ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಬಳಿಕ ಭಾರತ ತಂಡಕ್ಕೆ ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿ ನೇಮಕವಾಗಲಿದ್ದಾರಂದು ವರದಿಯಾಗಿದೆ.
ಟೀಮ್ ಇಂಡಿಯಾ ಹೆಡ್ ಕೋಚ್ ಸಂಬಂಧ ಗೌತಮ್ ಗಂಭೀರ್ ಹಾಗೂ ಬಿಸಿಸಿಐ ನಡುವೆ ಒಪ್ಪಂದ ಆಗಿದೆ ಎಂದು ಐಪಿಎಲ್‌ನ ಫ್ರಾಂಚೈಸಿ ಮಾಲೀಕರೊಬ್ಬರು ‘ಕ್ರಿಕ್‌ಬಝ್’ಗೆ ತಿಳಿಸಿದ್ದಾರೆ. ಹಾಗಾಗಿ ಶೀಘ್ರದಲ್ಲಿಯೇ ಬಿಸಿಸಿಐ ಅಧಿಕೃತವಾಗಿ ಪ್ರಕಟಿಸಲಿದೆ ಎಂದು ವರದಿಯಾಗಿದೆ.
2024ರ ಐಪಿಎಲ್ ಟೂರ್ನಿಯಲ್ಲಿ ಗೌತಮ್ ಗಂಭೀರ್ ಮೆಂಟರ್ ಆಗಿದ್ದ ಕೋಲ್ಕತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ ಆಗಿದೆ. ಫೈನಲ್ ಪಂದ್ಯದ ಬಳಿಕ ಜಯ್ ಶಾ ಹಾಗೂ ಗೌತಮ್ ಗಂಭೀರ್ ಮಾತುಕತೆ ನಡೆಸುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವೈರಲ್ ಬೆನ್ನಲ್ಲೇ ಗೌತಮ್ ಗಂಭೀರ್, ಟೀಮ್ ಇಂಡಿಯಾ ಕೋಚ್ ಆಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.
Jay Shah announces 25 Lakhs prize money each for the goundsmen and curators of 10 stadiums in IPL 2024.
– The BCCI under Jay Shah is doing some commendable jobs! 👏 pic.twitter.com/CBxHyJT6v5
— Mufaddal Vohra (@mufaddal_vohra) May 27, 2024
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಪರಸ್ಪರ ಮಾತುಕತೆ ನಡೆಸಿದ್ದರು. ಈ ಮಾತುಕತೆಯ ವೇಳೆ, ‘ದೇಶಕ್ಕಾಗಿ ನೀವು ಒಪ್ಪಿಕೊಳ್ಳಬೇಕಿದೆ(ದೇಶ್ ಕೇಲಿಯೇ ಕರ್ನಾ ಹೇ)’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಗೌತಮ್ ಗಂಭೀರ್ ಅವರಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.
ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಿಸುತ್ತಿದ್ದು, 2023ರ ಏಕದಿನ ವಿಶ್ವಕಪ್ ವೇಳೆಗೆ ರಾಹುಲ್ ದ್ರಾವಿಡ್ ಅವರ ಅವಧಿ ಮುಗಿದಿದೆ. ಬಿಸಿಸಿಐ ದ್ರಾವಿಡ್ ಅವರ ಅವಧಿಯನ್ನುಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ 2024ರ ಟಿ20 ವಿಶ್ವಕಪ್ ತನಕ ಮುಂದುವರಿಸಿದೆ.
Jay Shah trying hard to make Gautam Gambhir as India’s next head coach.🥲 pic.twitter.com/EHRF0PzHeX
— 𝐇𝐲𝐝𝐫𝐨𝐠𝐞𝐧 𝕏 (@ImHydro45) May 27, 2024
ಭಾರತ ತಂಡದಲ್ಲಿ ರಾಹುಲ್ ದ್ರಾವಿಡ್ ಅವರ ಸ್ಥಾನವನ್ನು ತುಂಬಲು ಉತ್ಸುಕನಾಗಿದ್ದೇನೆಂದು ಗೌತಮ್ ಗಂಭೀರ್ ಅವರು, ತಮ್ಮ ಆತ್ಮೀಯ ಸ್ನೇಹಿತರ ಬಳಿ ಹೇಳಿಕೊಂಡಿರುವುದಾಗಿ ತಿಳಿದುಬಂದಿದೆ.
ಐಪಿಎಲ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂರು ಬಾರಿ ಕೂಡ ಗೌತಮ್ ಗಂಭೀರ್ ಕೆಕೆಆರ್ ತಂಡದ ಭಾಗವಾಗಿದ್ದರು ಎಂಬುದು ವಿಶೇಷ. ಅಂದರೆ 2012 ಮತ್ತು 2014 ರಲ್ಲಿ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್ ಚಾಂಪಿಯನ್ ಪಟ್ಟಕ್ಕೇರಿದರೆ, 2024 ರಲ್ಲಿ ಗೌತಿ ಅವರ ಮಾರ್ಗದರ್ಶನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಹೀಗಾಗಿಯೇ ಟಿ20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ಅವರ ಉತ್ತರಾಧಿಕಾರಿಯಾಗಿ ಗೌತಮ್ ಗಂಭೀರ್ ಅವರನ್ನು ನೇಮಿಸಲು ಬಿಸಿಸಿಐ ಆಸಕ್ತಿವಹಿಸಿದೆ.
ಇದನ್ನು ಓದಿದ್ದೀರಾ? ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ನರೇಂದ್ರ ಮೋದಿ, ಅಮಿತ್ ಶಾ, ಸಚಿನ್ !
ಟೀ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ಕರೆಯಲಾಗಿದ್ದ ಅರ್ಜಿಯ ಅವಧಿ ಸೋಮವಾರ ಮುಗಿದಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ.
An IPL owner confirms Gautam Gambhir’s appointment as India’s Head Coach is a done deal.
– Announcement will be made soon. (Cricbuzz). pic.twitter.com/8kiBxM7pGX
— Mufaddal Vohra (@mufaddal_vohra) May 28, 2024





