಮೊದಲ ಗೆಲುವು; ಕೊನೆಯಲ್ಲಿ ಅಭಿಮಾನಿಗಳಿಗೆ ರಸದೌತಣ ನೀಡಿದ ಧೋನಿ

Date:

ಸಿಎಸ್‌ಕೆ ತಂಡದ ಮಾಜಿ ನಾಯಕ ಎಂ ಎಸ್ ಧೋನಿ ಅವರ ಸ್ಫೋಟಕ ಬ್ಯಾಟಿಂಗ್ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ರನ್‌ಗಳ ಜಯಗಳಿಸಿತು. ಈ ಮೂಲಕ 2024ರ ಐಪಿಎಲ್ ಆವೃತ್ತಿಯಲ್ಲಿ ರಿಷಬ್ ಪಂತ್ ನೇತೃತ್ವದ ಡೆಲ್ಲಿ ತಂಡ ಗೆಲುವಿನ ಖಾತೆ ತೆರೆಯಿತು.

ವಿಶಾಖಪಟ್ಟಣದ ಡಾ. ವೈ ಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತ್ತು. 192 ರನ್‌ಗಳ ಗುರಿ ಪಡೆದ ಸಿಎಸ್‌ಕೆ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 171 ರನ್ ಬಾರಿಸಿ ಸೋಲು ಒಪ್ಪಿಕೊಂಡಿತು.

ಡೆವಿಡ್ ವಾರ್ನರ್ , ಪೃಥ್ವಿ ಶಾ ಹಾಗೂ ರಿಷಬ್ ಪಂತ್ ಅಬ್ಬರ, ಪತಿರಾಣ ಅದ್ಬುತ ಕ್ಯಾಚ್, 42ನೇ ವಯಸ್ಸಿನಲ್ಲೂ ಅದ್ಭುತ ಆಟವಾಡಿದ ಧೋನಿ ಇವೆಲ್ಲವೂ ಅಭಿಮಾನಿಗಳ ಕಣ್ಣಿಗೆ ರಸದೌತಣ ನೀಡಿತು. ಕೊನೆಯ ಓವರ್‌ನಲ್ಲಿ ಸಿಕ್ಸರ್-ಬೌಂಡರಿ ಬಾರಿಸಿದ ಎಂಎಸ್‌ಡಿ ಒಂದೇ ಓವರ್‌ನಲ್ಲಿ 20 ರನ್ ಪೇರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಸ್‌ಕೆ ಪರ ನಾಯಕ ರುತುರಾಜ್ 1 , ರಚಿನ್ ರವಿಂದ್ರ 2 , ಅಜಿಂಕ್ಯಾ ರಹಾನ್ 45 ರನ್, ಡೇರಿಲ್ ಮಿಚೆಲ್ 34 , ಶಿವಂ ದುಬೆ 18 , ರವೀಂದ್ರ ಜಡೇಜಾ 21 ರನ್ ಗಳಿಸಿದರೆ, 231 ಸ್ಟ್ರೈಕ್‌ ರೇಟ್‌ನಲ್ಲಿ ಬ್ಯಾಟ್ ಬೀಸಿದ ಧೋನಿ 16 ಎಸೆತಗಳಲ್ಲಿ 37 ರನ್ ಬಾರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಕಾಲದಲ್ಲಿ ಮೋದಿಯ ಬಾಂಡ್ ಭಯೋತ್ಪಾದನೆ

ಇದಕ್ಕೂ ಮೊದಲು ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಿಂದಲೇ ಸ್ಫೋಟಕ ಇನ್ನಿಂಗ್ಸ್ ಶುರು ಮಾಡಿದ ಡೆಲ್ಲಿ ತಂಡ ಸಿಎಸ್‌ಕೆ ಬೌಲರ್‌ಗಳನ್ನು ದಂಡಿಸಲು ಶುರು ಮಾಡಿದರು.

ಮೊದಲ ವಿಕೆಟ್‌ಗೆ ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಜೋಡಿ 9.3 ಓವರ್‌ಗಳಲ್ಲಿ 93 ರನ್‌ಗಳ ಜೊತೆಯಾಟ ನೀಡಿತ್ತು. ಸ್ಫೋಟಕ ಬ್ಯಾಟಿಂಗ್ ಮೂಲಕ ಅರ್ಧಶತಕ ಸಿಡಿಸಿದ್ದ ವಾರ್ನರ್ ಮತ್ತೊಂದು ಸ್ಫೋಟಕ ಹೊಡೆತಕ್ಕೆ ಮುಂದಾಗಿ ಮಥೀಶ ಪತಿರಾಣಗೆ ಕ್ಯಾಚ್ ನೀಡಿದರು. ಡೇವಿಡ್ ವಾರ್ನರ್ 35 ಚೆಂಡುಗಳಲ್ಲಿ 52 ರನ್ ಬಾರಿಸಿ ಔಟಾದರು.

ಇದರ ಬೆನ್ನಲ್ಲೇ ಪೃಥ್ವಿ ಶಾ ವಿಕೆಟ್ ಪತನಗೊಂಡಿತು ಕೇವಲ 27 ಎಸೆತದಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 43 ರನ್ ಸಿಡಿಸಿ ಶಾ ಪೆವಿಲಿಯನ್‌ಗೆ ತೆರಳಿದರು.

ಬಳಿಕ ಕಣಕ್ಕಿಳಿದ ನಾಯಕ ರಿಷಬ್ ಪಂತ್ ಬ್ಯಾಟಿಂಗ್ ಸಹ ಡೆಲ್ಲಿ ತಂಡದ ಕೈಹಿಡಿಯಿತು. 14 ದಿನಗಳ ಬಳಿಕ ಐಪಿಎಲ್ ಅಂಗಳದಲ್ಲಿ ಆಡುತ್ತಿರುವ ಪಂತ್ ಆಕರ್ಷಕ ಅರ್ಧಶತಕ ಸಿಡಿಸಿ ಗಮನ ಸೆಳೆದರು. ಪಂತ್ 31 ಎಸೆತದಲ್ಲಿ 51 ರನ್ (3 ಸಿಕ್ಸರ್, 4 ಬೌಂಡರಿ) ಸಿಡಿಸಿದರು.

ಆರಂಭಿಕರು ಹಾಗೂ ಪಂತ್ ವಿಕೆಟ್ ಕಳೆದುಕೊಂಡ ಬಳಿಕ ಡೆಲ್ಲಿ ತಂಡದ ರನ್ ವೇಗದ ಗತಿಯೂ ಕಡಿಮೆಯಾಯಿತು. ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಅಬ್ಬರದಿಂದ ಡೆಲ್ಲಿ 191 ರನ್‌ಗಳ ಬೃಹತ್ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು.

ಚೆನ್ನೈ ಪರ ಮಥೀಶ ಪತಿರಾಣ 3 ವಿಕೆಟ್ ಕಬಳಿಸಿ ಮಿಂಚಿದರು. ರವೀಂದ್ರ ಜಡೇಜಾ ಹಾಗೂ ಮುಸ್ತಫಿಜೂರ್ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...